ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ಕೆ. ನಾರಾಯಣ್, ಸದ್ಯ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್’ ಮತ್ತು ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಇವೆರಡೂ ಚಿತ್ರಗಳು ಪ್ಯಾನ್ ಇಂಡಿಯಾ ಚಿತ್ರಗಳಾಗಿದ್ದು, ಈ ಮಧ್ಯೆ, ಅವರು ತಮಿಳಿಗೆ ಕಾಲಿಟ್ಟಿದ್ದು, ತಮಿಳಿನಲ್ಲಿ ದೊಡ್ಡ ಬಜೆಟ್‍ನ ಚಿತ್ರವೊಮದನ್ನು ನಿರ್ಮಿಸುವುದಕ್ಕೆ ಸಜ್ಜಾಗುತ್ತಿದ್ದಾರೆ.
‘ಇಳಯದಳಪತಿ’ ವಿಜಯ್ ಅಭಿನಯದ 69ನೇ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯು ನಿರ್ಮಿಸುತ್ತಿದೆ ಎಂಬ ವಿಷಯ ಕೆಲವು ದಿನಗಳಿಂದ ಕೇಳಿಬರುತ್ತಿತ್ತು. ಅದಕ್ಕೆ ಸರಿಯಾಗಿ, ಶುಕ್ರವಾರ ಸಂಜೆ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಕೆವಿಎನ್ ಅಧಿಕೃತವಾಗಿ ಘೋಷಿಸಿತ್ತು. ಈ ಸಂಬಂಧ ಒಂದು ವೀಡಿಯೋ ಸಹ ಬಿಡುಗಡೆ ಮಾಡಿದ್ದ ಸಂಸ್ಥೆಯು, ಇನ್ನಷ್ಟು ಮಾಹಿತಿಯನ್ನು ಶನಿವಾರ ಸಂಜೆ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಅದರಂತೆ ಇಂದು ಸಂಜೆ ವಿಜಯ್ 69 ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಹೇಳಿಕೊಂಡಿದೆ.
ಈ ಹೆಸರಿಡದ ಚಿತ್ರವನ್ನು ಎಚ್. ವಿನೋದ್ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ವಿನೋದ್, ಅಜಿತ್ ಅಭಿನಯದ ‘ತುನಿವು’, ‘ವಲಿಮೈ’ ಮತ್ತು ‘ನೇರ್ಕೊಂಡ ಪಾರ್ವೈ’ ಚಿತ್ರಗಳನ್ನು ನಿರ್ಮಿಸಿದ್ದರು. ಈಗ ವಿಜಯ್ ಅಭಿನಯದ ಚಿತ್ರವನ್ನು ಅವರು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.
500 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ವಿಜಯ್ ವಿಜಯ್ ಚಿತ್ರಬದುಕಿನ ಕೊನೆಯ ಚಿತ್ರವಾಗಲಿದೆ ಎಂದು ಹೇಳಲಾಗುತ್ತಿದೆ. ವಿಜಯ್ ಈಗಾಗಲೇ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿದ್ದು, ಈ ಚಿತ್ರದ ನಂತರ ಪೂರ್ಣಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದಲ್ಲಿ ಅವರು ನಟಿಸಲಿದ್ದಾರಂತೆ. ವಿಜಯ್ ರಾಜಕೀಯ ಜೀವನಕ್ಕೆ ಹತ್ತಿರವಿರೋ ಕಥೆ ಈ ಚಿತ್ರದಲ್ಲಿದ್ದು, ವಿಜಯ್ ರಾಜಕೀಯ ಭವಿಷ್ಯಕ್ಕೆ ಈ ಚಿತ್ರ ಭವ್ಯ ಮೆಟ್ಟಿಲಾಗಲಿದೆ ಎಂಬ ಸುದ್ದಿ ಇದೆ.
ಈ ಚಿತ್ರ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಈ ಚಿತ್ರಕ್ಕೆ ವಿಜಯ್‍ಗೆ 275 ಕೋಟಿ ರೂ. ಸಂಭಾವನೆ ಕೊಡಲಾಗುತ್ತಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.
ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…
ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…
ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…
ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್‌ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…
ತಮಿಳುನಾಡಿನಲ್ಲಿ ಬೇಸಿಗೆಯ ಸುಡು ಬಿಸಿಲಿಸಿನ ನಡುವೆ ವಿಧಾನಸಭೆಯ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಚುನಾವಣೆಯು ಏಪ್ರಿಲ್ ಕೊನೆಯ ವಾರದೊಳಗೆ…