ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರಮ್ಯ ಅವರು ʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಎಂಬ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗೆ ಇಂದು ಕಮರ್ಷಿಯಲ್ ಕೋರ್ಟ್‌ಗೆ ಹಾಜರಾಗಿದ್ದಾರೆ.
ʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಎಂಬ ಚಿತ್ರದಲ್ಲಿ ನನ್ನ ಅನುಮತಿಯಿಲ್ಲದೇ ಕೆಲ ದೃಶ್ಯಗಳನ್ನು ಬಳಸಿ ನನಗೆ ನೋವುಂಟು ಮಾಡಿದ್ದಾರೆ. ಆದ್ದರಿಂದ ಆದ ನಷ್ಟವನ್ನು ನಮಗೆ ಭರಿಸಬೇಕು ಎಂದು ಚಿತ್ರ ತಂಡದ ಮೇಲೆ ಕೇಸ್ ಹಾಕಿ 1 ಕೋಟಿ ರೂ. ಪರಿಹಾರ ಕೇಳಿ ಕೋರ್ಟ್ ಮೊರೆ ಹೋಗಿದ್ದರು.
ಇದೀಗ ಕಮರ್ಷಿಯಲ್ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಬಂದಿರುವ ಹಿನ್ನೆಲೆಯಲ್ಲಿ ನಟಿ ರಮ್ಯಾ ಕೋರ್ಟ್‌ಗೆ ಹಾಜರಾಗಿದ್ದಾರೆ. ಇನ್ನೂ ಈ ಸಿನಿಮಾದಲ್ಲಿ ನಟಿ ರಮ್ಯಾ ಅತಿಥಿ ಪಾತ್ರದಲ್ಲಿ ನಟಿಸಿದ್ದರು.





