ರಾಯಚೂರು: ಸ್ಯಾಂಡಲ್‌ವುಡ್‌ನಲ್ಲಿ ನನ್ನ ಫೇವರೇಟ್ ನಟನೆಂದರೆ ಪುನೀತ್ ರಾಜ್ ಕುಮಾರ್ ಅವರು ಎಂದು ಬಹುಭಾಷಾ ನಟಿ ಕೀರ್ತಿ ಸುರೇಶ್ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಇಂದು(ಮಾರ್ಚ್.8) ಶಾಪಿಂಗ್ ಮಾಲ್‌ವೊಂದರ ಉದ್ಘಾಟನೆಗೆ ಆಗಮಿಸಿ ಮಾತನಾಡಿದ ಅವರು, ನಾನು ಈ ಹಿಂದೆ ಡಾ.ರಾಜ್‌ಕುಮಾರ ಅವರನ್ನ ಭೇಟಿ ಮಾಡಿದ್ದೆ, ನನ್ನ ತಾಯಿ ಅವರೊಂದಿಗೆ ನಟಿಸಿದ್ದರು. ಕನ್ನಡ ಚಿತ್ರರಂಗದಿಂದ ಉತ್ತಮ ಚಿತ್ರಕಥೆ ಹಾಗೂ ಒಳ್ಳೆಯ ಆಫರ್ ಬಂದರೆ ಖಂಡಿತವಾಗಿ ನಟಿಸುತ್ತೇನೆ ಎಂದು ಹೇಳಿದರು.
ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಮಾತುಕತೆ ನಡೆದಿದೆ. ಅಲ್ಲದೇ ಇತ್ತೀಚೆಗೆ ಅಷ್ಟೇ ವೈವಾಹಿಕ ಜೀವನ ಪ್ರಾರಂಭವಾಗಿದ್ದು, ತುಂಬಾ ಚೆನ್ನಾಗಿ ಸಾಗುತ್ತಿದೆ ಎಂದರು.