ಮನರಂಜನೆ

ಕಿರಣ್‍ ರಾಜ್‍ ಈಗ ‘ಜಾಕಿ’: ಮೇ.15ರಿಂದ ಚಿತ್ರೀಕರಣ ಪ್ರಾರಂಭ

‘ಮೇಘ’ ಚಿತ್ರದ ಬಿಡುಗಡೆಯ ನಂತರ ಕಿರುತೆರೆಯಲ್ಲಿ ‘ಕರ್ಣ’ನಾಗಿರುವ ಕಿರಣ್‍ ರಾಜ್‍, ಈಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದೊಂದಿಗೆ ಬರುವುದಕ್ಕೆ ಸಜ್ಜಾಗುತ್ತಿದ್ದಾರೆ. ಈ ಬಾರಿ ಅವರು ಹೊಸದೊಂದು ಚಿತ್ರವನ್ನು ಒಪ್ಪಿಕೊಂಡಿದ್ದು, ಈ ಚಿತ್ರ ಮೇ ತಿಂಗಳಲ್ಲಿ ಪ್ರಾರಂಭವಾಗಲಿದೆ.

ಈ ಹಿಂದೆ ಕಿರಣ್‍ ರಾಜ್‍ ಅಭಿನಯದ ‘ಬಡ್ಡೀಸ್‍’ ಮತ್ತು ‘ರಾನಿ’ ಚಿತ್ರಗಳನ್ನು ನಿರ್ದೇಶಿಸಿದ್ದ ಗುರುತೇಜ್‍ ಶೆಟ್ಟಿ, ಈಗ ಫ್ಯಾಮಿಲಿ ಸೆಂಟಿಮೆಂಟ್‍ ಒಳಗೊಂಡ ಥ್ರಿಲ್ಲರ್‍ ಚಿತ್ರವೊಂದಕ್ಕೆ ಕೈ ಹಾಕಿದ್ದಾರೆ. ಚಿತ್ರಕ್ಕೆ ‘ಜಾಕಿ 42’ ಎಂಬ ಹೆಸರಿಡಲಾಗಿದ್ದು, ಮೇ.15ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

‘ರಾನಿ’ ಯಲ್ಲಿ ಲಾಂಗ್ ಹಿಡಿದಿದ್ದ ಕಿರಣ್ ರಾಜ್, ಈಗ ಕುದುರೆ ಏರಿ ಜಾಕಿಯಾಗಿದ್ದಾರೆ. ಇದೊಂದು ರೇಸ್‍ ಹಿನ್ನೆಲೆಯ ಕಥೆಯಾಗಿದ್ದು, ಎಲ್ಲಾ ಕಮರ್ಷಿಯಲ್‍ ಅಂಶಗಳೂ ಚಿತ್ರದಲ್ಲಿ ಇವೆಯಂತೆ. ಇತ್ತೀಚೆಗೆ ‘ಜಾಕಿ 42’ ಚಿತ್ರದ ಮೊದಲ ಪೋಸ್ಟರ್‍ ಬಿಡುಗಡೆಯಾಗಿದ್ದು, ರೇಸ್‍ನಲ್ಲಿ ಜಾಕಿಯೊಬ್ಬ ಕುದುರೆ ಓಡಿಸುತ್ತಿರುವ ದೃಶ್ಯವಿದ್ದು, ಕುದುರೆಯ ಕೆಳಗೆ 500 ರೂ.ಗಳ ನೋಟುಗಳ ಬಂಡಲ್‍ ಇದೆ.

ಗೋಲ್ಡನ್ ಗೇಟ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಭಾರತಿ ಸತ್ಯನಾರಾಯಣ‌ ‘ಜಾಕಿ 42’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಬರವಣಿಗೆ ಮತ್ತು ಪ್ರೀ-ಪ್ರೊಡಕ್ಷನ್‍ ಕೆಲಸಗಳು ಭರದಿಂದ ಸಾಗಿದೆ. ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಅಲ್ಲದೆ ವಿದೇಶದಲ್ಲೂ ಚಿತ್ರೀಕರಣ ನಡೆಯಲಿದೆ.

ನಿರ್ಮಾಪಕರನ್ನು ಹೊರತುಪಡಿಸಿ, ‘ರಾನಿ’ಯಲ್ಲಿ ಕೆಲಸ ಮಾಡಿದ ಬಹುತೇಕ ತಂತ್ರಜ್ಞರು ಈ ಚಿತ್ರದಲ್ಲೂ ಕೆಲಸ ಮಾಡುತ್ತಿದ್ದಾರೆ. ರಾಘವೇಂದ್ರ ಬಿ. ಕೋಲಾರ ಛಾಯಾಗ್ರಹಣ, ಸತೀಶ್ ಕಲಾ ನಿರ್ದೇಶನ ಹಾಗೂ ಉಮೇಶ ಆರ್.ಬಿ ಸಂಕಲನ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

7 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

10 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

11 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

11 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

11 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

11 hours ago