ಮನರಂಜನೆ

ರಜನಿಕಾಂತ್ ಅಭಿನಯದ 173ನೇ ಸಿನಿಮಾ ನಿರ್ಮಿಸಲಿದ್ದಾರೆ ಕಮಲ್ ಹಾಸನ್

ತಮಿಳು ಚಿತ್ರರಂಗದ ಜನಪ್ರಿಯ ನಟರಾದ ರಜನಿಕಾಂತ್‍ ಮತ್ತು ಕಮಲ್‍ ಹಾಸನ್‍ ಇಬ್ಬರೂ ಹೊಸ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಮೊದಲು ಈ ಚಿತ್ರವನ್ನು ಲೋಕೇಶ್‍ ಕನಕರಾಜ್‍ ನಿರ್ದೇಶಿಸುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ನಂತರ ನೆಲ್ಸನ್‍ ದಿಲೀಪ್‍ ಕುಮಾರ್ ನಿರ್ದೇಶಿಸುತ್ತಾರೆ ಎಂದು ಹೇಳಲಾಗಿತ್ತು. ಇದೀಗ ಅವರಿಬ್ಬರನ್ನೂ ಬಿಟ್ಟು, ಮೂರನೆಯ ವ್ಯಕ್ತಿಯೊಬ್ಬರು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ರಜನಿಕಾಂತ್‍ ಅಭಿನಯದ 173ನೇ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸುಂದರ್‍ ಸಿ. ಖುಷ್ಬೂ ಅವರ ಪತಿಯಾಗಿರುವ ಸುಂದರ್, ಈ ಹಿಂದೆ ರಜನಿಕಾಂತ್‍ ಅಭಿನಯದಲ್ಲಿ ‘ಅರುಣಾಚಲಂ’ ಚಿತ್ರವನ್ನು ನಿರ್ದೇಶಿಸಿದ್ದರು. ಈ ಚಿತ್ರ 1997ರಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್‍ ಆಗಿತ್ತು. ಇದೀಗ 28 ವರ್ಷಗಳ ನಂತರ ರಜನಿಕಾಂತ್‍ ಅಭಿನಯದಲ್ಲಿ ಸುಂದರ್ ಹೊಸ ಚಿತ್ರ ನಿರ್ದೇಶಿಸಲಿದ್ದಾರೆ.

ಇದನ್ನು ಓದಿ: ಸಿನಿ ಪಯಣಕ್ಕೆ ಸೂಪರ್‌ಸ್ಟಾರ್‌ ರಜನಿಕಾಂತ್‌ ವಿದಾಯ?

ವಿಶೇಷವೆಂದರೆ, ಈ ಚಿತ್ರವನ್ನು ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆಯಾದ ರಾಜ್‌ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್ ಕಂಪನಿ ಮೂಲಕ ಚಿತ್ರ ನಿರ್ಮಿಸುತ್ತಿದ್ದಾರೆ. ಈ ಹಿಂದೆ ರಾಜ್‍ ಕಮಲ್‍ ಸಂಸ್ಥೆಯು ಕಮಲ್‍ ಹಾಸನ್‍ ಸೇರಿದಂತೆ ತಮಿಳು ಚಿತ್ರರಂಗದ ಹಲವು ಜನಪ್ರಿಯ ನಟರ ಚಿತ್ರಗಳನ್ನು ನಿರ್ಮಿಸಿತ್ತು. ಇದೇ ಮೊದಲ ಬಾರಿಗೆ ರಜನಿಕಾಂತ್‍ ಅಭಿನಯದ ಚಿತ್ರವನ್ನು ರಾಜ್‍ ಕಮಲ್‍ ನಿರ್ಮಿಸುತ್ತಿದೆ.

ಈ ಚಿತ್ರಕ್ಕೆ ‘ತಲೈವರ್ 173’ ಎಂಬ ಹೆಸರಿಡಲಾಗಿದ್ದು, ಇಲ್ಲಿ ರಜನಿಕಾಂತ್‍ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಮಲ್‍ ಹಾಸನ್‍ ಚಿತ್ರದಲ್ಲಿ ಅತಿಥಿಯಾಗಿ ನಟಿಸಲಿದ್ದಾರೆ. ಈ ಹಿಂದೆ ರಜನಿಕಾಂತ್ ಅಭಿನಯದ ‘ತಿಲ್ಲುಮುಲ್ಲು’ ಸೇರಿದಂತೆ ಕೆಲವು ಚಿತ್ರಗಳಲ್ಲಿ ಕಮಲ್‍ ಹಾಸನ್‍ ಅತಿಥಿಯಾಗಿ ಕಾಣಿಸಿಕೊಂಡಿದ್ದರು. ಈಗ ‘ತಲೈವರ್ 173’ ಚಿತ್ರದಲ್ಲೂ ರಜನಿಕಾಂತ್ ಜೊತೆಗೆ ಕಮಲ್‍ ಹಾಸನ್‍ ನಟಿಸಲಿದ್ದಾರಂತೆ.

ಸದ್ಯಕ್ಕೆ ಈ ಚಿತ್ರದ ಘೋಷಣೆಯಾಗಿದ್ದು, ಮುಂದಿನ ವರ್ಷ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ವಿಶೇಷವೆಂದರೆ, ಚಿತ್ರದ ಬಿಡುಗಡೆಯನ್ನೂ ಘೋಷಿಸಲಾಗಿದ್ದು, 2027ರ ಸಂಕ್ರಾಂತಿ ಹಬ್ಬಕ್ಕೆ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.‌

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

14 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

14 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

16 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

18 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

21 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

21 hours ago