‘ಕೋಣ’ ಎಂಬ ಚಿತ್ರದಲ್ಲಿ ಕೋಮಲ್ ನಟಿಸುತ್ತಿರುವ ಸುದ್ದಿ ನೆನಪಿದೆಯಲ್ಲಾ? ಕಳೆದ ವರ್ಷ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಈಗ ಚಿತ್ರವು ಸದ್ದಿಲ್ಲದೆ ತಯಾರಾಗಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಅಕ್ಟೋರ್.31ರಂದು ಚಿತ್ರವು ಬಿಡುಗಡೆಯಾಗುತ್ತಿದೆ.
ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತನಿಶಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಪಾಲ್, ರವಿಕಿರಣ್ ಎನ್ ನಿರ್ಮಾಣ ಮಾಡಿರುವ ‘ಕೋಣ’ ಬಿಡುಗಡೆಯಾಗುತ್ತಿರುವ ವಿಷಯವನ್ನು ಹಂಚಿಕೊಳ್ಳಲು ಚಿತ್ರತಂಡದವರು ಸೇರಿದ್ದರು. ಈ ಚಿತ್ರಕ್ಕೆ ಹರಿಕೃಷ್ಣ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ ಮತ್ತು ವೀನಸ್ ನಾಗರಾಜ ಮೂರ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಇದನ್ನು ಓದಿ: ‘ಜೋಡೆತ್ತು’ ಜತೆ ಬಂದ ಚಿಕ್ಕಣ್ಣ: ಮೂರು ಭಾಷೆಗಳಲ್ಲಿ ಮಹೇಶ್ ಸಿನಿಮಾ
ಈ ವೇಳೆ ಮಾತನಾಡಿದ ನಟ ಕೋಮಲ್, ‘ನಾನು ಸ್ಕೂಲ್ ನಲ್ಲಿ ಓದಬೇಕಾದರೆ ನಮ್ಮ ಟೀಚರ್, ಕೋಣ ಕೋಣ ಎನ್ನುತ್ತಿದ್ದರು. ನನಗೆ ಆಗ ಕೋಪ ಬರುತ್ತಿತ್ತು. ಈಗ ಕೋಣ ಚಿತ್ರ ಮಾಡುತ್ತಿರುವುದು ಖುಷಿಯಾಗುತ್ತದೆ. ನನಗೆ ಬಹಳ ತೃಪ್ತಿಕೊಟ್ಟ ಚಿತ್ರ ಇದು. ಸುಮಾರು ಎರಡು ತಿಂಗಳ ಹಿಂದೆಯೇ ಈ ಚಿತ್ರ ಬಂದಿದ್ದರೆ ಚೆನ್ನಾಗಿರುತ್ತಿತ್ತು’ ಎಂದರು.
ನಟಿ ತನಿಶಾ ಕುಪ್ಪಂಡ ಮಾತನಾಡಿ, ‘ಕೋಣ’ ಸಿನಿಮಾದಲ್ಲಿ ನಾನು ಲಕ್ಷ್ಮಿ ಎಂಬ ಪಾತ್ರದಲ್ಲಿ ನಟಿಸುತ್ತಿದ್ದೇನೆ. ಕೋಮಲ್ ಅವರು ನಾರಾಯಣ ಎಂಬ ಪಾತ್ರ ಮಾಡಿದ್ದಾರೆ. ಅವರ ಪತ್ನಿಯಾಗಿ ನಾನು ನಟಿಸಿದ್ದೇನೆ. ಇಷ್ಟು ದಿನ ನೀವು ನೋಡದ ಪಾತ್ರದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಈ ಪಾತ್ರ ನೋಡಿ ಇವರು ಈ ರೀತಿ ನಟಿಸಬಹುದಾ ಎನ್ನಬಹುದು’ ಎಂದರು.
‘ಕೋಣ’ ಚಿತ್ರದಲ್ಲಿ ಕೋಮಲ್ ಮತ್ತು ತನಿಶಾ ಜೊತೆಗೆ ಕೀರ್ತಿರಾಜ್, ರಿತ್ವಿ ಜಗದೀಶ್, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್ ಮುಂತಾದವರು ನಟಿಸಿದ್ದಾರೆ.
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…