ಸುಮಾರು 10 ವರ್ಷಗಳ ಹಿಂದೆ ಶರಣ್ ಅಭಿನಯದ ‘ಅಧ್ಯಕ್ಷ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಮುಂಬೈ ಮೂಲದ ಹೆಬಾ ಪಟೇಲ್, ಆ ನಂತರ ಕನ್ನಡಕ್ಕಿಂತ ತೆಲುಗು ಚಿತ್ರರಂಗದಲ್ಲೇ ಬ್ಯುಸಿಯಾಗಿದ್ದರು. ಅಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಈಗ ಬಹಳ ದಿನಗಳ ನಂತರ ಅವರು ಕನ್ನಡಕ್ಕೆ ವಾಪಸ್ಸಾಗಿದ್ದಾರೆ. ಗುರು ದೇಶಪಾಂಡೆ ನಿರ್ಮಾಣದ ‘ರಾಮರಸ’ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇಂದು ಹೆಬಾ ಪಟೇಲ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ರಾಮರಸ’ ಚಿತ್ರದಲ್ಲಿ ಹೆಬಾ ಪಟೇಲ್, ಭ್ರಮರಿ ಎಂಬ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರ ಪಾತ್ರವೇನು ಎಂಬುದನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ‘ಅವಳ ಅಂದಕ್ಕೆ ಸೋತವರು, ಮಾತಿಗೆ ಮರುಳಾದವರು, ನಡಿಗೆಗೆ ನಡುಗಿದವರಾರೂ, ಭೂಮಿ ಮೇಲೆ ಉಳಿದೇ ಇಲ್ಲ. ಗಂಡಸರ ಪಾಲಿಗೆ ಆಕೆ ರಹಸ್ಯ. ಆಕೆಯ ಹೆಸರು ಭ್ರಮರಿ’ ಎಂದು ಹೆಬಾ ಪಟೇಲ್ ಅವರನ್ನು ಪರಿಚಯಿಸಲಾಗಿದೆ.
ಜಿ ಸಿನಿಮಾಸ್ ಲಾಂಛನದಲ್ಲಿ ಗುರು ದೇಶಪಾಂಡೆ ನಿರ್ಮಿಸುತ್ತಿರುವ ‘ರಾಮರಸ’ ಚಿತ್ರವನ್ನು ‘ಜಟ್ಟ’ ಗಿರಿರಾಜ್ ಬರೆದು ನಿರ್ದೇಶನ ಮಾಡಿದ್ದಾರೆ. ಇದು ಗುರು ದೇಶಪಾಂಡೆ ನಿರ್ಮಾಣದ ನಾಲ್ಕನೇ ಚಿತ್ರ. ಈ ಹಿಂದೆ ಅವರು ‘ಜಂಟಲ್‍ಮ್ಯಾನ್’, ‘ಪೆಂಟಗನ್’ ಮತ್ತು ‘ಲವ್ ಯು ರಚ್ಚು’ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ‘ರಾಮರಸ’ ಒಂದು ಹಾರಾರ್ ಕಾಮಿಡಿ ಜಾನರ್‍ನ ಚಿತ್ರವಾಗಿದ್ದು, ಜಿ ಅಕಾಡೆಮಿಯ 16 ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ.
‘ರಾಮರಸ’ ಚಿತ್ರದಲ್ಲಿ ‘ಬಿಗ್ ಬಾಸ್’ ವಿಜೇತ ಕಾರ್ತಿಕ್ ಮಹೇಶ್ ನಾಯಕನಾಗಿ ನಟಿಸುತ್ತಿದ್ದಾರೆ. ಹೆಬಾ ಪಟೇಲ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಿಕ್ಕಂತೆ ಚಿತ್ರದಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿವೆ. ಈ ಚಿತ್ರಕ್ಕೆ ಬಿ.ಜೆ. ಭರತ್ ಸಂಗೀತ ಸಂಯೋಜಿಸುತ್ತಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…