ಮನರಂಜನೆ

‘ಕ್ರೆಡಿಟ್ ಕುಮಾರ’ನಾದ ಪತ್ರಕರ್ತ ಹರೀಶ್‍; ಚಿತ್ರರಂಗಕ್ಕೆ ನಾಯಕನಾಗಿ ಎಂಟ್ರಿ

ಸಿನಿಮಾ ಪತ್ರಿಕೋದ್ಯಮದಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿರುವ ಹಲವರು ನಟನೆ, ನಿರ್ದೇಶನ, ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಪಬ್ಲಿಕ್‍ ಟಿವಿಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಹರೀಶ್‍ ಸೀನಪ್ಪ ಸಹ ಸೇರಿದ್ದಾರೆ. ಹರೀಶ್‍, ಇದೀಗ ‘ಕ್ರೆಡಿಟ್‍ ಕುಮಾರ’ ಎಂಬ ಸಿನಿಮಾಗೆ ನಾಯಕನಾಗಿ, ಈ ಚಿತ್ರ ಬುಧವಾರ ಪ್ರಾರಂಭವಾಗಿದೆ.

ಕಂಠೀರವ ಸ್ಟುಡಿಯೋದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ‘ಆಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‍ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ನಿರ್ದೇಶಕ ಎಸ್. ಮಹೇಂದರ್, ನಿರ್ಮಾಪಕ ಉದಯ್ ಮೆಹ್ತಾ, ‘ಬಾಂಡ್ ರವಿ’ ಖ್ಯಾತಿಯ ಪ್ರಮೋದ್ ಮುಂತಾದವರು ಹಾಜರಿದ್ದು, ಚಿತ್ರತಂಡಕ್ಕೆ ಶುಭ ಕೋರಿದರು.

ಈ ಹಿಂದೆ ‘ಬಾಂಡ್‍ ರವಿ’ ಚಿತ್ರವನ್ನು ನಿರ್ದೇಶಿಸಿದ್ದ ಪ್ರಜ್ವಲ್, ಈಗ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಪ್ರಜ್ವಲ್‍ ಈ ಹಿಂದೆ ಎಸ್‍. ಮಹೇಂದರ್‍ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರಂತೆ. ಚಿತ್ರದ ಕುರಿತು ಮಾತನಾಡುವ ಪ್ರಜ್ವಲ್, ‘’ಬಾಂಡ್‍ ರವಿ’ ಚಿತ್ರಕ್ಕೆ ಸಿಕ್ಕ ಉತ್ತೇಜನದಿಂದ ಈ ಚಿತ್ರ ಮಾಡುತ್ತಿದ್ದೇನೆ. ಸಾಲ ಮಾಡಿಕೊಂಡು ಬದುಕುವ ಒಬ್ಬ ಯುವಕನ ಕಥೆ ಇದು. ಹರೀಶ್ ಅವರಿಗಂತನೇ ಈ ಕಥೆ ಮಾಡಿದ್ದು. ಕಥೆ ಬಹಳ ಚೆನ್ನಾಗಿ ಮೂಡಿಬಂದಿದೆ’ ಎಂದರು.

ನಾಯಕ ಹರೀಶ್ ಮಾತನಾಡಿ, ‘ನಟನಾಗಿ ಇದು ನನ್ನ ಮೊದಲ ಹೆಜ್ಜೆ. 2009ರಲ್ಲಿ ಮೊದಲು ಕೇಬಲ್ ಚಾನಲ್ ನಲ್ಲಿ ಕೆಲಸ ಮಾಡುವಾಗ ಬಣ್ಣ ಹಚ್ಚಿದ್ದೆ. ಅಂದು ಒಬ್ಬ ನಟನಾಗಬೇಕು ಅಂತ ಅಂದುಕೊಂಡಿದ್ದೆ. ಈಗ ಆ ಕನಸು ನನಸಾಗಿದೆ. ಈ ಅನುಭವ ನನಗೆ ಬೇಕಿತ್ತು, ಈ ಅನುಭವ ಇಲ್ಲ ಅಂದಿದ್ದರೆ ನನ್ನ ಜೀವನ ಅಪೂರ್ಣ ಆಗುತ್ತಿತ್ತು’ ಎಂದರು.

ಹರೀಶ್‍ಗೆ ನಾಯಕಿಯಾಗಿ ಪಾಯಲ್‍ ಚೆಂಗಪ್ಪ ನಟಿಸುತ್ತಿದ್ದಾರೆ. ಈ ಹಿಂದೆ ಕೆಲವು ಕಿರುಚಿತ್ರಗಳಲ್ಲಿ ನಟಿಸಿದ್ದ ಪಾಯಲ್‍, ಇದೇ ಮೊದಲ ಬಾರಿಗೆ ಚಲನಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ‘ಈ ಚಿತ್ರದಲ್ಲಿ ಭೂಮಿ ಎನ್ನುವ ಪಾತ್ರದಲ್ಲಿ ಮಾಡುತ್ತಿದ್ದೇನೆ. ಮಿಡ್ಲ್ ಕ್ಲಾಸ್ ಹುಡುಗಿಯಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಚಿತ್ರದಲ್ಲಿ ನನ್ನದು ಬ್ಯೂಟಿಶಿಯನ್‍ ನಟಿಸುತ್ತಿದ್ದೇನೆ’ ಎಂದರು.

‘ಕ್ರೆಡಿಟ್‍ ಕುಮಾರ’ ಚಿತ್ರಕ್ಕೆ ಧರ್ಮ ವಿಶ್‍ ಸಂಗೀತ ಸಂಯೋಜಿಸತ್ತಿದ್ದಾರೆ. ಈ ಚಿತ್ರದಲ್ಲಿ ಮೂರು ಹಾಡುಗಳಿದ್ದು, ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರುವಂತೆ ಹಾಗೂ ‘ಭರ್ಜರಿ’ ಚೇತನ್ ಸಾಹಿತ್ಯ ಬರೆಯುತ್ತಿದ್ದಾರೆ.

ಭೂಮಿಕಾ

Recent Posts

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

1 hour ago

ರೈಲು ಪ್ರಯಾಣ ದರ ಹೆಚ್ಚಳ : 500 ಕಿ.ಮೀ.ಗೆ 10ರೂ ಏರಿಕೆ

ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ,…

1 hour ago

‌ಗುಂಡ್ಲುಪೇಟೆ | ಬಾಳೆ ತೋಟದಲ್ಲಿ ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…

1 hour ago

ವನ್ಯಜೀವಿ ಛಾಯಾಗ್ರಹಕರಾಗುವ ಮೊದಲು ಕಾಡಿನ ಭಾಷೆ ಅರಿಯಿರಿ : ಕೃಪಾಕರ್‌ ಸೇನಾನಿ

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…

1 hour ago

ಶಾಲಾ ಮಕ್ಕಳಿಂದ ಹೆರಿಟೇಜ್‌ ಫ್ಲ್ಯಾಶ್‌ಮೊಬ್‌ ಪ್ರದರ್ಶನ : ಮನಗೆದ್ದ ಹೆರಿಟೇಜ್ ಟ್ರೆಷರ್ ಹಂಟ್

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…

2 hours ago

ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…

2 hours ago