ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್, ಪವಿತ್ರಾ ಗೌಡ, ಸೇರಿದಂತೆ 19 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ದರ್ಶನ್ ಅವರ ಹಳೆಯ ಆಪ್ತರಾದ ಕನ್ನಡದ ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಹತ್ಯೆ ಪ್ರಕರಣದ ಬಗ್ಗೆ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ.
ಒಳ್ಳೆಯ ಸಿನಿಮಾ, ಅಭಿಮಾನಿಗಳು, ಕುಟುಂಬ ಸೇರಿದಂತೆ ಎಲ್ಲವನ್ನು ಹೊಂದಿದ್ದ ನಟ ದರ್ಶನ್‌ಗೆ ಇದೆಲ್ಲವೂ ಬೇಕಾಗಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇಂತಹ ಸಂದರ್ಭದಲ್ಲಿ ಒಂದು ವೇಳೆ ಅಂಬರೀಶ್ ಅವರು ಇದ್ದಿದ್ದರೇ ದರ್ಶನ್ ಅವರ ಕಪಾಳಕ್ಕೆ ಹೊಡೆಯುತ್ತಿದ್ದರು. ಹಾಗೂ ಕರೆದು ಬುದ್ದಿ ಹೇಳುತ್ತಿದ್ದರು ಎಂದರು.
ಮುಂದುವರೆದು, ದರ್ಶನ್ ಕರೆದು ನೀನು ಮಾಡಿದ್ದು ತಪ್ಪು ಎಂದು ಖಂಡಿತವಾಗಿಯೂ ಬುದ್ದಿವಾದ ಹೇಳುತ್ತಿದ್ದರು. ಈ ಪ್ರಕರಣದ ಬಗ್ಗೆ ಸುಮಲತಾ ಅಂಬರೀಶ್ ಅವರು ಸಹಾ ಬುದ್ದಿವಾದ ಹೇಳುತ್ತಾರೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅವರು ತಿಳಿಸಿದರು.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…