‘ಒಳಿತು ಮಾಡು ಮನುಸ…’ ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ ‘ಫ್ರಾಡ್ ಋಷಿ’ ಚಿತ್ರ ಪ್ರಾರಂಭವೇ ಆಗಿಲ್ಲ. ಆಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಎರಡನೇ ಹಾಡು ‘ಇವನೇ ಇವನೇ ಫ್ರಾಡು ಋಷಿ…’ ಇತ್ತೀಚೆಗೆ ಬಿಡುಗಡೆಯಾಗಿದೆ.
ನಮ್ ಋಷಿ ಬರೆದು ಶ್ರೀಗುರು ಸಂಗೀತ ನೀಡಿರುವ ಹಾಗೂ ಸೋಮಶೇಖರ್ ಅವರು ಹಾಡಿರುವ ಈ ಹಾಡನ್ನು ನಿರ್ಮಾಪಕ ಕೆ.ಮಂಜು ಬಿಡುಗಡೆ ಮಾಡಿದ್ದಾರೆ. ನಮ್ ಋಷಿ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಈ ಹಾಡು ಬಿಡುಗಡೆಯಾಗಿದೆ.
ಇದನ್ನೂ ಓದಿ:-ಐತಿಹಾಸಿಕ ಚಿತ್ರಕ್ಕೆ ಶ್ರೀಮುರಳಿ ನಾಯಕ: ಪುನೀತ್ ರುದ್ರನಾಗ್ ನಿರ್ದೇಶನ
ಸಿನಿಮಾ ಮಾಡುವುದಕ್ಕೆ ದುಡ್ಡು ಬೇಕಾಗಿಲ್ಲ. ಒಳ್ಳೆಯ ತಂಡ ಬೇಕು ಎನ್ನುವ ಋಷಿ, ‘ಒಳ್ಳೆಯ ತಂಡವೆಂದರೆ, ಒಬ್ಬರನ್ನೊಬ್ಬರು ಪ್ರೀತಿಸುವಂತಿರಬೇಕು. ಅವರು ಬೆಳೆದರೆ ನಾವು ಖುಷಿಪಡಬೇಕು. ನಾವು ಬೆಳೆದರೆ ಅವರು ಖುಷಿಪಡಬೇಕು. ಸಣ್ಣ ವಿಷಯಗಳಿಗೆ ಕಿತ್ತಾಟಗಳಾಗುತ್ತವೆ. ಅದನ್ನೆಲ್ಲಾ ಮೀರಿದ ಒಂದು ತಂಡವಿರಬೇಕು. ನಾನು ಕಲಾವಿದರಿಗೆ ದುಡ್ಡು ಕೊಟ್ಟು ನಟನೆ ಮಾಡಿಸುವುದಿಲ್ಲ. ಕಲಾವಿದರಲ್ಲಿ ಎರಡು ತರಹದ ಕಲಾವಿದರಿರುತ್ತಾರೆ. ಕೆಲವರು ವೃತ್ತಿಪರ ಕಲಾವಿದರು. ಇನ್ನೂ, ಕೆಲವರು ಪ್ಯಾಷನ್‍ಗಾಗಿ ಅಭಿನಯ ಮಾಡುತ್ತಾರೆ. ಅವರಿಗೆ ಹಣದ ಅವಶ್ಯಕತೆ ಇರುವುದಿಲ್ಲ. ವೃತ್ತಿಪರ ಕಲಾವಿದರಿಗೆ ದುಡ್ಡು ಕೊಡಬೇಕಾಗುತ್ತದೆ. ಆದರೆ, ಪ್ಯಾಷನ್ ಇರುವವರನ್ನು ಆಯ್ಕೆ ಮಾಡಿಕೊಂಡರೆ, ಅವರಿಗೆ ಹಣ ನೀಡದಿದ್ದರೂ ಆಗುತ್ತದೆ. ಜೊತೆಗೆ ಅವರಿಂದ ಸಹಕಾರವೂ ಸಿಗುತ್ತದೆ. ನಾನು ಅಂಥವರನ್ನೇ ಆಯ್ಕೆ ಮಾಡಿಕೊಂಡು ಚಿತ್ರ ಮಾಡುತ್ತಿದ್ದೇನೆ’ ಎಂದರು.
‘ಫ್ರಾಡ್ ಋಷಿ’ ಚಿತ್ರೀಕರಣ ಅಕ್ಟೋಬರ್ ತಿಂಗಳಲ್ಲಿ ಶುರುವಾಗಿ, ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತದಂತೆ. ಈ ಕುರಿತು ಮಾತನಾಡುವ ಅವರು, ‘ಈ ಚಿತ್ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತದೆ. ಅಕ್ಟೋಬರ್.10ರಿಂದ ಚಿತ್ರೀಕರಣ ಶುರುವಾಗಲಿದೆ. ಇದು ದೊಡ್ಡ ಬಜೆಟ್ ಚಿತ್ರವಲ್ಲ. ಆದರೆ, ಕಂಟೆಂಟ್ ಬಹಳ ಚೆನ್ನಾಗಿದೆ. ಚಿತ್ರದಲ್ಲಿ ಎಂಟು ಹಾಡುಗಳಿವೆ. ನನ್ನ ಮೂರು ಯಶಸ್ವಿ ಹಾಡುಗಳನ್ನು ಈ ಚಿತ್ರದಲ್ಲಿ ಬಳಸಿಕೊಳ್ಳುತ್ತಿದ್ದೇನೆ. ಕಡಿಮೆ ಬಜೆಟ್‍ನಲ್ಲಿ ಈ ಚಿತ್ರ ಮಾಡುತ್ತಿದ್ದೇನೆ. ಶಂಕರ್ ಛಾಯಾಗ್ರಹಣ ಮತ್ತು ಶ್ರೀಗುರು ಸಂಗೀತ ಈ ಚಿತ್ರಕ್ಕಿದೆ. ಒಂದೊಳ್ಳೆಯ ತಂಡ ಕಟ್ಟಿದ್ದೇನೆ. ಚಿತ್ರದಲ್ಲಿ ನಾಲ್ವರು ನಾಯಕಿಯರಿದ್ದಾರೆ. ಇದುವರೆಗೂ ಯಾರೂ ಮುಟ್ಟದ ಮತ್ತು ಎಲ್ಲರೂ ಹೇಳುವುದಕ್ಕೆ ಹೆದರುವ ಒಂದು ವಿಷಯವನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇನೆ. ಇದೊಂದು ಸೂಕ್ಷ್ಮ ವಿಷಯವಿರುವ ಕಥೆ. ಜನರಿಗೆ ಚಿತ್ರ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರು.
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…