Kantara: Chapter 1
ಕೆಲವೇ ದಿನಗಳ ಹಿಂದಷ್ಟೇ, ನಟ-ನಿರ್ದೇಶಕ ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್ ಕಡೆಯಿಂದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಇತ್ತೀಚೆಗೆ, ಚಿತ್ರತಂಡದಿಂದ ಇನ್ನೊಂದು ಸುದ್ದಿ ಬಂದಿದೆ. ಅದೇನೆಂದರೆ, ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಚಿತ್ರವು ಅಕ್ಟೋಬರ್.2ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ.
‘ಕಾಂತಾರ – ಚಾಪ್ಟರ್ 1’ ಚಿತ್ರದ ಬಿಡುಗಡೆಗೆ ಎರಡೂವರೆ ತಿಂಗಳಿದ್ದರೂ, ಚಿತ್ರದ ಬಗ್ಗೆ ಅಪ್ಡೇಟ್‍ಗಳು ಹೊರಬಿದ್ದಿಲ್ಲ. ಅದರಲ್ಲೂ ಚಿತ್ರೀಕರಣ ಮುಗಿದಿರುವ ಸುದ್ದಿ ಇರಲಿಲ್ಲ. ಚಿತ್ರೀಕರಣ ಯಾವಾಗ ಮುಗಿಯುತ್ತದೆ? ಅಂದುಕೊಂಡಂತೆ ಅಕ್ಟೋಬರ್ 02ರಂದು ಬಿಡುಗಡೆಯಾಗುತ್ತದಾ? ಎಂಬ ಪ್ರಶ್ನೆ ರಿಷಭ್ ಶೆಟ್ಟಿ ಅಭಿಮಾನಿಗಳ ವಲಯದಲ್ಲಿ ಇತ್ತು.
ಅದಕ್ಕೇ ಪೂರಕವಾಗಿ ಚಿತ್ರದ ಚಿತ್ರೀಕರಣ ಮುಗಿದಿರುವ ಸುದ್ದಿ ಇಂದು ಬಂದಿದೆ. ಅದರ ಜೊತೆಗೆ ಒಂದು ಮೇಕಿಂಗ್ ವೀಡಿಯೋ ಸಹ ಹೊಂಬಾಳೆ ಫಿಲಂಸ್ ಮತ್ತು ರಿಷಭ್ ಶೆಟ್ಟಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಚಿತ್ರ ಮೂಡಿಬಂದ ರೀತಿಯ ಕುರಿತಾದ ದೃಶ್ಯಗಳಿವೆ. ಜೊತೆಗೆ ಇಂಥದ್ದೊಂದು ಚಿತ್ರವನ್ನು ಮಾಡಿ ಮುಗಿಸುವುದಕ್ಕೆ ಸಹಕರಿಸಿದ ಕಲಾವಿದರು ಮತ್ತು ತಂತ್ರಜ್ಞರಿಗೆ ರಿಷಭ್ ಧನ್ಯವಾದಗಳನ್ನು ತಿಳಿಸಿದ್ದಾರೆ.
‘ಕಾಂತಾರ: ಅಧ್ಯಾಯ 1’ ಚಿತ್ರವು ಆಧ್ಯಾತ್ಮ ಮತ್ತು ಸಾಹಸಗಾಥೆಯ ಸಮ್ಮಿಶ್ರಣದ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಕುಂದಾಪುರದಲ್ಲಿ ಬರೋಬ್ಬರಿ 25 ಎಕರೆ ಪ್ರದೇಶದಲ್ಲಿ ಬೃಹತ್ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆಯಂತೆ. ಕಾಲ್ಪನಿಕ ಊರೊಂದರನ್ನು ನಿರ್ಮಿಸಿ, ಅಲ್ಲಿ ನೂರಾರು ದಿನಗಳ ಚಿತ್ರೀಕರಣ ಮಾಡಲಾಗಿದೆ. ಭಾರತೀಯ ಹಾಗೂ ಅಂತರರಾಷ್ಟ್ರೀಯ ತಂತ್ರಜ್ಞರೂ ಈ ಸಿನಿಮಾಕ್ಕೆ ಕೈ ಜೋಡಿಸಿದ್ದಾರೆ. 45 ರಿಂದ 50 ದಿನಗಳ ಕಾಲ ಸುಮಾರು 500 ತರಬೇತಿದಾರರು, 3000ಕ್ಕೂ ಹೆಚ್ಚು ಜೂನಿಯರ್ ಕಲಾವಿದರು ಈ ಸಿನಿಮಾದ ಶೂಟಿಂಗ್‌ನಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.
‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ನ ವಿಜಯ್ ಕಿರಗಂದೂರು ನಿರ್ಮಿಸುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಕನ್ನಡದಲ್ಲಿ ನಿರ್ಮಾಣವಾಗಿ, ನಂತರ ತೆಲುಗು, ತಮಿಳು, ಹಿಂದಿ, ಮಲಯಾಳಂ, ಬಂಗಾಲಿ ಸೇರಿದಂತೆ ಬೇರೆ ಭಾಷೆಗಳಿಗೆ ಡಬ್ ಆಗಿ ಬಿಡುಗಡೆಯಾಗಲಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…