darshan and sudeep
ಕಳೆದ ವರ್ಷ ದರ್ಶನ್ ಬಂಧನವಾದ ನಂತರ ಸುದೀಪ್ ಮಾತನಾಡಿದ್ದರು. ತಮಗೆ ಕಾನೂನು, ಸರ್ಕಾರದ ಮೇಲೆ ನಂಬಿಕೆಯಿದೆ, ಆಗಬೇಕಾಗಿರೋದು ಆಗಿಯೇ ಆಗುತ್ತದೆ ಎಂದಿದ್ದರು. ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ನಟ ದರ್ಶನ್, ಮತ್ತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ವಿಷಯವಾಗಿ ಸುದೀಪ್ ಮತ್ತೊಮ್ಮೆ ಕೆಲವು ವಿಷಯಗಳನ್ನು ಹಂಚಿಕೊಳ್ಳುವುದರ ಜೊತೆಗೆ, ಅವರ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.
ಇದನ್ನು ಓದಿ:ದರ್ಶನ್‌ಗೆ ಮತ್ತೆ ಜೈಲು: ಅಭಿಮಾನಿಗಳಲ್ಲಿ ತೀವ್ರ ಬೇಸರ
ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸುದೀಪ್, ‘ಅವರ ಸಿನಿಮಾಗೆ ಒಳ‍್ಳೆಯದಾಗಲಿ. ಅವರಿಗೆ ಅವರದ್ದೇ ಆದ ನೋವು ಇರುತ್ತದೆ. ಈ ವಿಷಯದಲ್ಲಿ ನಾವು ಮಾತನಾಡುವುದು ತಪ್ಪಾಗುತ್ತದೆ. ಸರ್ಕಾರ, ಕಾನೂನು ಅಂತ ಬಂದಾಗ ಅವರೇನು ಮಾಡಬೇಕು ಅದನ್ನ ಮಾಡುತ್ತಿದ್ದಾರೆ. ಅದಕ್ಕೂ ನಾವು ಅಡ್ಡಿ ಬರಬಾರದು. ಯಾರೂ ಕೈಕಟ್ಟಿಕೊಂಡು ಸುಮ್ಮನೇ ಕುಳಿತಿರುವುದಿಲ್ಲ. ಆದರೆ, ಕೆಲವೊಂದಕ್ಕೆ ನಾನು ತಲೆಹಾಕೋಕೆ ಹೋಗಲ್ಲ. ಏಕೆಂದರೆ, ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ. ಅದರಿಂದ ಅಂತರ ಜಾಸ್ತಿಯಾಗುತ್ತದೆ’ ಎಂದರು.
ಯಾರದ್ದೋ ಮಾತು ಕೇಳಿ ದೂರಾಗಿಲ್ಲ ಎಂದ ಸುದೀಪ್, ‘ನಾವೇನು ಚಿಕ್ಕವರಲ್ಲ, ನಾವು ದೂರಾಗಿದ್ದು ಯಾಕೆ ಅನ್ನೋದು ನಮಗೆ ಗೊತ್ತಿದೆ. ನಾವಿಬ್ಬರು ಯಾಕೆ ಮಾತಾಡುವುದಿಲ್ಲ ಎಂದರೆ ಅದಕ್ಕೆ ಕೆಲವು ಕಾರಣಗಳಿವೆ. ಯಾರೂ ಆ ಕಾರಣಗಳ ಬಗ್ಗೆ ಕೇಳಲ್ಲ. ಆದರೆ, ನಮಗೆ ಗೊತ್ತಿರುತ್ತದೆ. ಇನ್ನು, ಯಾರದ್ದೋ ಮಾತು ಕೇಳಿಕೊಂಡು ಹೀಗೆ ಮಾಡುವಷ್ಟು ನಾವು ಚಿಕ್ಕವರಲ್ಲ. ನಮಗೆ ಕೆಲವು ವಿಷಯಗಳು ಅರ್ಥ ಆಗುತ್ತವೆ. ನಾವ್ಯಾಕೆ ಹೀಗೀದ್ದೀವಿ ಎಂಬ ಸತ್ಯ ನಮಗೆ ಗೊತ್ತಿರುತ್ತದೆ. ಸೂರ್ಯ, ಚಂದ್ರ ಎರಡೂ ಅದರ ಜಾಗದಲ್ಲಿ ಇದ್ದರೆ ಚೆನ್ನ’ ಎಂದರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…