ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ನಟನೆಯ ಜೊತೆ ಸಮಾಜಮುಖಿ ಕೆಲಸಗಳಲ್ಲೂ ಸದಾ ಮುಂದೆ ಇದ್ದು, ಇದೀಗ ತಮ್ಮ ಅಭಿಮಾನಿಯ ಪುಟ್ಟ ಮಗಳ ಚಿಕಿತ್ಸೆಗೆ ಸಹಾಯ ಮಾಡುವಂತೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ಹಾಗೂ ಪತ್ನಿ ನಾಗಶ್ರೀ ದಂಪತಿಯ 1 ವರ್ಷದ ಮಗು ಕೀರ್ತನಾ, ಸ್ಟೈನ್ ಮ್ಯಾಸ್ಕ್ಯೂಲಾರ್ ಅಟ್ರೋಫಿ (SMA2) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ.
ಈ ಕಾಯಿಲೆಗೆ ಔಷಧಿ ಇದ್ದು, ಚಿಕಿತ್ಸೆಗೆ 16 ಕೋಟಿ ರೂ ಬೇಕಾಗಿದೆ. ಪೋಷಕರು ಆಸ್ತಿ ಮಾರಿ ಮಗು ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಸಾಕಷ್ಟು ಜನರು ಈ ಕಾರ್ಯಕ್ಕೆ ಕೈ ಜೋಡಿಸಲು ಮುಂದೆ ಬಂದಿದ್ದಾರೆ. ನನ್ನ ಕೈಲಾದ ಸಹಾಯ ನಾನು ಮಾಡಿದ್ದೀನಿ. ನೀವು ನಿಮ್ಮ ಕೈಯಲ್ಲಾದಷ್ಟು ಸಹಾಯ ಮಾಡಿ ಎಂದು ವಿಡಿಯೋದಲ್ಲಿ ಸುದೀಪ್ ಮನವಿ ಮಾಡಿದ್ದಾರೆ.