ಮನರಂಜನೆ

ಇದು ಹಾಲಿವುಡ್‍ ಶೈಲಿಯ ಕನ್ನಡ ಚಿತ್ರವಂತೆ; ‘ಗ್ರೀನ್’ ಟೀಸರ್‌ ಬಿಡುಗಡೆ

ನಟ ಗೋಪಾಲಕೃಷ್ಣ ದೇಶಪಾಂಡೆ, ‘ಗ್ರೀನ್’ ಒಂದು ಮನೋವೈಜ್ಞಾನಿಕ ಥ್ರಿಲ್ಲರ್ ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸುದ್ದಿಯೊಂದು ಇತ್ತೀಚೆಗೆ ಕೇಳಿ ಬಂದಿತ್ತು. ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೊರಡುವ ಕಥೆ ಇರುವ ಚಿತ್ರದ ಟೀಸರ್‍ ಇತ್ತೀಚೆಗೆ ಬಿಡುಗಡೆ ಆಗಿದೆ.

ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಗ್ರೀನ್‍’ ಚಿತ್ರದಲ್ಲಿ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ, ಶಿವ ಮಂಜು, ವಿಶ್ವನಾಥ್, ಡಿಂಪಿ ಫಾದ್ಯ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದು ಕನ್ನಡದ ಹೆಮ್ಮೆಯ ಚಿತ್ರವಾಗಲಿದೆ ಎನ್ನುವ ನಿರ್ದೇಶಕ ರಾಜ್‍ ವಿಜಯ್‍, ‘ಇದೊಂದು ಸೈಕಾಲಜಿಕಲ್ ಮೈಂಡ್ ಬೆಂಡಿಂಗ್ ಥ್ರಿಲ್ಲರ್ ಚಿತ್ರ. ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೋರಾಟದ ಕಥೆಯೇ ‘ಗ್ರೀನ್’. ಇದೊಂದು ಕಾಡಿನಲ್ಲಿ ನಡೆಯುವ ಕಥೆಯಾಗಿದ್ದು, ಯೋಚನೆಗೆ ಹಚ್ಚುವ ಸಿನಿಮಾ ಆಗಲಿದೆ. ಚಿತ್ರದಲ್ಲಿ ಓಪನ್‍ ಕ್ಲೈಮ್ಯಾಕ್ಸ್ ಇದ್ದು, ಪ್ರತಿಯೊಬ್ಬರೂ ಒಂದೊಂದು ರೀತಿಯಲ್ಲಿ ಚಿತ್ರವನ್ನು ಅರ್ಥೈಸಬಹುದು. ಈ ಚಿತ್ರದ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಆ ಟ್ರೇಲರ್‍ನಲ್ಲಿ ಚಿತ್ರದ ಸಂಪೂರ್ಣ ಕಥೆ ಗೊತ್ತಾಗಲಿದೆ’ ಎಂದರು.

‘ಗ್ರೀನ್‍’ ಚಿತ್ರವು ಈಗಾಗಲೇ ಕಾನ್ಸ್ ವರ್ಲ್ಡ್ ಫಿಲಂ ಫೆಸ್ಟಿವಲ್‍ನಲ್ಲಿ ಅತ್ಯುತ್ತಮ ಭಾರತೀಯ ಚಿತ್ರ ಮತ್ತು ಭವಿಷ್ಯದ ನಿರ್ದೇಶಕ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುವುದರ ಜೊತೆಗೆ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ‘ವಿದೇಶಿಗರು ಮೆಚ್ಚಿಕೊಂಡಿರುವ ನಮ್ಮ ಚಿತ್ರವನ್ನು ಕನ್ನಡಿಗರು ಮೆಚ್ಚಿಕೊಳ್ಳುವ ಭರವಸೆ ಇದೆ. ಹಾಲಿವುಡ್‍ ಶೈಲಿಯಲ್ಲಿ ಈ ಚಿತ್ರ ಮೂಡಿಬಂದಿದೆ. ಭಾಷೆಯನ್ನು ಹೊರತುಪಡಿಸಿದರೆ, ಚಿತ್ರವು ಹಾಲಿವುಡ್‍ ಚಿತ್ರಗಳಿಗೆ ಹೋಲಿಸಬಹುದು’ ಎಂದರು.

ಗೋಪಾಲಕೃಷ್ಣ ದೇಶಪಾಂಡೆ ಇದುವರೆಗೂ ಮಾಡಿರದ ಒಂದು ಪಾತ್ರವನ್ನು ಈ ಚಿತ್ರದಲ್ಲಿ ನಿರ್ವಹಿಸಿದ್ದಾರಂತೆ. ‘ಕನ್ನಡದಲ್ಲಿ ತೀರ ಅಪರೂಪದ ಕಥೆ ಇದು. ನಾನು ನಿರ್ವಹಿಸಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಮಾಯಣ್ಣ. ಚಿತ್ರೀಕರಣದಲ್ಲಿ ಭಾಗವಹಿಸಿ ಎರಡು ಶಾಟ್‍ ಮುಗಿದ ಮೇಲೆ ನಿರ್ದೇಶಕರಿಗೆ ಸಂಪೂರ್ಣವಾಗಿ ಒಪ್ಪಿಸಿಕೊಂಡು ಬಿಟ್ಟೆ. ನೀವು ಹೇಗೆ ಹೇಳುತ್ತೀರೋ ಹಾಗೆ ಮಾಡುತ್ತೇನೆ ಎಂದು ಅವರು ಹೇಳಿದ್ದಷ್ಟನ್ನು ಮಾಡಿದ್ದೇನೆ’ ಎಂದರು.

‘ಗ್ರೀನ್‍’ ಚಿತ್ರಕ್ಕೆ ಮಧುಸೂದನ್‍ ಛಾಯಾಗ್ರಹಣ ಮತ್ತು ಶಕ್ತಿ ಸ್ಯಾಕ್‍ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

8 mins ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

17 mins ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

32 mins ago

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

2 hours ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

2 hours ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

2 hours ago