kanthara
ಜೂನಿಯರ್ NTR ಅಭಿನಯದ ಮೊದಲ ಹಿಂದಿ ಚಿತ್ರ ‘ವಾರ್ 2’ನ ತೆಲುಗು ಹಕ್ಕುಗಳಿಗಾಗಿ (ಡಬ್ಬಿಂಗ್ ಮತ್ತು ಆಂಧ್ರ ಪ್ರದೇಶ ಹಾಗೂ ತೆಲಂಗಾಣ ವಿತರಣೆ) ನಿರ್ಮಾಪಕ ನಾಗವಂಶಿ, 80 ಕೋಟಿ ರೂ. ನೀಡಿದ್ದರು ಎಂದು ಕೆಲವು ತಿಂಗಳುಗಳ ಸುದ್ದಿಯಾಗಿತ್ತು. ಅದಕ್ಕೂ ಮುನ್ನ ಯಾವುದೇ ಚಿತ್ರಕ್ಕೂ ಇಷ್ಟೊಂದು ವಹಿವಾಟು ನಡೆಯದ ಕಾರಣ, ಇದು ದಾಖಲೆಯಾಗಿತ್ತು.
ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ ಎಂದು ಹೇಳಲಾಗುತ್ತಿದೆ. ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ಚಿತ್ರಕ್ಕೆ ಭಾರೀ ಬೇಡಿಕೆ ಬಂದಿದ್ದು, ಎರಡೂ ರಾಜ್ಯಗಳೀಗೆ ಸೇರಿ ಡಬ್ಬಿಂಗ್ ಮತ್ತು ವಿತರಣಾ ಹಕ್ಕುಗಳು 100 ಕೋಟಿ ರೂ.ಗಳಿಗೆ ಮಾರಾಟವಾಗಿದೆ ಎಂಬ ಸುದ್ದಿಯೊಂದು ಕೇಳಿಬರುತ್ತಿದೆ.
ಈ ಪೈಕಿ, ನಿಜಾಮ್ ಪ್ರದೇಶಕ್ಕೆ 40 ಕೋಟಿ, ಕರಾವಳಿ ಆಂಧ್ರಕ್ಕೆ 45 ಕೋಟಿ ರೂ ಮತ್ತು ರಾಯಲಸೀಮೆ ಪ್ರದೇಶಗಳ ವಿತರಣಾ ಹಕ್ಕುಗಳು 15 ಕೋಟಿ ರೂ.ಗಳಿಗೆ ಮಾರಾಟವಾಗಿದೆಯಂತೆ. ಈ ಬಗ್ಗೆ ಚಿತ್ರ ನಿರ್ಮಿಸಿರುವ ಹೊಂಬಾಳೆ ಫಿಲಂಸ್ ಆಗಲೀ, ಹಕ್ಕುಗಳನ್ನು ಪಡೆದ ವಿತರಕರಾಗಲೀ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಇದು ನಿಜವಾದರೆ, ಹೊಸ ದಾಖಲೆಯಾಗುತ್ತದೆ.
‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿ ವಿಜಯ್ ಕಿರಗಂದೂರು ನಿರ್ಮಿಸುತ್ತಿದ್ದು, ರಿಷಭ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರಿಷಭ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಅಚ್ಯುತ್ ಕುಮಾರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
‘ಕಾಂತಾರ ಚಾಪ್ಟರ್ 1’ ಚಿತ್ರವು ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಬಂಗಾಳಿ ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…