ಕಿಚ್ಚ ಸುದೀಪ್ (Kiccha Sudeep) ಅಭಿನಯದ ‘ಬಿಲ್ಲ ರಂಗ ಭಾಷಾ’ (Billa Ranga Basha) ಚಿತ್ರದ ಬಗ್ಗೆ ಸುದ್ದಿಗಳು ಕೆಲವು ವರ್ಷಗಳಿಂದ ಕೇಳಿ ಬರುತ್ತಲೇ ಇತ್ತು. ಎಲ್ಲಾ ಅಂದುಕೊಂಡಂತೆ ಆಗಿದ್ದರು, ಈ ಚಿತ್ರವು ‘ವಿಕ್ರಾಂತ್ ರೋಣ’ಗೂ ಮೊದಲೇ ಪ್ರಾರಂಭವಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ತಡವಾಯ್ತು. ಈಗ ಚಿತ್ರ ಕೊನೆಗೂ ಪ್ರಾರಂಭವಾಗಿದೆ.
ಏಪ್ರಿಲ್ 16ರ ಬುಧವಾರದಂದು ಚಿತ್ರ ಪ್ರಾರಂಭವಾಗಲಿದೆ ಎಂದು ಸುದೀಪ್ ಸೂಚನೆ ಕೊಟ್ಟಿದ್ದರು. ಅದರಂತೆ ಚಿತ್ರದ ಮುಹೂರ್ತ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದ್ದು, ಚಿತ್ರೀಕರಣ ಪ್ರಾರಂಭವಾಗಲಿದೆ.
‘ಬಿಲ್ಲ ರಂಗ ಭಾಷಾ ತಮ್ಮ ಜೀವನದಲ್ಲೇ ದೊಡ್ಡ ಚಿತ್ರವಾಗಲಿದೆ ಎಂದು ಸುದೀಪ್ ಕೆಲವು ತಿಂಗಳುಗಳ ಹಿಂದೆ ಹೇಳಿಕೊಂಡಿದ್ದಾರೆ. ಈ ಚಿತ್ರದ ಘೋಷಣೆ ಕಳೆದ ವರ್ಷ ಸುದೀಪ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅಧಿಕೃತವಾಗಿ ಆಗಿತ್ತು. ಆದರೆ, ಸುದೀಪ್ ಬೇರೆ ಚಿತ್ರಗಳಲ್ಲಿ ತೊಡಗಿಸಿಕೊಂಡ ಕಾರಣ, ಚಿತ್ರೀಕರಣ ಪ್ರಾರಂಭವಾಗುವುದು ನಿಧಾನವಾಗಿತ್ತು. ಈಗ ಕೊನೆಗೂ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ.
ಚಿತ್ರದ ಮುಹೂರ್ತದ ನಂತರ ಮಾತನಾಡಿರುವ ನಿರ್ದೇಶಕ ಅನೂಪ್ ಭಂಡಾರಿ, `20 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಸುತ್ತೇವೆ. ಚಿತ್ರದ ಪ್ರಮುಖ ಸಾಹಸಮಯ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. ಅದಕ್ಕಾಗಿ ಸೆಟ್ ಕೆಲಸ ನಡೆಯುತ್ತಿತ್ತು. ಅದು ಈಗ ಪೂರ್ಣಗೊಂಡಿದ್ದು ಚಿತ್ರೀಕರಣಕ್ಕೆ ಸಿದ್ಧವಾಗಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿದ ಬಳಿಕ ಸಣ್ಣ ವಿರಾಮದ ನಂತರ ಮುಂದಿನ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತೇವೆʼ ಎಂದು ತಿಳಿಸಿದ್ದಾರೆ.
ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲ ‘ಹನುಮಾನ್’ ಚಿತ್ರವನ್ನು ನಿರ್ಮಿಸಿದ್ದ ನಿರಂಜನ್ ರೆಡ್ಡಿ ಮತ್ತು ಚೈತನ್ಯ ರೆಡ್ಡಿ, ಪ್ರೈಮ್ ಶೋ ಎಂಟರ್ ಟೈನ್ಮೆಂಟ್ ಬ್ಯಾನರ್ ಅಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಹೆಸರುಗಳನ್ನು ಚಿತ್ರತಂಡ ಸದ್ಯದಲ್ಲೇ ಘೋಷಿಸಲಿದೆ.
ಸುದೀಪ್ ಅಭಿನಯದಲ್ಲಿ ಅನೂಪ್ ಭಂಡಾರಿ ಇದಕ್ಕೂ ಮೊದಲು ‘ವಿಕ್ರಾಂತ್ ರೋಣ’ ಚಿತ್ರವನ್ನು ನಿರ್ದೇಶನ ಮಾಡಿದ್ದು, ಅದಾದ ಬಳಿಕ ಈ ಜೋಡಿ ‘ಬಿಲ್ಲ ರಂಗ ಬಾಷಾ’ ಚಿತ್ರಕ್ಕೆ ಕೈ ಜೋಡಿಸಿದೆ.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…