ಮನರಂಜನೆ

ಘೋಷಣೆಯಾಯ್ತು #NTRNeel ಚಿತ್ರದ ಬಿಡುಗಡೆ ದಿನಾಂಕ

ತೆಲುಗಿನ ಜನಪ್ರಿಯ ನಟ ಜ್ಯೂನಿಯರ್ ಎನ್‍.ಟಿ.ಆರ್ ಅಭಿನಯದಲ್ಲಿ ಪ್ರಶಾಂತ್‍ ನೀಲ್‍ ಒಂದು ಚಿತ್ರ ನಿರ್ದೇಶಿಸುತ್ತಿರುವುದು ಹಳೆಯ ಸುದ್ದಿ. ಮಂಗಳೂರಿನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಇತ್ತೀಚಿಗೆ ಜ್ಯೂನಿಯರ್‍ ಎನ್‍.ಟಿ.ಆರ್ ಭಾಗವಹಿಸಿದ್ದೂ ಆಗಿದೆ, ಚಿತ್ರೀಕರಣ ಭರದಿಂದ ಸಾಗುತ್ತಿದೆ.

ಈ ಮಧ್ಯೆ, ಚಿತ್ರತಂಡದಿಂದ ಒಂದು ಮಹತ್ವದ ವಿಷಯ ಹೊರಬಿದ್ದಿದೆ. ಅದೇನೆಂದರೆ, ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯವನ್ನು ಚಿತ್ರತಂಡದವರು ಬಹಿರಂಗಗೊಳಿಸಿದ್ದಾರೆ. ಚ

ಇನ್ನೂ ಹೆಸರು ಘೋಷಣೆಯಾಗದ ಈ ಹೊಸ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಮತ್ತು NTR ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಕಲ್ಯಾಣ್ ರಾಮ್ ನಂದಮೂರಿ, ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಮತ್ತು ಹರಿಕೃಷ್ಣ ಕೊಸರಾಜು ನಿರ್ಮಿಸುತ್ತಿದ್ದಾರೆ.

ಈ ಚಿತ್ರವು ತೆಲುಗಿನಲ್ಲಿ ನಿರ್ಮಾಣವಾಗುತ್ತಿದ್ದು, ಕನ್ನಡ, ತಮಿಳು, ಹಿಂದಿ, ಮತ್ತು ಮಲಯಾಳಂ ಭಾಷೆಗಳಲ್ಲಿ ಡಬ್‍ ಆಗಿ ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, ಈ ಹಿಂದೆ ಪ್ರಶಾಂತ್‍ ನೀಲ್‍ ಜೊತೆಗೆ ಕೆಲಸ ಮಾಡಿದ್ದ ಛಾಯಾಗ್ರಾಹಕ ಭುವನ್‍ ಗೌಡ ಮತ್ತು ಸಂಗೀತ ನಿರ್ದೇಶಕ ರವಿ ಬಸ್ರೂರು ಈ ಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ. ವಿಶೇಷವೆಂದರೆ, ಕನ್ನಡದ ರುಕ್ಮಿಣಿ ವಸಂತ್‍ ಈ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಚಿತ್ರತಂಡದಿಂದ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಈಗಾಗಲೇ ಜ್ಯೂನಿಯರ್‍ ಎನ್‌.ಟಿ.ಆರ್‌ ಅಭಿಮಾನಿಗಳ ವಲಯದಲ್ಲಿ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ಸದ್ಯಕ್ಕೆ ಚಿತ್ರದ ಹೆಸರನ್ನು ಚಿತ್ರತಂಡದವರು ಇನ್ನೂ ಅಧಿಕೃತವಾಗೊ ಘೋಷಿಸಲಾಗಿಲ್ಲ. ಆದರೆ, ಮೂಲಗಳ ಪ್ರಕಾರ, ಚಿತ್ರಕ್ಕೆ ‘ಡ್ರ್ಯಾಗನ್‍’ ಎಂಬ ಹೆಸರನ್ನು ಇಡುವ ಸಾಧ್ಯತೆ ಇದೆಯಂತೆ.

ಜ್ಯೂನಿಯರ್ ಎನ್‍.ಟಿ.ಆರ್ ತಮ್ಮ ಹುಟ್ಟುಹಬ್ಬವನ್ನು ಇದೇ ಮೇ 20ರಂದು ಆಚರಿಸಿಕೊಳ್ಳುತ್ತಿದ್ದು, ಅಂದು ಚಿತ್ರದ ಮೊದಲ ನೋಟ ಅಥವಾ ಟೀಸರ್‍ ಬಿಡುಗಡೆ ಆಗುವ ನಿರೀಕ್ಷೆ ಇದೆ.

ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

1 hour ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

4 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

6 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

6 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

6 hours ago