ಮನರಂಜನೆ

ತಮಿಳು ಚಿತ್ರರಂಗಕ್ಕೆ ಕಾಲಿಟ್ಟ ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ …

ಕನ್ನಡದ ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ‍ಕೆ. ನಾರಾಯಣ್‍, ಸದ್ಯ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಮತ್ತು ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಇವೆರಡೂ ಚಿತ್ರಗಳು ಪ್ಯಾನ್‍ ಇಂಡಿಯಾ ಚಿತ್ರಗಳಾಗಿದ್ದು, ಈ ಮಧ್ಯೆ, ಅವರು ತಮಿಳಿಗೆ ಕಾಲಿಟ್ಟಿದ್ದು, ತಮಿಳಿನಲ್ಲಿ ದೊಡ್ಡ ಬಜೆಟ್‍ನ ಚಿತ್ರವೊಮದನ್ನು ನಿರ್ಮಿಸುವುದಕ್ಕೆ ಸಜ್ಜಾಗುತ್ತಿದ್ದಾರೆ.

‘ಇಳಯದಳಪತಿ’ ವಿಜಯ್‍ ಅಭಿನಯದ 69ನೇ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯು ನಿರ್ಮಿಸುತ್ತಿದೆ ಎಂಬ ವಿಷಯ ಕೆಲವು ದಿನಗಳಿಂದ ಕೇಳಿಬರುತ್ತಿತ್ತು. ಅದಕ್ಕೆ ಸರಿಯಾಗಿ, ಶುಕ್ರವಾರ ಸಂಜೆ ಸೋಷಿಯಲ್‍ ಮೀಡಿಯಾದಲ್ಲಿ ವಿಜಯ್‍ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಕೆವಿಎನ್‍ ಅಧಿಕೃತವಾಗಿ ಘೋಷಿಸಿತ್ತು. ಈ ಸಂಬಂಧ ಒಂದು ವೀಡಿಯೋ ಸಹ ಬಿಡುಗಡೆ ಮಾಡಿದ್ದ ಸಂಸ್ಥೆಯು, ಇನ್ನಷ್ಟು ಮಾಹಿತಿಯನ್ನು ಶನಿವಾರ ಸಂಜೆ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಅದರಂತೆ ಇಂದು ಸಂಜೆ ವಿಜಯ್‍ 69 ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಹೇಳಿಕೊಂಡಿದೆ.

ಈ ಹೆಸರಿಡದ ಚಿತ್ರವನ್ನು ಎಚ್‍. ವಿನೋದ್‍ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ವಿನೋದ್‍, ಅಜಿತ್‍ ಅಭಿನಯದ ‘ತುನಿವು’, ‘ವಲಿಮೈ’ ಮತ್ತು ‘ನೇರ್ಕೊಂಡ ಪಾರ್ವೈ’ ಚಿತ್ರಗಳನ್ನು ನಿರ್ಮಿಸಿದ್ದರು. ಈಗ ವಿಜಯ್ ಅಭಿನಯದ ಚಿತ್ರವನ್ನು ಅವರು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.

500 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ವಿಜಯ್ ವಿಜಯ್ ಚಿತ್ರಬದುಕಿನ ಕೊನೆಯ ಚಿತ್ರವಾಗಲಿದೆ ಎಂದು ಹೇಳಲಾಗುತ್ತಿದೆ. ವಿಜಯ್‍ ಈಗಾಗಲೇ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿದ್ದು, ಈ ಚಿತ್ರದ ನಂತರ ಪೂರ್ಣಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದಲ್ಲಿ ಅವರು ನಟಿಸಲಿದ್ದಾರಂತೆ. ವಿಜಯ್ ರಾಜಕೀಯ ಜೀವನಕ್ಕೆ ಹತ್ತಿರವಿರೋ ಕಥೆ ಈ ಚಿತ್ರದಲ್ಲಿದ್ದು, ವಿಜಯ್ ರಾಜಕೀಯ ಭವಿಷ್ಯಕ್ಕೆ ಈ ಚಿತ್ರ ಭವ್ಯ ಮೆಟ್ಟಿಲಾಗಲಿದೆ ಎಂಬ ಸುದ್ದಿ ಇದೆ.

ಈ ಚಿತ್ರ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಈ ಚಿತ್ರಕ್ಕೆ ವಿಜಯ್‍ಗೆ 275 ಕೋಟಿ ರೂ. ಸಂಭಾವನೆ ಕೊಡಲಾಗುತ್ತಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಭೂಮಿಕಾ

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

5 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

6 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

7 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

7 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

13 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

13 hours ago