ಮನರಂಜನೆ

ದುಬೈನಲ್ಲಿ ಕೆಸಿಎಲ್‍; ಲಲಿತ್‍ ಮಹಲ್‍ ಅರಮನೆಯಲ್ಲಿ ಆಟಗಾರರ ಹರಾಜು

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಹಲವು ಕ್ರಿಕೆಟ್‍ ಟೂರ್ನಿಗಳು ನಡೆಯುತ್ತಿವೆ. ಈ ಸಾಲಿಗೆ ಈಗ ಕೆಸಿಎಲ್‍ ಸಹ ಒಂದು. ಅಂದರೆ ಕರ್ನಾಟಕ ಕ್ರಿಕೆಟ್‍ ಲೀಗ್‍. ಈ ಕ್ರಿಕೆಟ್‍ ಟೂರ್ನಿಯನ್ನು ದುಬೈನಲ್ಲಿರುವ ಅನಿವಾಸಿ ಕನ್ನಡಿಗರಿಗೆಂದೇ ವಿಶೇಷವಾಗಿ ಆಯೋಜಿಸಲಾಗಿದೆ.

ದುಬೈನಲ್ಲಿರುವ ಅನಿವಾಸಿ‌ ಕನ್ನಡಿಗರು ಚಂದನವನದ ಕಲಾವಿದರು ಹಾಗೂ ತಂತ್ರಜ್ಞರನ್ನು ಒಂದೇ ವೇದಿಕೆಯಲ್ಲಿ ಕಂಡು ಸಂಭ್ರಮಿಸುವಂತೆ ಮಾಡುವ ಸಲುವಾಗಿ ಕರ್ನಾಟಕ ಸೆಲೆಬ್ರಿಟಿ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಇತ್ತೀಚಿಗೆ ಮೈಸೂರಿನ ಲಲಿತ್‍ ಮಹಲ್‍ ಪ್ಯಾಲೇಸ್‍ನಲ್ಲಿ ತಂಡದ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದೆ.

ಈ ಕಾರ್ಯಕ್ರಮಕ್ಕೆ ಶಾಸಕ ಶ್ರೀವತ್ಸ ಸೇರಿದಂತೆ ಹಲವು ಗಣ್ಯರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ನಟರಾದ ‘ಡಾರ್ಲಿಂಗ್’ ಕೃಷ್ಣ, ರವಿ ಚೇತನ್, ನಿರ್ದೇಶಕ ತರುಣ್ ಸುಧೀರ್, ಪವನ್ ಒಡೆಯರ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಂತರ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅನಿವಾಸಿ ಕನ್ನಡಿಗ ಮಯೂರ್ ಮಾಸ್ಟರ್, ‘ದುಬೈನಲ್ಲಿರುವ ಅನಿವಾಸಿ ಕನ್ನಡಿಗರು ಒಂದುಗೂಡಿ ಕರ್ನಾಟಕ ಸೆಲೆಬ್ರಿಟಿ ಲೀಗ್ (KCL) ಸೀಸನ್ ೧ ಆಯೋಜಿಸುತ್ತಿದ್ದಾರೆ‌. ಏಪ್ರಿಲ್ 28 ರಿಂದ ಮೇ 3 ರವರೆಗೂ ದುಬೈನ‌ಲ್ಲಿ ಪಂದ್ಯಗಳು ನಡೆಯಲಿದೆ. ಕನ್ನಡ ಚಿತ್ರರಂಗದ ಕಲಾವಿದರು ಹಾಗೂ ತಂತ್ರಜ್ಞರು ಮಾತ್ರ ಭಾಗವಹಿಸಲಿದ್ದಾರೆ. ಅವರಿಗಾಗಿಯೇ ಈ ಟೂರ್ನಿ ಆಯೋಜಿಸಲಾಗಿದೆ. ದುಬೈನಲ್ಲಿರುವ ಸುಮಾರು 10 ಸಾವಿರ ಕನ್ನಡಿಗರನ್ನು ಒಂದುಗೂಡಿಸುವುದೇ ಈ ಕೆಸಿಎಲ್‍ನ ಉದ್ದೇಶ’ ಎಂದರು.

ಅನಿವಾಸಿ ಕನ್ನಡಿಗ ಸಿರಾಜ್ ಮಾತನಾಡಿ, ‘ಕೋವಿಡ್‍ಗೂ ಮೊದಲೇ ದುಬೈನಲ್ಲಿ ಅನಿವಾಸಿ ಕನ್ನಡಿಗರ ಸಂಘ ಹುಟ್ಟಿಕೊಂಡಿತ್ತು.‌ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಕನ್ನಡಿಗರನ್ನು ಒಂದೆಡೆ ಸೇರಿಸುವ ಉದ್ದೇಶ ನಮ್ಮದಾಗಿತ್ತು. ಕೋವಿಡ್ ಸಮಯದಲ್ಲಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ವಿಮಾನ ಸೇವೆ ಸೇರಿದಂತೆ ಬೇರೆಬೇರೆ ರೀತಿಯಲ್ಲಿ ನಮ್ಮ ಸಂಘ ನೆರವಾಗಿ ನಿಂತಿದೆ. ಜೊತೆಗೆ ಕೆಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಆದರೆ ಒಂದು ದೊಡ್ಡ ಕಾರ್ಯಕ್ರಮ ಮಾಡಿ ಎಲ್ಲರನ್ನೂ ಒಂದೆಡೆ ಸೇರಿಸಲು ಸಾಧ್ಯವಾಗಿರಲಿಲ್ಲ. ಕ್ರಿಕೆಟ್ ಹೆಚ್ಚು ಜನಪ್ರಿಯವಾಗಿರುವುದರಿಂದ ಕನ್ನಡದ ಸೆಲೆಬ್ರಿಟಿಗಳನ್ನು ದುಬೈಗೆ ಕರೆಸಲು ಈ ಟೂರ್ನಿ ಮಾಡುತ್ತಿದ್ದೇವೆ. ಇದರಿಂದ ಎಲ್ಲಾ‌ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ನೋಡುವ ಅವಕಾಶ ದುಬೈನಲ್ಲಿನ ಕನ್ನಡಿಗರಿಗೆ ಸಿಗಲಿದೆ’ ಎಂದರು.

ಈ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಲಿದೆ. 12 ಓವರ್‍ಗಳ ಪಂದ್ಯ ಇದ್ದಾಗಿದ್ದು, ಎರಡು ಗುಂಪಿನಲ್ಲಿ ತಲಾ ಐದು ತಂಡಗಳಿವೆ. ಪ್ರತಿ ತಂಡ ನಾಲ್ಕು ಪಂದ್ಯಗಳನ್ನಾಡಲಿದೆ. ಪ್ರತಿ ಗುಂಪಿನ ಟಾಪ್ ಎರಡು ತಂಡಗಳು ನಾಕೌಟ್ ಪಂದ್ಯ ಆಡಲಿದೆ. ಪಂದ್ಯದ ನೇರಪ್ರಸಾರವೂ ಇರಲಿದೆ. ‘ಲೂಸ್ ಮಾದ’ ಯೋಗಿ, ಕೃಷ್ಣ, ತರುಣ್ ಸುಧೀರ್ ಸೇರಿದಂತೆ ಹಲವರು ತಂಡದ ನಾಯಕರಾಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪೊನ್ನಂಪೇಟೆ | ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…

14 mins ago

PUC RESULT | ನಾಳೆ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ…

21 mins ago

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

2 hours ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

2 hours ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

2 hours ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

2 hours ago