ಮನರಂಜನೆ

ದಾಖಲೆಯ 7000 ಚಿತ್ರಮಂದಿರಗಳಲ್ಲಿ ‘ಕಾಂತಾರ – ಚಾಪ್ಟರ್ 1’ ಬಿಡುಗಡೆ

‘ಕಾಂತಾರ – ಚಾಪ್ಟರ್ 1’ ಚಿತ್ರದ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗುತ್ತಿದ್ದು, ಚಿತ್ರದ ಕೆಲಸಗಳು ನಡೆಯುತ್ತಲೇ ಇದೆ. ಈ ಮಧ್ಯೆ, ಚಿತ್ರವನ್ನು ದಾಖಲೆ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಹೊಂಬಾಳೆ ಫಿಲಂಸ್‍ ತಂಡವು ತೀರ್ಮಾನಿಸಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರವು ಹಲವು ಹೆಗ್ಗಳಿಕೆಗೆ ಪಾತ್ರವಾಗುತ್ತಿದ್ದು, ಈ ಪೈಕಿ ಪ್ರಮುಖವಾಗಿ ಭಾರತೀಯ ಅಂಚೆ ಇಲಾಖೆ ವತಿಯಿಂದ ಇಂಡಿಯನ್ ಪೋಸ್ಟಲ್‍ ಕವರ್ ಹಾಗೂ ಪಿಕ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.

ಈ ಕುರಿತು ಮಾತನಾಡಿರುವ ನಿರ್ಮಾಪಕ ವಿಜಯ್‍ ಕಿರಗಂದೂರು, ‘ಭಾರತದಲ್ಲಿ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಕಾಂತಾರ – ಚಾಪ್ಟರ್ 1’ ಬಿಡುಗಡೆ ಆಗಲಿದೆ. ಜಗತ್ತಿನ 30 ದೇಶಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಇದೇ ಮೊದಲ ಬಾರಿಗೆ ಸ್ಪಾನಿಶ್‍ ಭಾಷೆಗೆ ಡಬ್‍ ಆಗುತ್ತಿದ್ದು, ಸ್ಪಾನಿಶ್‍ ಭಾಷೆಗೆ ಡಬ್‍ ಆಗಿ ಬಿಡುಗಡೆಯಾಗುತ್ತಿರುವ ಮೊದಲ ಕನ್ನಡದ ಚಿತ್ರ ಎಂಬ ಹೆಗ್ಗಳಿಕೆಗೆ ಚಿತ್ರ ಪಾತ್ರವಾಗುತ್ತಿದೆ. ಕನ್ನಡ ಚಿತ್ರಗಳು ಉತ್ತರ ಅಮೇರಿಕಾದಲ್ಲಿ ಬಿಡಗುಡೆಯಾಗುವುದು ಹೊಸದೇನಲ್ಲ. ದಕ್ಷಿಣ ಅಮೇರಿಕಾದಲ್ಲಿ, ಅದರಲ್ಲೂ ಮೆಕ್ಸಿಕೋ ಮುಂತಾದ ದೇಶಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ.

ಇದನ್ನು ಓದಿ : KRG ಸ್ಟುಡಿಯೋಸ್‍ ಆಯ್ತು, PRK ಪ್ರೊಡಕ್ಷನ್‌ನಿಂದ ವೆಬ್‍ ಸರಣಿ

ಚಿತ್ರದ ಕುರಿತು ಮಾತನಾಡುವ ರಿಷಭ್‍ ಶೆಟ್ಟಿ, ‘ಈ ಚಿತ್ರಕ್ಕಾಗಿ ಸುಮಾರು ನಾಲ್ಕುವರೇ ಲಕ್ಷ ಜನರಿಗೆ ಊಟ ಹಾಕಿದ್ದಾರೆ ನಿರ್ಮಾಪಕರು. ‘ಕಾಂತಾರ’ ಶುರು ಮಾಡಿದಾಗ ಬರೀ ಒಂದು ಸಿನಿಮಾ ಆಗಿತ್ತು. ಮುಂದುವರೆಯುತ್ತಾ ಭಾವನಾತ್ಮಕ ಪಯಣವಾಗಿದೆ. ನಮ್ಮ ಕನ್ನಡಿಗರು, ಮಾಧ್ಯಮಗಳು ಚಿತ್ರವನ್ನು ಇಷ್ಟು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಒಂದು ಲೈನ್ ಕಥೆಯಿಂದ ನನ್ನ ಮೇಲೆ ನಂಬಿಕೆ ಇಟ್ಟುಕೊಂಡು ನಿರ್ಮಾಪಕರು ಇಲ್ಲಿಯವರೆಗೂ ತಂದಿದ್ದಾರೆ’ ಎಂದು ತಿಳಿಸಿದರು.

‘ಕಾಂತಾರ ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದು, ಚಿತ್ರವು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

9 mins ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

17 mins ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

18 mins ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

1 hour ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

1 hour ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

2 hours ago