ಮನರಂಜನೆ

ಮುಂದಕ್ಕೆ ಹೋದ ‘ಕಣ್ಣಪ್ಪ’; ಜೂನ್‍ ತಿಂಗಳಲ್ಲಿ ಬಿಡುಗಡೆ

‘ಕಣ್ಣಪ್ಪ’ ಚಿತ್ರವನ್ನು ಮೊದಲು ಏಪ್ರಿಲ್‍ 25ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಆದರೆ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ತಡವಾದ ಕಾರಣ, ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಏಪ್ರಿಲ್‍ನಲ್ಲಿ ಬಿಡುಗಡೆ ಆಗಬೇಕಿದ್ದ ಚಿತ್ರವು, ಇದೀಗ ಜೂನ್‍ಗೆ ಶಿಫ್ಟ್ ಆಗಿದೆ.

‘ಕಣ್ಣಪ್ಪ’ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಶುಕ್ರವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ ಚಿತ್ರದ ಅಧಿಕೃತ ಬಿಡುಗಡೆ ದಿನಾಂಕದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಡಾ. ಮೋಹನ್‍ ಬಾಬು, ವಿಷ್ಣು ಮಂಚು, ಪ್ರಭುದೇವ ಮತ್ತು ಚಿತ್ರದ ಕಾರ್ಯಕಾರಿ ನಿರ್ಮಾಪಕ ವಿನಯ್‍ ಮಹೇಶ್ವರಿ ಹಾಜರಿದ್ದರು.

‘ಕಣ್ಣಪ್ಪ’ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ. 14ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. ಇದೆಲ್ಲವನ್ನೂ ಅಧ್ಯಯನ ನಡೆಸಿ ಈ ಸಿನಿಮಾ ಮಾಡಲಾಗಿದೆಯಂತೆ. ಕಣ್ಣಪ್ಪ ಶಿವಭಕ್ತನಾದ ಕಥೆಗಿಂತ ಅದಕ್ಕೂ ಮೊದಲು ಆತ ಯಾಕೆ ನಾಸ್ತಿಕನಾಗಿದ್ದ, ತಂದೆಯ ಜೊತೆಗೆ ಅವನ ಸಂಬಂಧ ಹೇಗಿತ್ತು ಮುಂತಾದ ಹಲವು ವಿಷಯಗಳನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆಯಂತೆ.

‘ಕಣ್ಣಪ್ಪ’ ಚಿತ್ರದಲ್ಲಿ ಶಿವಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಿದ್ದು, ಡಾ. ಮೋಹನ್‍ ಬಾಬು, ಶರತ್‍ ಕುಮಾರ್, ಮಧು, ದೇವರಾಜ್‍ ಮುಂತಾದವರು ನಟಿಸಿದ್ದು, ಪ್ರಭಾಸ್‍, ಅಕ್ಷಯ್‍ ಕುಮಾರ್, ಮೋಹನ್‍ ಲಾಲ್‍, ಕಾಜಲ್‍ ಅಗರ್ವಾಲ್‍ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಎ.ವಿ.ಎ. ಎಂಟರ್‌ ಟೈನ್‌ಮೆಂಟ್‍ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಅಡಿ ಡಾ. ಮೋಹನ್‍ ಬಾಬು ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವನ್ನು ಮುಕೇಶ್‍ ಕುಮಾರ್ ಸಿಂಗ್‍ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಸ್ಟೀಫನ್‍ ದೇವಸ್ಸಿ ಸಂಗೀತಸವಿದ್ದು, ಶೆಲ್ಡನ್‍ ಚಾವ್‍ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ನೀರು ಪೋಲು ಮಾಡದಂತೆ ಜಾಗೃತಿ ಮೂಡಿಸಿ

ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…

26 seconds ago

ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು

ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ…

6 mins ago

ಅಪಘಾತದಿಂದ ಹೊತ್ತಿ ಉರಿದ ಟಿಪ್ಪರ್‌, ಬಸ್‌ : 14 ಮಂದಿ ಸಜೀವ ದಹನ

ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ,…

14 mins ago

‘ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಇಲ್ಲ

65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್‌ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…

29 mins ago

ಏಳೆಂಟು ವರ್ಷ ಹಿಂದೆಯೇ ಎಚ್‌ ಪಿವಿ ಲಸಿಕೆ ಆರಂಭಿಸಿದ ವೈದ್ಯ!

ಪುರುಷರೂ ಎಚ್‌ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್‌ಕುಮಾ‌ರ್‌ ಮಂಡ್ಯ :  ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…

38 mins ago

ಕಾಳು ಮೆಣಸು ಕಳ್ಳತನ; ಆರೋಪಿಗಳ ಬಂಧನ

ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…

48 mins ago