ಮನರಂಜನೆ

ಏಪ್ರಿಲ್‍.16ರಿಂದ ಶುರುವಾಗಲಿದೆ ಸುದೀಪ್‍ ಅಭಿನಯದ ‘ಬಿಲ್ಲ ರಂಗ ಭಾಷಾ’

‘ಏಪ್ರಿಲ್‍ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್‌ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್‍.16ರಂದು ಏನು ಎಂದು ಅಭಿಮಾನಿಗಳು ಹುಳ ಬಿಟ್ಟುಕೊಂಡರು. ಕೆಲವರು ಚಿತ್ರದ ಮುಹೂರ್ತವಿರಬಹುದು ಎಂದರೆ, ಇನ್ನೂ ಕೆಲವರು ಇನ್ನೇನೋ ಘೋಷಣೆ ಇರಬಹುದು ಅಂದುಕೊಂಡರು.

ಈಗ ಏಪ್ರಿಲ್‍.16ಕ್ಕೆ ಏನಾಗಲಿದೆ ಎಂದು ಸ್ವತಃ ಸುದೀಪ್‍ ಹೇಳಿಕೊಂಡಿದ್ದಾರೆ. ‘ಏಪ್ರಿಲ್‍.16ರಂದು ಏನಾಗಲಿದೆ ಎಂಬ ಕುತೂಹಲವಿರುವವರಿಗೆ, ಅಂದು ನಮ್ಮ ‘ಬಿಲ್ಲ ರಂಗ ಭಾಷಾ’ ಚಿತ್ರ ಪ್ರಾರಂಭವಾಗಲಿದೆ’ ಎಂದು ಸೋಷಿಯಲ್‍ ಮೀಡಿಯಾದಲ್ಲಿ ಘೋಷಿಸಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಬಹಳ ಖುಷಿಯಾಗಿದ್ದಾರೆ.

ಕಳೆದ ವರ್ಷ ಸುದೀಪ್‍ ಹುಟ್ಟುಹಬ್ಬದಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದರು ನಿರ್ದೇಶಕ ಅನೂಪ್‍ ಭಂಡಾರಿ. ಅದರಂತೆ, ಅದು ‘ಬಿಲ್ಲ ರಂಗ ಭಾಷಾ’ ಚಿತ್ರದ ಅಧಿಕೃತ ಘೋಷಣೆಯಾಗಿತ್ತು. ಆದರೆ, ಸುದೀಪ್‍ ಆ ನಂತರ ‘ಬಿಗ್‍ ಬಾಸ್‍’, ‘ಮ್ಯಾಕ್ಸ್’, ಸಿಸಿಎಲ್‍ನಲ್ಲಿ ಬ್ಯುಸಿಯಾಗಿದ್ದರಿಂದ ಚಿತ್ರವು ವಿಳಂಬವಾಯಿತು. ಈಗ ಕೊನೆಗೂ ಚಿತ್ರ ಏಪ್ರಿಲ್‍.16ಕ್ಕೆ ಪ್ರಾರಂಭವಾಗುತ್ತಿದೆ.

‘ಬಿಲ್ಲ ರಂಗ ಭಾಷಾ ತಮ್ಮ ಜೀವನದಲ್ಲೇ ದೊಡ್ಡ ಚಿತ್ರವಾಗಲಿದೆ ಎಂದು ಸುದೀಪ್ ಕೆಲವು ತಿಂಗಳುಗಳ ಹಿಂದೆ ಹೇಳಿಕೊಂಡಿದ್ದರು. ’ವಿಕ್ರಾಂತ್ ರೋಣ’ ನಂತರ ಒಂದು ತಂಡವಾಯಿತು. ನಮಗೆ ನಮ್ಮ ಮೇಲೆ ನಂಬಿಕೆ ಬಂತು. ಈಗ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಕೈ ಹಾಕಿದ್ದೇವೆ. ಈ ಚಿತ್ರ ನನ್ನ ಮತ್ತು ಅನೂಪ್‍ ಚಿತ್ರಜೀವನದಲ್ಲೇ ದೊಡ್ಡ ಸಿನಿಮಾ ಆಗಲಿದೆ. ಚಿತ್ರಕ್ಕೆ ಸಾಕಷ್ಟು ರೀಸರ್ಚ್ ಕೆಲಸದ ಅವಶ್ಯಕತೆ ಇತ್ತು. ಅದಕ್ಕೆ ಸಾಕಷ್ಟು ಸಮಯವಾಯಿತು. ಇದೊಂದು ಅಪರೂಪದ ಚಿತ್ರವಾಗಲಿದೆ’ ಎಂದು ಅವರು ಹೇಳಿದ್ದರು.

ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲ ‘ಹನುಮಾನ್’ ಎಂಬ ಬ್ಲಾಕ್‌ ಬಸ್ಟರ್‌ ಚಿತ್ರವನ್ನು ನಿರ್ಮಿಸಿದ್ದ ನಿರಂಜನ್‍ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಹೆಸರುಗಳನ್ನು ಚಿತ್ರತಂಡ ಸದ್ಯದಲ್ಲೇ ಘೋಷಿಸಲಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago