ಮನರಂಜನೆ

ಸುದೀಪ್‌ ಅಭಿನಯದ ‘K 47’ ಚೆನ್ನೈನಲ್ಲಿ ಪ್ರಾರಂಭ

‘ಮ್ಯಾಕ್ಸ್’ ನಿರ್ದೇಶಕ ವಿಜಯ್‍ ಕಾರ್ತಿಕೇಯ ನಿರ್ದೇಶನದಲ್ಲಿ ಸುದೀಪ್‍ ಅಭಿನಯಿಸುತ್ತಿರುವ ಹೊಸ ಚಿತ್ರದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಸುದೀಪ್‍, ಪ್ರಿಯಾ ಸುದೀಪ್‍, ವಿಜಯ್‍ ಕಾರ್ತಿಕೇಯ ಮುಂತಾದವರು ಹಾಜರಿದ್ದರು. ಇದು ಸುದೀಪ್‍ ಅಭಿನಯದ 47ನೇ ಚಿತ್ರವಾಗಿದ್ದು, ಸದ್ಯಕ್ಕೆ ‘ಕೆ-47’ ಎಂದು ಕರೆಯಲಾಗುತ್ತಿದೆ.

ಇದು ‘ಮ್ಯಾಕ್ಸ್’ ಚಿತ್ರದ ಪ್ರೀಕ್ವೆಲ್‍ ಆಗಿದ್ದು, ಚಿತ್ರಕ್ಕೆ ‘ಮ್ಯಾಕ್ಸ್ 2’ ಎಂಬ ಹೆಸರಿಡಲಾಗಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ಇದು ‘ಮ್ಯಾಕ್ಸ್ 2’ ಅಲ್ಲ ಎಂದು ಸುದೀಪ್‍ ಸ್ಪಷ್ಟಪಡಿಸಿದ್ದಾರೆ. ‘ಇದು ಬೇರೆಯದೇ ಪಾತ್ರ. ಬೇರೆಯದೇ ವ್ಯಕ್ತಿತ್ವ. ‘ಮ್ಯಾಕ್ಸ್’ನ ಅರ್ಜುನ್‍ ಮಹಾಕ್ಷಯ್ ಪಾತ್ರಕ್ಕಿಂತ ವಿಭಿನ್ನವಾದದ್ದು. ಈ ಪಾತ್ರ ಮುತ್ತತ್ತಿ ಸತ್ಯರಾಜು ಪಾತ್ರದಂತಿದೆ. ಹಾಗಾಗಿ, ‘ಮ್ಯಾಕ್ಸ್ 2’ ಚಿತ್ರವನ್ನು ಸದ್ಯಕ್ಕೆ ಕೈಬಿಟ್ಟು, ಬೇರೆಯದೇ ಹೊಸ ಚಿತ್ರ ಮಾಡುವುದಕ್ಕೆ ಹೊರಟಿದ್ದೇವೆ’ ಎಂದು ಹೇಳಿದ್ದಾರೆ.

‘ಮ್ಯಾಕ್ಸ್’ ತರಹ ಈ ಚಿತ್ರದಲ್ಲೂ ಸುದೀಪ್‍ಗೆ ನಾಯಕಿ ಇರುವುದಿಲ್ಲವಂತೆ. ಈ ಬಗ್ಗೆ ಮಾತನಾಡಿರುವ ಸುದೀಪ್‍, ‘ಚಿತ್ರದಲ್ಲಿ ಒಂದು ನಾಯಕಿ ಪಾತ್ರ ಇತ್ತು. ಆದರೆ, ಕಥೆಯ ಓಟಕ್ಕೆ ನಾಯಕಿ ಮತ್ತು ಆಕೆಯ ದೃಶ್ಯಗಳ ಅವಶ್ಯಕತೆ ಇಲ್ಲ ಎಂದನಿಸಿದ್ದರಿಂದ ಆ ಪಾತ್ರವನ್ನು ಕೈಬಿಟ್ಟಿದ್ದೇವೆ. ನಾಯಕಿ ಪಾತ್ರವನ್ನು ಸುಮ್ಮನೆ ತುರುಕಬಾರದು. ಚಿತ್ರದಲ್ಲಿ ನಾಯಕಿ ಇರಬೇಕೆಂದರೆ ಒಳ್ಳೆಯ ಪಾತ್ರ ಇರಬೇಕು. ಕೆಲವೊಮ್ಮೆ ಆ ಪಾತ್ರಕ್ಕೆ ನ್ಯಾಯ ಸಲ್ಲಿಸುವುದಕ್ಕೆ ಆಗುವುದಿಲ್ಲ. ಹಾಗಾಗಿ, ನಾಯಕಿ ಪಾತ್ರವನ್ನು ಬಿಟ್ಟಿದ್ದೇವೆ’ ಎಂದಿದ್ದಾರೆ.

ಇನ್ನೂ ಹೆಸರಿಡದ ಈ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಣ ಸಂಸ್ಥೆ ಸತ್ಯಜ್ಯೋತಿ ಫಿಲಂಸ್‍ ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ವಿಜಯ್‍ ಕಾರ್ತಿಕೇಯ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್‍ ಸಂಗೀತ ಮತ್ತು ಶೇಖರ್‍ ಚಂದ್ರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

11 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

12 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

12 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

13 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

13 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

17 hours ago