kicha sudeep
ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಂದರ್ಭದಲ್ಲಿ, ಚಿತ್ರರಂಗದಲ್ಲಿ ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎನ್ನುವುದು ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದರು. ಇದನ್ನು ಎಚ್ಚರಿಕೆ ಅಂತಾದರೂ ಅಂದುಕೊಳ್ಳಿ ಅಥವಾ ಮನವಿ ಎಂದಾದರೂ ತಿಳಿದುಕೊಳ್ಳಿ ಎಂದಿದ್ದರು. ಈ ಹೇಳಿಕೆ ಚಿತ್ರರಂಗದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಕೆಲವು ನಟ-ನಟಿಯರು ಡಿಕೆಶಿ ವಿರುದ್ಧ ತಮ್ಮ ಬೇಸರವನ್ನು ಹೊರಹಾಕಿದ್ದರು.
ಈ ಕುರಿತು ಸುದೀಪ್ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಇದರಲ್ಲಿ ಡಿ.ಕೆ.ಶಿವಕುಮಾರ್ ಅವರ ತಪ್ಪಿಲ್ಲ, ಇದು ನಟ ಮತ್ತು ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಕಿತಾಪತಿ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ‘ಇದೆಲ್ಲಾ ಸಾಧು ಕೋಕಿಲ. ಇದರಲ್ಲಿ ಡಿಕೆ ಸಾಹೇಬರದ್ದು ಏನೂ ಇಲ್ಲ. ಚಿತ್ರರಂಗದವರು ಚಿತ್ರರಂಗದ ಕಾರ್ಯಕ್ರಮಕ್ಕೆ ಬರಲಿಲ್ಲ ಎಂಬ ಬೇಸರದಲ್ಲಿ ಅವರು ಮಾತನಾಡಿದ್ದರು. ಆದರೆ, ಎಲ್ಲರನ್ನೂ ಒಟ್ಟಿಗೆ ಕರೆದರೆ, ಸಂಭಾಳಿಸುವುದು ಹೇಗೆ? ಸೆಕ್ಯುರಿಟಿ ಕೊಡುವುದು ಹೇಗೆ? ಎಂದು ಬಹಳಷ್ಟು ಜನರನ್ನು ಕರೆದಿರಲಿಲ್ಲ. ಅದನ್ನ ಮೊದಲೇ ಅವರಿಗೆ ಹೇಳಬೇಕಿತ್ತು. ಅಲ್ಲಿ ಬಂದು ಮಾತನಾಡಿದಾಗ ಸೈಲೆಂಟ್ ಆಗಿದ್ದರು. ಇದು ಸಾಧು ಅವರದ್ದೇ ಕಿತಾಪತಿ. ವೈಯಕ್ತಿಕವಾಗಿ ಕಾರ್ಯಕ್ರಮಕ್ಕೆ ಕರೆದವರು ಬಂದಿದ್ದಾರೆ. ಕೆಲವರಿಗೆ ಬರೋಕಾಗಿಲ್ಲ’ ಎಂದರು.
ಇದರಲ್ಲಿ ಸಾಧು ಅವರದ್ದೂ ತಪ್ಪಿಲ್ಲ ಎಂದ ಸುದೀಪ್, ‘ಅವರು ಯಾವಾಗಲೂ ತಮಾಷೆ ಮಾಡಿಕೊಂಡೇ ಇರ್ತಾರೆ. ಇದನ್ನೂ ತಮಾಷೆಯಾಗೇ ಹೇಳಿದ್ದಾರೆ. ಆದರೆ, ಅದು ಗಂಭೀರವಾಯ್ತು’ ಎಂದು ಹೇಳಿದರು.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…