ಬೆಂಗಳೂರು: ಸ್ಯಾಂಡಲ್‌ವುಡ್ ಹಿರಿಯ ನಟ ಟಿ.ತಿಮ್ಮಯ್ಯ ಅವರಿಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
92 ವರ್ಷ ವಯಸ್ಸಿನ ತಿಮ್ಮಯ್ಯ ಅವರು ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಅಠಾತ್ತನೆ ಅವರಿಗೆ ಹೃದಯಾಘಾತವಾಗಿದೆ.
ನಾಳೆ ಮಧ್ಯಾಹ್ನ ಬನಶಂಕರಿ ಚಿತಾಗಾರದಲ್ಲಿ ತಿಮ್ಮಯ್ಯ ಅವರ ಅಂತಿಮ ಸಂಸ್ಕಾರ ನಡೆಯಲಿದೆ.
ಟಿ.ತಿಮ್ಮಯ್ಯ ಅವರು ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅನಂತ್ ನಾಗ್ ಸೇರಿದಂತೆ ಹಲವರ ಚಿತ್ರಗಳಲ್ಲಿ ನಟಿಸಿದ್ದು, ಹೆಸರಾಂತ ನಿರ್ದೇಶಕರರೊಂದಿಗೆ ಕೆಲಸ ಮಾಡಿದ್ದಾರೆ.
ತಿಮ್ಮಯ್ಯ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದೆ.





