ಬಹು ನಿರೀಕ್ಷಿತ ಕನ್ನಡ ಚಿತ್ರರಂಗದ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದಾದ ಕೆಜಿಎಫ್-1, ಕೆಜಿಎಫ್-2 ನ ಮುಂದುವರಿದ ಭಾಗವಾದ ಕೆಜಿಎಫ್ ಚಾಪ್ಟರ್ 3 ಸೆಟ್ಟೇರಲಿದೆ. ಹೌದು ಈ ಬಗ್ಗೆ ಸ್ವತಃ ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಸಂದರ್ಶನವೊಂದರಲ್ಲಿ ನಿರ್ದೇಶಕ ನೀಲ್ ಮಾಹಿತಿ ನೀಡಿದ್ದಾರೆ ಎಂದು ಪಿಂಕ್ ವಿಲ್ಲಾ ವರದಿ ಮಾಡಿದೆ.
ಈ ಬಗ್ಗೆ ಮಾತನಾಡಿರುವ ಅವರು ಕೆಜಿಎಫ್ ಚಾಪ್ಟರ್ 3 ಸ್ಕ್ರಿಪ್ಟ್ ರೆಡಿಯಾಗಿದೆ. ಸ್ಕ್ರಿಪ್ಟ್ ಬರೆಯದೇ ಇದ್ದಿದ್ದರೇ ನಾವು ಲಿಂಕ್ ಅನ್ನು ಚಾಪ್ಟರ್ 2 ನ ಕೊನೆಯಲ್ಲಿ ಹಾಕುತ್ತಿರಲಿಲ್ಲ. ನಾವು ಚಾಪ್ಟರ್ 2 ನಲ್ಲೇ ಮೂರನೇ ಭಾಗ ಬರಲಿದೆ ಎಂದು ಲಿಂಕ್ ನೀಡಿದ್ದೇವೆ. ನಾವು ಮಾಡುವ ಬಗ್ಗೆ ಎಲ್ಲರಿಗೂ ತಿಳಿದಿದೆ ಎಂದು ನೀಲ್ ಹೇಳಿದ್ದಾರೆ.
ಸದ್ಯ ಪ್ರಶಾಂತ್ ನೀಲ್ ಸಲಾರ್ 2 ಚಿತ್ರದಲ್ಲಿ ನೀಲ್ ಬ್ಯೂಸಿಯಾಗಿದ್ದು, ಕೆಜಿಎಫ್ ಸ್ಟಾರ್ ಯಶ್ ಸದ್ಯ ಟಾಕ್ಸಿಕ್ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನು ಹೊಂಬಾಳೆ ಫೀಲ್ಮಂ ಬ್ಯಾನರ್ ಅಡಿಯಲ್ಲಿ ಬೇರೆ ಚಿತ್ರಗಳು ನಡೆಯುತ್ತಿದ್ದು, ಮುಂದಿನ ಎರಡು ವರ್ಷಗಳಲ್ಲಿ ಚಿತ್ರ ಸೆಟ್ಟೇರಲಿದೆ ಎಂದು ಹೇಳಲಾಗುತ್ತಿದೆ.
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…