ಮನರಂಜನೆ

KRG ಸ್ಟುಡಿಯೋಸ್‍ ಆಯ್ತು, PRK ಪ್ರೊಡಕ್ಷನ್‌ನಿಂದ ವೆಬ್‍ ಸರಣಿ

ಕೆಲವು ದಿನಗಳ ಹಿಂದಷ್ಟೇ KRG ಸ್ಟುಡಿಯೋಸ್‍ ಸಂಸ್ಥೆಯು ‘ಶೋಧ’ ಎಂಬ ವೆಬ್‍ಸರಣಿಯನ್ನು ನಿರ್ಮಿಸಿತ್ತು. ಈ ವೆಬ್‍ಸರಣಿಯು ಜೀ5 ಓಟಿಟಿ ವೇದಿಕೆಯಲ್ಲಿ ಪ್ರಸಾರವಾಯ್ತು. ಇದೀಗ ಕನ್ನಡದ ಇನ್ನೊಂದು ಜನಪ್ರಿಯ ನಿರ್ಮಾಣ ಸಂಸ್ಥೆಯಾದ PRK ಪ್ರೊಡಕ್ಷನ್ಸ್ ಸಂಸ್ಥೆಯು ಜೀ 5 ಸಹಯೋಗದಲ್ಲಿ ವೆಬ್‍ ಸರಣಿ ನಿರ್ಮಿಸುತ್ತಿದೆ. ಅದೇ ‘ಮಾರಿಗಲ್ಲು’.

‘ಮಾರಿಗಲ್ಲು’ ವೆಬ್ ಸರಣಿಯು ಒಂದು ದೈವಿಕ ಥ್ರಿಲ್ಲರ್ ಆಗಿದ್ದು, ನಾಲ್ಕನೇ ಶತಮಾನದ ಕದಂಬರ ಆಳ್ವಿಕೆಯ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಕದಂಬರ ಕಾಲದಿಂದಲ್ಲೂ ಮಾರಿ ಎಂಬ ದೇವತೆಯಿಂದ ಕಾಪಾಡಲ್ಪಟ್ಟಿರುವ ನಿಧಿಯ ಕುರಿತಾಗಿ ಕಥೆ ಇದಾಗಿದ್ದು, ನಂಬಿಕೆ, ಸ್ವಾರ್ಥ, ದುರಾಸೆ ಸುತ್ತ ಸುತ್ತುತ್ತದೆ. ಈ ಸರಣಿಯಲ್ಲಿನ ಪಾತ್ರಗಳು ಯಾವ ರೀತಿ ವರ್ತಿಸುತ್ತಾರೆ, ನಿಧಿಯ ರಹಸ್ಯವನ್ನು ಹೇಗೆ ಭೇದಿಸುತ್ತಾರೆ ಎಂಬುದನ್ನು ಸರಣಿಯ ಸಾರಾಂಶ.

ಸರಣಿಯ ಕುರಿತು ಮಾತನಾಡಿರುವ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್, ‘ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವ ಕಥೆಗಳು ಹಾಗೂ ಜನರ ಜೀವನವನ್ನು ಪ್ರತಿಬಿಂಬಿಸುವ ಕಥೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಪ್ರಯತ್ನ ಮಾಡುತ್ತಿದ್ದು, ಈ ಕಥೆಯು ಕೇವಲ ರಹಸ್ಯ, ಥ್ರಿಲ್ ಅಲ್ಲದೆ, ಕರ್ನಾಟಕ ಜಾನಪದ ಸಂಸ್ಕೃತಿ, ದೈವ ಭಕ್ತಿ ಮುಂತಾದ ಹಲವು ವಿಷಯಗಳನ್ನು ಒಳಗೊಂಡಿರುವ ವಿಭಿನ್ನ ಕಥೆಯಾಗಿದೆ. ಪ್ರತಿಯೊಬ್ಬರೂ ಕಣ್ಣರಳಿಸಿ ನೋಡುವಂಥಾ ಥ್ರಿಲ್ಲರ್ ಇದಾಗಲಿದೆ’ ಎಂದು ಹೇಳಿದ್ದಾರೆ.

ಈ ಹಿಂದೆ, ಪೃಥ್ವಿ ಅಂಬಾರ್ ಅಭಿನಯದ ‘ಮತ್ಸ್ಯಗಂಧ’ ಚಿತ್ರವನ್ನು ನಿರ್ದೇಶಿಸಿದ್ದ ದೇವರಾಜ್‍ ಪೂಜಾರಿ, ‘ಮಾರಿಗಲ್ಲು’ ವೆಬ್‍ಸರಣಿಯನ್ನು ನಿರ್ದೇಶಿಸುತ್ತಿದ್ದಾರೆ. ಎಸ್‍.ಕೆ. ರಾವ್‍ ಅವರ ಛಾಯಾಗ್ರಹಣ ಮತ್ತು ಮುತ್ತು ಗಣೇಶ್‍ ಸಂಗೀತ ಈ ಸರಣಿಗಿದೆ. ಪ್ರವೀಣ್ ತೇಜ್‍ ಮುಂತಾದವರು ಈ ಸರಣಿಯಲ್ಲಿ ನಟಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

4 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

4 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

4 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

4 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

5 hours ago