‘ಕಣ್ಣಪ್ಪ’ ಚಿತ್ರವನ್ನು ಮೊದಲು ಏಪ್ರಿಲ್ 25ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಆದರೆ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ತಡವಾದ ಕಾರಣ, ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಏಪ್ರಿಲ್‍ನಲ್ಲಿ ಬಿಡುಗಡೆ ಆಗಬೇಕಿದ್ದ ಚಿತ್ರವು, ಇದೀಗ ಜೂನ್‍ಗೆ ಶಿಫ್ಟ್ ಆಗಿದೆ.
‘ಕಣ್ಣಪ್ಪ’ ಚಿತ್ರವು ಜೂನ್ 27ರಂದು ಜಗತ್ತಿನಾದ್ಯಂತ ಪ್ಯಾನ್ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.
ಶುಕ್ರವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿತ್ರದ ಅಧಿಕೃತ ಬಿಡುಗಡೆ ದಿನಾಂಕದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಡಾ. ಮೋಹನ್ ಬಾಬು, ವಿಷ್ಣು ಮಂಚು, ಪ್ರಭುದೇವ ಮತ್ತು ಚಿತ್ರದ ಕಾರ್ಯಕಾರಿ ನಿರ್ಮಾಪಕ ವಿನಯ್ ಮಹೇಶ್ವರಿ ಹಾಜರಿದ್ದರು.
‘ಕಣ್ಣಪ್ಪ’ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ. 14ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. ಇದೆಲ್ಲವನ್ನೂ ಅಧ್ಯಯನ ನಡೆಸಿ ಈ ಸಿನಿಮಾ ಮಾಡಲಾಗಿದೆಯಂತೆ. ಕಣ್ಣಪ್ಪ ಶಿವಭಕ್ತನಾದ ಕಥೆಗಿಂತ ಅದಕ್ಕೂ ಮೊದಲು ಆತ ಯಾಕೆ ನಾಸ್ತಿಕನಾಗಿದ್ದ, ತಂದೆಯ ಜೊತೆಗೆ ಅವನ ಸಂಬಂಧ ಹೇಗಿತ್ತು ಮುಂತಾದ ಹಲವು ವಿಷಯಗಳನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆಯಂತೆ.
‘ಕಣ್ಣಪ್ಪ’ ಚಿತ್ರದಲ್ಲಿ ಶಿವಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಿದ್ದು, ಡಾ. ಮೋಹನ್ ಬಾಬು, ಶರತ್ ಕುಮಾರ್, ಮಧು, ದೇವರಾಜ್ ಮುಂತಾದವರು ನಟಿಸಿದ್ದು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ಕಾಜಲ್ ಅಗರ್ವಾಲ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಎ.ವಿ.ಎ. ಎಂಟರ್ ಟೈನ್‌ಮೆಂಟ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಅಡಿ ಡಾ. ಮೋಹನ್ ಬಾಬು ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವನ್ನು ಮುಕೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಸ್ಟೀಫನ್ ದೇವಸ್ಸಿ ಸಂಗೀತಸವಿದ್ದು, ಶೆಲ್ಡನ್ ಚಾವ್ ಅವರ ಛಾಯಾಗ್ರಹಣವಿದೆ.
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…