Mysore
19
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಮುಂದಕ್ಕೆ ಹೋದ ‘ಕಣ್ಣಪ್ಪ’; ಜೂನ್‍ ತಿಂಗಳಲ್ಲಿ ಬಿಡುಗಡೆ

‘ಕಣ್ಣಪ್ಪ’ ಚಿತ್ರವನ್ನು ಮೊದಲು ಏಪ್ರಿಲ್‍ 25ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಆದರೆ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ತಡವಾದ ಕಾರಣ, ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಏಪ್ರಿಲ್‍ನಲ್ಲಿ ಬಿಡುಗಡೆ ಆಗಬೇಕಿದ್ದ ಚಿತ್ರವು, ಇದೀಗ ಜೂನ್‍ಗೆ ಶಿಫ್ಟ್ ಆಗಿದೆ.

‘ಕಣ್ಣಪ್ಪ’ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಶುಕ್ರವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ ಚಿತ್ರದ ಅಧಿಕೃತ ಬಿಡುಗಡೆ ದಿನಾಂಕದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಡಾ. ಮೋಹನ್‍ ಬಾಬು, ವಿಷ್ಣು ಮಂಚು, ಪ್ರಭುದೇವ ಮತ್ತು ಚಿತ್ರದ ಕಾರ್ಯಕಾರಿ ನಿರ್ಮಾಪಕ ವಿನಯ್‍ ಮಹೇಶ್ವರಿ ಹಾಜರಿದ್ದರು.

‘ಕಣ್ಣಪ್ಪ’ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ. 14ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. ಇದೆಲ್ಲವನ್ನೂ ಅಧ್ಯಯನ ನಡೆಸಿ ಈ ಸಿನಿಮಾ ಮಾಡಲಾಗಿದೆಯಂತೆ. ಕಣ್ಣಪ್ಪ ಶಿವಭಕ್ತನಾದ ಕಥೆಗಿಂತ ಅದಕ್ಕೂ ಮೊದಲು ಆತ ಯಾಕೆ ನಾಸ್ತಿಕನಾಗಿದ್ದ, ತಂದೆಯ ಜೊತೆಗೆ ಅವನ ಸಂಬಂಧ ಹೇಗಿತ್ತು ಮುಂತಾದ ಹಲವು ವಿಷಯಗಳನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆಯಂತೆ.

‘ಕಣ್ಣಪ್ಪ’ ಚಿತ್ರದಲ್ಲಿ ಶಿವಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಿದ್ದು, ಡಾ. ಮೋಹನ್‍ ಬಾಬು, ಶರತ್‍ ಕುಮಾರ್, ಮಧು, ದೇವರಾಜ್‍ ಮುಂತಾದವರು ನಟಿಸಿದ್ದು, ಪ್ರಭಾಸ್‍, ಅಕ್ಷಯ್‍ ಕುಮಾರ್, ಮೋಹನ್‍ ಲಾಲ್‍, ಕಾಜಲ್‍ ಅಗರ್ವಾಲ್‍ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಎ.ವಿ.ಎ. ಎಂಟರ್‌ ಟೈನ್‌ಮೆಂಟ್‍ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಅಡಿ ಡಾ. ಮೋಹನ್‍ ಬಾಬು ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವನ್ನು ಮುಕೇಶ್‍ ಕುಮಾರ್ ಸಿಂಗ್‍ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಸ್ಟೀಫನ್‍ ದೇವಸ್ಸಿ ಸಂಗೀತಸವಿದ್ದು, ಶೆಲ್ಡನ್‍ ಚಾವ್‍ ಅವರ ಛಾಯಾಗ್ರಹಣವಿದೆ.

Tags:
error: Content is protected !!