ಮನರಂಜನೆ

ಒಟಿಟಿಗೆ ಬಂತು ಪ್ರಭಾಸ್‌ ನಟನೆಯ ಕಲ್ಕಿ-2898AD: ಎರಡು ಒಟಿಟಿಯಲ್ಲಿ ಲಭ್ಯ!

ಪ್ಯಾನ್‌ ಇಂಡಿಯಾ ಸ್ಟಾರ್‌ ಡಾರ್ಲಿಂಗ್‌ ಪ್ರಭಾಸ್‌ ನಟನೆಯ, ನಾಗ್‌ ಅಶ್ವಿನ್‌ ನಿರ್ದೇಶನದ ಕಲ್ಕಿ-2898AD ಚಿತ್ರ ಕೊನೆಗೂ ಒಟಿಟಿಗೆ ಲಗ್ಗೆಯಿಟ್ಟಿದೆ.

ಸೈನ್ಸ್‌ ಫಿಕ್ಷನ್‌ ಸಿನಿಮಾವಾದ ಕಲ್ಕಿ-2898AD ಏಕಕಾಲಕ್ಕೆ ಎರಡು ಒಟಿಟಿ ಫ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗಿದೆ. ಅದುವೇ ಅಮೇಜಾನ್‌ ಪ್ರೈಮ್‌ ಹಾಗೂ ನೆಟ್‌ಫ್ಲಿಕ್ಸ್‌ ಎರಡೂ ಫ್ಲಾಟ್‌ಫಾರ್ಮ್‌ನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಸಲಾರ್‌ ಬಳಿಕ ರಿಲೀಸ್‌ ಆದ ಪ್ರಭಾಸ್‌ ಅವರ ಚಿತ್ರ ಕಲ್ಕಿ-2898AD, ಜನರನ್ನು ತಲುಪುವಲ್ಲಿ ಯಶಸ್ವಿಯಾಯಿತು. ಈವರೆಗೆ 1200 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡುವ ಸದ್ದು ಮಾಡಿತ್ತು.

ಕಲ್ಕಿ-2898AD ಚಿತ್ರದ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಅವತರಣಿಕೆಯೂ ಅಮೇಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾದರೇ, ಹಿಂದಿ ಭಾಷೆಯ ಅವತರಣಿಕೆ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

ಜೂನ್‌.27 ರಂದು ರಿಲೀಸ್‌ ಆಗಿದ್ದ ಕಲ್ಕಿ-2898AD ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಪ್ರಭಾಸ್‌ ನಟಿಸಿದ್ದರು. ಅಮಿತಾಭ್‌ ಬಚ್ಚನ್‌, ದೀಪಿಕಾ ಪಡುಕೋಣೆ, ಕಮಲ್‌ ಹಾಸನ್‌, ದಿಶಾ ಪಠಾಣಿ, ಮೃಣಾಲ್‌ ಠಾಕೂರ್‌ ಸೇರಿದಂತೆ ದೊಡ್ಡ ತಾರಾ ಬಣವೇ ಈ ಚಿತ್ರದಲ್ಲಿದೆ. ಇನ್ನು ಈ ಚಿತ್ರವನ್ನು ಅಶ್ವಿನಿ ದತ್‌ ನಿರ್ಮಿಸಿದ್ದು, ಸಂತೋಷ್‌ ನಾರಾಯಣ್‌ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ನಾಗ್‌ ಅಶ್ವಿನ್‌ ಆಕ್ಷನ್‌ ಕಟ್‌ ಹೇಳಿದ್ದಾರೆ.

https://x.com/Kalki2898AD/status/1826334940780527846

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

4 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

6 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

6 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

7 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

8 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

9 hours ago