‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚಲುವರಾಯಸ್ವಾಮಿ ಮಗ ಸಚಿನ್ ಚಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರಕ್ಕೆ ‘ಕಮಲ್ ಶ್ರೀದೇವಿ’ ಎಂಬ ಹೆಸರಿಡಲಾಗಿದ್ದು, ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
‘ಕಮಲ್ ಶ್ರೀದೇವಿ’ ಚಿತ್ರದಲ್ಲಿ ಸಚಿನ್ ಜೊತೆಗೆ ಸಂಗೀತಾ ಭಟ್, ಕಿಶೋರ್, ರಮೇಶ್ ಇಂದಿರಾ, ಮಿತ್ರ, ಎಂ.ಎಸ್. ಉಮೇಶ್ ಮುಂತಾದವರು ನಟಿಸಿದ್ದು, ‘ಗಜರಾಮ’ ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಎ. ಸುನೀಲ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಹಿರಿಯ ನಟ ಎಂ.ಎಸ್. ಉಮೇಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಇದೊಂದು ಮರ್ಡರ್ ಮಿಸ್ಟ್ರಿ ಚಿತ್ರವಾಗಿದ್ದು, ಈ ಚಿತ್ರಕ್ಕೂ ಕಮಲ್ ಹಾಸನ್ ಮತ್ತು ಶ್ರೀದೇವಿ ಅವರಿಗೂ ಯಾವದೇ ಸಂಬಂಧವಿಲ್ಲವಂತೆ. ಒಂದು ಕ್ರೈಮ್ ನಡೆಯುತ್ತದೆ. ಅದನ್ನು ಯಾರು ಮಾಡಿದರು ಎಂಬುದೇ ಚಿತ್ರದ ಕಥೆ. ಚಿತ್ರದಲ್ಲೊಂದು ಚಿತ್ರವಿದ್ದು, ಆ ಚಿತ್ರದ ನಿರ್ದೇಶಕನಾಗಿ ಸಚಿನ್ ಕಾಣಿಸಿಕೊಂಡಿದ್ದಾರೆ.
ವಿಶೇಷವೆಂದರೆ, ಈ ಚಿತ್ರಕ್ಕೆ ‘ಮಮ್ಮಿ’ ಚಿತ್ರದ ನಿರ್ದೇಶಕ ಲೋಹಿತ್ ಕಥೆ ಕೊಟ್ಟರಂತೆ. ಇನ್ನು, ‘ಗೊಂಬೆಗಳ ಲವ್’ ಖ್ಯಾತಿಯ ಸಂತು ಶೀರ್ಷಿಕೆ ಕೊಟ್ಟದ್ದಾರೆ. ‘ಕಮಲ್ ಶ್ರೀದೇವಿ’ ಚಿತ್ರಕ್ಕೆ ಕೀರ್ತನ್ ಸಂಗೀತ, ನಾಗೇಶ್ ಆಚಾರ್ಯ ಛಾಯಾಗ್ರಹಣ ಮತ್ತು ಜ್ಞಾನೇಶ್ ಅವರ ಸಂಕಲನವಿದೆ.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…