junior ntr new movie
ತೆಲುಗಿನ ಜನಪ್ರಿಯ ನಟ ಜ್ಯೂನಿಯರ್ ಎನ್.ಟಿ.ಆರ್ ಅಭಿನಯದಲ್ಲಿ ಪ್ರಶಾಂತ್ ನೀಲ್ ಒಂದು ಚಿತ್ರ ನಿರ್ದೇಶಿಸುತ್ತಿರುವುದು ಹಳೆಯ ಸುದ್ದಿ. ಮಂಗಳೂರಿನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಇತ್ತೀಚಿಗೆ ಜ್ಯೂನಿಯರ್ ಎನ್.ಟಿ.ಆರ್ ಭಾಗವಹಿಸಿದ್ದೂ ಆಗಿದೆ, ಚಿತ್ರೀಕರಣ ಭರದಿಂದ ಸಾಗುತ್ತಿದೆ.
ಈ ಮಧ್ಯೆ, ಚಿತ್ರತಂಡದಿಂದ ಒಂದು ಮಹತ್ವದ ವಿಷಯ ಹೊರಬಿದ್ದಿದೆ. ಅದೇನೆಂದರೆ, ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯವನ್ನು ಚಿತ್ರತಂಡದವರು ಬಹಿರಂಗಗೊಳಿಸಿದ್ದಾರೆ. ಚ
ಇನ್ನೂ ಹೆಸರು ಘೋಷಣೆಯಾಗದ ಈ ಹೊಸ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಮತ್ತು NTR ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಕಲ್ಯಾಣ್ ರಾಮ್ ನಂದಮೂರಿ, ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಮತ್ತು ಹರಿಕೃಷ್ಣ ಕೊಸರಾಜು ನಿರ್ಮಿಸುತ್ತಿದ್ದಾರೆ.
ಈ ಚಿತ್ರವು ತೆಲುಗಿನಲ್ಲಿ ನಿರ್ಮಾಣವಾಗುತ್ತಿದ್ದು, ಕನ್ನಡ, ತಮಿಳು, ಹಿಂದಿ, ಮತ್ತು ಮಲಯಾಳಂ ಭಾಷೆಗಳಲ್ಲಿ ಡಬ್ ಆಗಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, ಈ ಹಿಂದೆ ಪ್ರಶಾಂತ್ ನೀಲ್ ಜೊತೆಗೆ ಕೆಲಸ ಮಾಡಿದ್ದ ಛಾಯಾಗ್ರಾಹಕ ಭುವನ್ ಗೌಡ ಮತ್ತು ಸಂಗೀತ ನಿರ್ದೇಶಕ ರವಿ ಬಸ್ರೂರು ಈ ಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ. ವಿಶೇಷವೆಂದರೆ, ಕನ್ನಡದ ರುಕ್ಮಿಣಿ ವಸಂತ್ ಈ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಚಿತ್ರತಂಡದಿಂದ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಈಗಾಗಲೇ ಜ್ಯೂನಿಯರ್ ಎನ್.ಟಿ.ಆರ್ ಅಭಿಮಾನಿಗಳ ವಲಯದಲ್ಲಿ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ಸದ್ಯಕ್ಕೆ ಚಿತ್ರದ ಹೆಸರನ್ನು ಚಿತ್ರತಂಡದವರು ಇನ್ನೂ ಅಧಿಕೃತವಾಗೊ ಘೋಷಿಸಲಾಗಿಲ್ಲ. ಆದರೆ, ಮೂಲಗಳ ಪ್ರಕಾರ, ಚಿತ್ರಕ್ಕೆ ‘ಡ್ರ್ಯಾಗನ್’ ಎಂಬ ಹೆಸರನ್ನು ಇಡುವ ಸಾಧ್ಯತೆ ಇದೆಯಂತೆ.
ಜ್ಯೂನಿಯರ್ ಎನ್.ಟಿ.ಆರ್ ತಮ್ಮ ಹುಟ್ಟುಹಬ್ಬವನ್ನು ಇದೇ ಮೇ 20ರಂದು ಆಚರಿಸಿಕೊಳ್ಳುತ್ತಿದ್ದು, ಅಂದು ಚಿತ್ರದ ಮೊದಲ ನೋಟ ಅಥವಾ ಟೀಸರ್ ಬಿಡುಗಡೆ ಆಗುವ ನಿರೀಕ್ಷೆ ಇದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…