ಮನರಂಜನೆ

ಕಲಾವಿದ ಸಂಘದ ಜೊತೆಗಿನ ಚರ್ಚೆ ಬಳಿಕ ದರ್ಶನ್‌ ವಿರುದ್ಧ ಕ್ರಮ: ಎನ್‌.ಎಂ ಸುರೇಶ್‌

ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಕನ್ನಡದ ಖ್ಯಾತ ನಟ ದರ್ಶನ್‌ ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ಬಳಿಕ ತೀರ್ಮಾನಿಸಲಾಗುವುದು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಎನ್‌.ಎಂ ಸುರೇಶ್‌ ಬುಧವಾರ (ಜೂನ್‌.12) ಹೇಳಿದ್ದಾರೆ.

ಕೊಲೆ ಪ್ರಕರಣ ಆರೋಪಿ ದರ್ಶನ್‌ ಅವರನ್ನು ಚಿತ್ರರಂಗದಿಂದ ಬ್ಯಾನ್‌ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕೆಎಫ್‌ಸಿಸಿ ಯನ್ನು ಒತ್ತಾಯಿಸಿದೆ. ದರ್ಶನ್‌ ಸಿನಿಮಾ ಬಿಡುಗಡೆ ಮಾಡಬಾರದು ಆತನನ್ನು ಬಹಿಷ್ಕರಿಸಬೇಕು ಎಂಬ ಕೂಗು ಕೇಳಿ ಬಂದ ಹಿನ್ನೆಲೆ ಈ ರೀತಿ ಉತ್ತರಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು, ರೇಣುಕಾಸ್ವಾಮಿ ಕುಟುಂಬಕ್ಕೆ ನಮ್ಮ ಸಾಂತ್ವಾನಗಳು. ಚಲನಚಿತ್ರ ಮಂಡಳಿ ಸುಮ್ಮನಿದೆ ಎಂದು ಯಾರೂ ಊಹಿಸಬೇಡಿ. ಇದನ್ನು ನಾವು ಒಪ್ಪುವುದಿಲ್ಲ. ಬೆಂಗಳೂರು ಕಮಿಷನರ್‌ ಅವರು ಈ ಪ್ರಕಣದಲ್ಲಿ ಕಾನೂನಾತ್ಮ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರ ತರುವುದಾಗಿ ಹೇಳಿದ್ದಾರೆ. ಈ ಪ್ರಕಣದಲ್ಲಿ ತಪ್ಪಿತಸ್ಥರ ವಿರದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಸುರೇಶ್‌ ಹೇಳಿದರು.

ಪೊಲೀಸ್‌ ತನಿಖೆ ನಡೆಸಿ ಚಾರ್ಜ್‌ ಶೀಟ್‌ ಸಲ್ಲಿಸುವವರೆಗೂ ಆರೋಪಿ ಯಾರು ಎಂದು ಪತ್ತೆಯಾಗುವುದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿ ಚಾರ್ಜ್‌ಶಿಟ್‌ ಸಲ್ಲಿಸಿದ ಬಳಿಕ ನಾವು ಕಲಾವಿದರ ಸಂಘದೊಂದಿಗೆ ಸಭೆ ಕರೆದು ಬಳಿಕ ತೀರ್ಮಾನ ಮಾಡಲಾಗುವುದು. ಕಾನೂನಿನ ಮುಂದೆ ಯಾರು ದೊಡ್ಡವರಲ್ಲ ಇಂತಹ ಪ್ರಕರಣಗಳಿಂದ ಕನ್ನಡ ಚಿತ್ರರಂಗದ ಖ್ಯಾತಿ ಕುಗ್ಗುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಅಧ್ಯಕ್ಷ ಸುರೇಶ್‌ ಅಭಿಪ್ರಾಯಪಟ್ಟಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

8 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

9 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

10 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

13 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

13 hours ago