ಬೆಂಗಳೂರು: ಖ್ಯಾತ ನಟ ಜೂನಿಯರ್ ಎನ್‌ಟಿಆರ್ ಅವರಿಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಆಸ್ಪತ್ರೆಯೊಂದರ ಉದ್ಘಾಟನೆಗೆ ಆಗಮಿಸಿದ್ದ ಜೂನಿಯರ್ ಎನ್‌ಟಿಆರ್ ನೋಡಲು ಆಸ್ಪತ್ರೆ ಮುಂದೆಯೇ ಭಾರೀ ಸಂಖ್ಯೆಯ ಜನ ಸೇರಿದ್ದರು. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಬಳಿಕ ಜೂನಿಯರ್ ಎನ್‌ಟಿಆರ್ ಅವರು, ಅಭಿಮಾನಿಗಳ ಎದುರು ಕಾಣಿಸಿಕೊಂಡು ಆಸ್ಪತ್ರೆ ಉದ್ಘಾಟಿಸಿ ತೆರಳಿದರು.





