ಮನರಂಜನೆ

ಕೆಂಪಾನ‌ ಗಲ್ಲದ ಹುಡುಗಿ…’ ಹಿಂದೆ ಬಿದ್ದ ಸೂರ್ಯ

‘ಚುಟುಚುಟು ಅಂತೈತಿ…’ ಹಾಡಿನ ನಂತರ ಕನ್ನಡದಲ್ಲಿ ಉತ್ತರ ಕರ್ನಾಟಕ ಸೊಗಡಿನ ಹಾಡುಗಳ ಸಂಖ್ಯೆ ಹೆಚ್ಚಾಗಿದೆ. ಈಗ ‘ಸೂರ್ಯ’ ಎಂಬ ಹೊಸ ಚಿತ್ರದಲ್ಲೂ ‘ಕೆಂಪಾನ ಗಲ್ಲದ ಹುಡುಗಿ…’ ಎಂಬ ಉತ್ತರ ಕರ್ನಾಟಕ ಶೈಲಿಯ ಹಾಡು ಹಾಡಿದ್ದು, ಈ ಹಾಡನ್ನು ರವೀಂದ್ರ ಸೊರಗಾಂವಿ ಮತ್ತು ಸ್ಫೂರ್ತಿ ಹಾಡಿದ್ದಾರೆ. ಈ ಹಾಡು ಇತ್ತೀಚೆಗೆ ಬಿಡುಗಡೆ ಆಗಿದೆ.

ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ, ನಂದಿ ಸಿನಿಮಾಸ್ ಮೂಲಕ ನಿರ್ಮಿಸುತ್ತಿರುವ ‘ಸೂರ್ಯ’ ಚಿತ್ರವನ್ನು ಸಾಗರ್ ದಾಸ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಪ್ರಶಾಂತ್ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಹರ್ಷಿತಾ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಯುವಕನೊಬ್ಬ ತನ್ನ ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲಾ ಹೋರಾಟ, ಸಾಹಸ ಮಾಡುತ್ತಾನೆ ಎಂಬುದನ್ನು ಈ ಚಿತ್ರದ ಮೂಲಕ‌ ಸಾಗರ್ ದಾಸ್ ಹೇಳಲು ಹೊರಟಿದ್ದಾರಂತೆ. ಬಿ. ಸುರೇಶ್ ಜೊತೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ಅನುಭವವಿರುವ ಸಾಗರ್ ದಾಸ್‍ಗೆ ಇದು ಮೊದಲ ಚಿತ್ರ. ‘ಸೂರ್ಯ ಎನ್ನುವುದು ಇಲ್ಲಿ ನಾಯಕನ ಹೆಸರು. ಆತ ತನ್ನ ಪ್ರೀತಿಗೋಸ್ಕರ ಸಮರ ಸಾರಿ ಅದನ್ನು ಹೇಗೆ ಉಳಿಸಿಕೊಳ್ಳುತ್ತಾನೆ ಎನ್ನುವುದೇ ಚಿತ್ರದ ಕಥಾಹಂದರ. ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುತ್ತಲೇ ನಾನೊಂದು ಕಥೆ ಮಾಡಿಕೊಂಡಿದ್ದೆ. ನನ್ನ ಸ್ನೇಹಿತನ ಮೂಲಕ ನಿರ್ಮಾಪಕರ ಪರಿಚಯವಾಗಿ, ಅವರಿಗೆ ಈ ಕಥೆ ಹೇಳಿದಾಗ ಇಷ್ಟಪಟ್ಟು ಚಿತ್ರ ನಿರ್ಮಾಣಕ್ಕೆ ಮುಂದಾದರು. ಬೆಂಗಳೂರು ಸುತ್ತಮುತ್ತ ಹಾಗೂ ಪೂನಾದಲ್ಲಿ ಚಿತ್ರದ ಚಿತ್ರೀಕರಣ ನಡೆಸಿದ್ದೇವೆ. ಜೂನ್ ಅಥವಾ ಜುಲೈ ವೇಳೆಗೆ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ. ಆರ್ಮುಗಂ ರವಿಶಂಕರ್ ಅವರನ್ನು ಇದುವರೆಗೂ ನೋಡಿರದಂಥ ಪಾತ್ರದಲ್ಲಿ ಕಾಣಬಹುದು. ಶ್ರುತಿ ವೈದ್ಯೆಯಾಗಿ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ ಅವರಿಲ್ಲಿ ಉತ್ತರ ಕರ್ನಾಟಕ ಭಾಗದ ವಿಲನ್ ಪಾತ್ರ ನಿರ್ವಹಿಸಿದ್ದಾರೆ’ ಎಂದು ಮಾಹಿತಿ ನೀಡಿದರು.

ಚಿತ್ರದ ಐದು ಹಾಡುಗಳಿಗೆ ಶ್ರೀ ಶಾಸ್ತ್ರಿ ಅವರು ಸಂಗೀತ ಸಂಯೋಜನೆ ಮಾಡಿದರೆ, ಮನುರಾಜ್ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

52 mins ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

54 mins ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

2 hours ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

3 hours ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

3 hours ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

3 hours ago