ಮನರಂಜನೆ

ಹಿರಿಯ ಕಲಾವಿದರಿಗೆ ‘ಕಮಲ್‍ ಶ್ರೀದೇವಿ’ ಗೌರವ

ಸಚಿನ್‍ ಚೆಲುವರಾಯ ಸ್ವಾಮಿ ಮತ್ತು ಸಂಗೀತಾ ಭಟ್‍ ಅಭಿನಯದ ‘ಕಮಲ್ ಶ್ರೀದೇವಿ’ ಚಿತ್ರವು ಸೆ. 19ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಪ್ರೀ-ರಿಲೀಸ್‍ ಕಾರ್ಯಕ್ರಮ ಇತ್ತೀಚೆಗೆ ಮಂತ್ರಿ ಮಾಲ್ನಲ್ಲಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ತರುಣ್ ಸುಧೀರ್‍ ಮತ್ತು ರಾಗಿಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಚಿತ್ರದ ಕ್ರಿಯೇಟಿವ್ ಹೆಡ್‍ ಆಗಿರುವ ರಾಜವರ್ಧನ್‍, ತಮ್ಮ ತಂದೆ ಡಿಂಗ್ರಿ ನಾಗರಾಜ್‍ ಅವರ ಸಮಕಾಲೀನ ಮತ್ತು ಕಷ್ಟದಲ್ಲಿರುವ ಹಿರಿಯ ಕಲಾವಿದರ ಸಹಾಯಾರ್ಥ ಗೌರವ ಸನ್ಮಾನವನ್ನ ಮಾಡಿದ್ದು ವಿಶೇಷವಾಗಿತ್ತು. ಬೆಂಗಳೂರು ನಾಗೇಶ್, ಎನ್‍.ಎಂ. ಲಕ್ಷ್ಮೀದೇವಮ್ಮ, ಬಿರಾದಾರ್, ಉಮೇಶ್, ಹೊನ್ನವಳ್ಳಿ ಕೃಷ್ಣರಿಗೆ ‘ಕಮಲ್ ಶ್ರೀದೇವಿ’ ವೇದಿಕೆಯಲ್ಲಿ ಗೌರವ ಸಮರ್ಪಿಸಿ ಆರ್ಥಿಕ ಸಹಾಯ ನೀಡಿ ಗೌರವಿಸಲಾಯ್ತು.

ಇದೊಂದು ಮರ್ಡರ್‍ ಮಿಸ್ಟ್ರಿ ಚಿತ್ರವಾಗಿದ್ದು, ಈ ಚಿತ್ರಕ್ಕೂ ಕಮಲ್‍ ಹಾಸನ್‍ ಮತ್ತು ಶ್ರೀದೇವಿಗೂ ಯಾವದೇ ಸಂಬಂಧವಿಲ್ಲವಂತೆ. ಚಿತ್ರದಲ್ಲೊಂದು ಚಿತ್ರವಿದ್ದು, ಆ ಚಿತ್ರದ ನಿರ್ದೇಶಕನಾಗಿ ಸಚಿನ್‍ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ, ಈ ಚಿತ್ರಕ್ಕೆ ‘ಮಮ್ಮಿ’ ಚಿತ್ರದ ನಿರ್ದೇಶಕ ಲೋಹಿತ್‍ ಕಥೆ ಕೊಟ್ಟರಂತೆ. ಇನ್ನು, ‘ಗೊಂಬೆಗಳ ಲವ್‍’ ಖ್ಯಾತಿಯ ಸಂತು ಶೀರ್ಷಿಕೆ ಕೊಟ್ಟದ್ದಾರೆ.

‘ಕಮಲ್‍ ಶ್ರೀದೇವಿ’ ಚಿತ್ರವನ್ನು ಸ್ವರ್ಣಾಂಬಿಕ ಪಿಚ್ಚರ್ಸ್ ಬ್ಯಾನರ್ ನಡಿಯಲ್ಲಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿ, ಬಾರ್ನ್‍ಸ್ವಾಲೋ ಕಂಪನಿಯ ರಾಜವರ್ಧನ್ ಸಹ ನಿರ್ಮಾಣದಲ್ಲಿ ತಯಾರಾಗಿದೆ. ಚಿತ್ರದಲ್ಲಿ ಸಚಿನ್‍ ಮತ್ತು ಸಂಗೀತಾ ಭಟ್‍ ಜೊತೆಗೆ ಕಿಶೋರ್, ರಮೇಶ್ ಇಂದಿರಾ, ಅಕ್ಷಿತ ಬೋಪಯ್ಯ, ಮಿತ್ರ, ಎಂ.ಎಸ್. ಉಮೇಶ್‍ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಕೀರ್ತನ್ ಸಂಗೀತ ಸಂಯೋಜಿಸಿದ್ದು, ನಾಗೇಶ್‍ ಆಚಾರ್ಯ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು| ಬಣ್ಣ ಹೊಡೆಯುವ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್‌ ರಸ್ತೆಯಲ್ಲಿರುವ…

13 mins ago

ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಿಷೇಧ: ಭಕ್ತರು ಸಹಕರಿಸುವಂತೆ ಎ.ಈ.ರಘು ಮನವಿ

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…

40 mins ago

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಹಂಗಾಮ: ನಾಯಕರ ನಡುವೆ ಜಟಾಪಟಿ

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…

2 hours ago

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್‌ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…

2 hours ago

ಮೈಸೂರು| ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…

3 hours ago

ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಹೈಕೋರ್ಟ ಗ್ರೀನ್‌ ಸಿಗ್ನಲ್‌

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್‌ ಟ್ಯಾಕ್ಸಿಗಳಿಗೆ ಲೈಸೆನ್ಸ್‌ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು…

3 hours ago