ಪ್ಯಾನ್ ಇಂಡಿಯಾ ಸ್ಟಾರ್ ಡಾರ್ಲಿಂಗ್ ಪ್ರಭಾಸ್ ನಟನೆಯ, ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ-2898AD ಚಿತ್ರ ಕೊನೆಗೂ ಒಟಿಟಿಗೆ ಲಗ್ಗೆಯಿಟ್ಟಿದೆ.
ಸೈನ್ಸ್ ಫಿಕ್ಷನ್ ಸಿನಿಮಾವಾದ ಕಲ್ಕಿ-2898AD ಏಕಕಾಲಕ್ಕೆ ಎರಡು ಒಟಿಟಿ ಫ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗಿದೆ. ಅದುವೇ ಅಮೇಜಾನ್ ಪ್ರೈಮ್ ಹಾಗೂ ನೆಟ್‌ಫ್ಲಿಕ್ಸ್ ಎರಡೂ ಫ್ಲಾಟ್‌ಫಾರ್ಮ್‌ನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.
ಸಲಾರ್ ಬಳಿಕ ರಿಲೀಸ್ ಆದ ಪ್ರಭಾಸ್ ಅವರ ಚಿತ್ರ ಕಲ್ಕಿ-2898AD, ಜನರನ್ನು ತಲುಪುವಲ್ಲಿ ಯಶಸ್ವಿಯಾಯಿತು. ಈವರೆಗೆ 1200 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಸದ್ದು ಮಾಡಿತ್ತು.
ಕಲ್ಕಿ-2898AD ಚಿತ್ರದ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಅವತರಣಿಕೆಯೂ ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾದರೇ, ಹಿಂದಿ ಭಾಷೆಯ ಅವತರಣಿಕೆ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.
ಜೂನ್.27 ರಂದು ರಿಲೀಸ್ ಆಗಿದ್ದ ಕಲ್ಕಿ-2898AD ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಪ್ರಭಾಸ್ ನಟಿಸಿದ್ದರು. ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ದಿಶಾ ಪಠಾಣಿ, ಮೃಣಾಲ್ ಠಾಕೂರ್ ಸೇರಿದಂತೆ ದೊಡ್ಡ ತಾರಾ ಬಣವೇ ಈ ಚಿತ್ರದಲ್ಲಿದೆ. ಇನ್ನು ಈ ಚಿತ್ರವನ್ನು ಅಶ್ವಿನಿ ದತ್ ನಿರ್ಮಿಸಿದ್ದು, ಸಂತೋಷ್ ನಾರಾಯಣ್ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ನಾಗ್ ಅಶ್ವಿನ್ ಆಕ್ಷನ್ ಕಟ್ ಹೇಳಿದ್ದಾರೆ.





