ಸ್ಯಾಂಡಲ್‌ವುಡ್ ನಟ ರಿಷಭ್ ಶೆಟ್ಟಿ ಕುಟುಂಬದೊಂದಿಗೆ ಕಟೀಲಿನ ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಕಾಂತಾರ-2 ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ನಟ ರಿಷಭ್ ಶೆಟ್ಟಿ ಪತ್ನಿ ಹಾಗೂ ಮಕ್ಕಳೊಂದಿಗೆ ಕಟೀಲಿನ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂತಾರ-2 ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಆಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ಸಿನಿಮಾದ ಶೂಟಿಂಗ್‌ನಲ್ಲಿದ್ದೇನೆ ಆ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.





