ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಅಭಿನಯದ ಮೊದಲ ಚಿತ್ರ ‘ಜೂನಿಯರ್’, ಜುಲೈ 18ರಂದು ಬಿಡುಗಡೆಯಾಗಲಿದೆ. ಚಿತ್ರವು ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ.
ಹೊಸ ನಾಯಕನೊಬ್ಬನ ಚಿತ್ರವನ್ನು ಇದೇ ಮೊದಲ ಬಾರಿಗೆ ದಾಖಲೆಯ 1116 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಕರ್ನಾಟಕದ ಜೊತೆಗೆ ಆಂಧ್ರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲೂ ಚಿತ್ರ ಬಿಡುಗಡೆಯಾಗುತ್ತಿದೆ. ಬೆಂಗಳೂರಿನ ತ್ರಿವೇಣಿ ಸೇರಿದಂತೆ ನೂರಾರು ಚಿತ್ರಮಂದಿರಗಳಲ್ಲಿ ‘ಜೂನಿಯರ್’ ಬಿಡುಗಡೆಯಾಗುತ್ತಿದೆ.
‘ಜೂನಿಯರ್’ ಚಿತ್ರದಲ್ಲಿ ಕಿರೀಟಿಗೆ ಶ್ರೀಲೀಲಾ ನಾಯಕಿಯಾಗಿ ನಟಿಸಿದ್ದಾರೆ. ಮಿಕ್ಕಂತೆ ರವಿಚಂದ್ರನ್, ಜೆನಿಲಿಯಾ ಡಿಸೋಜ ಮುಂತಾದವರು ನಟಿಸಿದ್ದಾರೆ. ಇದೊಂದು ತಂದೆ-ಮಗನ ಬಾಂಧವ್ಯದ ಚಿತ್ರವಾಗಿದ್ದು, ರವಿಚಂದ್ರನ್ ಮತ್ತು ಕಿರೀಟಿ ತಂದೆ-ಮಗನಾಗಿ ಕಾಣಿಸಿಕೊಂಡಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ಕಿರೀಟ, ‘ನನಗೆ ಅಪ್ಪು ಅವರ ‘ಜಾಕಿ’ ಚಿತ್ರ ನಟನಾಗಲು ಸ್ಫೂರ್ತಿ ಕೊಟ್ಟಿತು. ಹೀರೋ ಆಗು ಎಂದು ಪುನೀತ್ ರಾಜಕುಮಾರ್ ನನ್ನನ್ನು ಪ್ರೇರೇಪಿಸಿದರು. ಅವರ ಜೊತೆಗೆ ಹಲವು ದಿನಗಳ ಕಾಲ ಕಳೆದಿದ್ದೇನೆ. ಅವರಿಂದ ತುಂಬಾ ಕಲಿತಿದ್ದೇನೆ. ‘ಜೇಮ್ಸ್’ ಚಿತ್ರದ ಚಿತ್ರೀಕರಣ ಅರಮನೆ ಮೈದಾನದಲ್ಲಿ ನಡೆಯುವಾಗ, ಸುಮಾರು 10 ದಿನಗಳ ಕಾಲ ನಾನು ಅವರ ಜೊತೆಗೆ ಇದ್ದೆ’ ಎಂದರು.
ಪುನೀತ್ ರಾಜಕುಮಾರ್ ನಿರ್ಮಿಸಿದ್ದ ‘ಮಾಯಾಬಜಾರ್’ ಸಿನಿಮಾದ ನಿರ್ದೇಶಕ ರಾಧಾಕೃಷ್ಣ ರೆಡ್ಡಿ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ‘ಬಾಹುಬಲಿ’ ಮತ್ತು ‘RRR’ ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ್ದ ಸೆಂಥಿಲ್ ಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಇನ್ನು, ತೆಲುಗಿನ ಜನಪ್ರಿಯ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಅಲಿಯಾಸ್ ಡಿಎಸ್‍ಪಿ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು…
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…