ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ಕಲಾವಿದರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಸಮಿತಿ ರಚಿಸುವಂತೆ ಮನವಿ ಮಾಡಿದರು.
ಸಾಮಾಜಿಕ ಕಾರ್ಯಕರ್ತ ಹಾಗೂ ನಟ ಚೇತನ್ ನೇತೃತ್ವದಲ್ಲಿ ಫೈರ್ ನಿಯೋಗವು ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿತು.
ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಕರ್ನಾಟಕದಲ್ಲೂ ಕನ್ನಡ ಚಿತ್ರೋದ್ಯಮ ಕಲಾವಿದೆಯರ ಮೇಲೆ ಆಗುತ್ತಿರುವ ಶೋಷಣೆಯ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಮನವಿ ಸಲ್ಲಿಸಿದೆ.
ಚೇತನ್ ಜೊತೆಗೆ ನಟಿ ಶೃತಿ ಹರಿಹರನ್ ಕೂಡ ಇದ್ದರು. ಕನ್ನಡ ಚಿತ್ರರಂಗದ ಮಹಿಳೆಯರ ಸಮಸ್ಯೆ ಅಧ್ಯಯನಕ್ಕೆ ಸಮಿತಿ ರಚನೆ ಮಾಡಬೇಕು. ಚಿತ್ರರಂಗದಲ್ಲಿನ ಲೈಂಗಿಕ ಶೋಷಣೆ ತಡೆಗಟ್ಟುವ ಸಲುವಾಗಿ ಸಮಿತಿ ರಚಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.
ಈಗಾಗಲೇ ಫೈರ್ ಸಂಸ್ಥೆಯು 130ಕ್ಕೂ ಮಂದಿ ಸಹಿ ಮಾಡಿರುವ ಪತ್ರವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ಸರ್ಕಾರ ಈ ಬಗ್ಗೆ ಏನೆಲ್ಲಾ ಕ್ರಮ ಕೈಗೊಳ್ಳುತ್ತೆ ಎಂಬುದನ್ನು ಕಾದುನೋಡಬೇಕಿದೆ.