ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಜಗತ್ತಿನಾದ್ಯಂತ ಗುರುವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಒಳ್ಳೆಯ ಓಪನಿಂಗ್ ಸಿಕ್ಕಿದ್ದು, ಕಳೆದ ಮೂರು ದಿನಗಳಲ್ಲಿ ಎಲ್ಲಾ ಕಡೆ ಹೌಸ್‍ಫುಲ್ ಪ್ರದರ್ಶನಗಳನ್ನು ಕಾಣುತ್ತಿದೆ.
‘ಕಾಂತಾರ – ಚಾಪ್ಟರ್ 1’ ಚಿತ್ರವು ಎಷ್ಟು ಗಳಿಕೆ ಮಾಡಿದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಚಿತ್ರ. ಚಿತ್ರವು ಬಿಡುಗಡೆಯಾದ ಮೂರು ದಿನಗಳಲ್ಲಿ (ಗುರುವಾರ, ಶುಕ್ರವಾರ ಮತ್ತು ಶನಿವಾರ) 163.1 ಕೋಟಿ ರೂ. ಗಳಿಕೆ ಮಾಡಿದೆ ಎಂದು ಬಾಕ್ಸ್ ಆಫೀಸ್ ಟ್ರಾಕರ್ ಸಚ್ನಿಕ್ ಡಾಟ್‍ಕಾಂ ವರದಿ ಮಾಡಿದೆ.
ಈ ಪೈಕಿ ಚಿತ್ರವು ಮೊದಲ ದಿನ 61.85, ಎರಡನೇ ದಿನ 46 ಮತ್ತು ಮೂರನೇ ದಿನ 55.25 ಕೋಟಿ ರೂ.ಗಳನ್ನು ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಮೂರು ದಿನಗಳಲ್ಲಿ 163.1 ಕೋಟಿ ರೂ. ಗಳಿಕೆಯಾಗಿದ್ದು, ಇದು ಬರೀ ಭಾರತದ ಲೆಕ್ಕ ಅಷ್ಟೇ. ಈ ಪೈಕಿ ಕರ್ನಾಟಕದ್ದೇ 47.6 ಕೋಟಿ ರೂ. ಗಳಿಕೆಯಾದರೆ, ಉತ್ತರ ಭಾರತದಿಂದ 50 ಕೋಟಿ ರೂ. ಗಳಿಕೆ ಮಾಡಿದೆ. ಇನ್ನು, ಚಿತ್ರವು ಮೊದಲ ದಿನ 88 ಕೋಟಿ ರೂ. ಗಳಿಕೆ ಮಾಡಿದ ಸುದ್ದಿ ಇತ್ತು. ಈ ಪೈಕಿ, ಭಾರತದ ಪಾಲು 74.25 ಕೋಟಿ ರೂ.ಗಳಷ್ಟಾದರೆ, ಬೇರೆ ದೇಶಗಳಲ್ಲಿ ಸುಮಾರು 13.50 ಕೋಟಿ ರೂ. ಗಳಿಕೆಯಾಗಿದೆ. ಚಿತ್ರಕ್ಕೆ ಬುಕ್ ಮೈ ಶೋನಲ್ಲಿ ಮೊದಲ ದಿನ (ಗುರುವಾರ) ದಾಖಲೆಯ 1.28 ಮಿಲಿಯನ್ ಪ್ಲಸ್ ಟಿಕೆಟ್‍ಗಳು ಮಾರಾಟವಾಗಿವೆ.
ಇದನ್ನೂ ಓದಿ:-ನೇಪಾಳದಲ್ಲಿ ಭೀಕರ ಪ್ರವಾಹ: 42 ಜನರು ಸಾವು
‘ಕಾಂತಾರ ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಗುಲ್ಶನ್ ದೇವಯ್ಯ ಮುಂತಾದವರು ನಟಿಸಿದ್ದು, ಚಿತ್ರವು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಿದೆ.
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…