‘ದುನಿಯಾ’ ವಿಜಯ್ ಅಭಿನಯದ ‘ಲ್ಯಾಂಡ್‍ಲಾರ್ಡ್’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈ ವರ್ಷದ ಕೊನೆಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ, ಚಿತ್ರವು ಮುಂದಿನ ವರ್ಷದ ಜನವರಿಯಲ್ಲಿ ಬಿಡುಗಡೆಯಾಗಲಿದೆ. 2026ರ ಜನವರಿ 23ರಂದು ‘ಲ್ಯಾಂಡ್ ಲಾರ್ಡ್’ ತೆರೆಗೆ ಬರಲಿದೆ.
ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್ ನಿರ್ಮಿಸುತ್ತಿರುವ ‘ಲ್ಯಾಂಡ್‍ಲಾರ್ಡ್’ ಚಿತ್ರದ ಸರ್ವೈವರ್ ಟೀಸರ್ ಬಿಡುಗಡೆ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ನೆರವೇರಿತು. ಟೀಸರ್ ಮೂಲಕ ಚಿತ್ರತಂಡ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ಹಿರಿಯ ನಟಿ ಉಮಾಶ್ರೀ ಅವರನ್ನು ಆತ್ಮೀಯವಾಗಿ ಗೌರವಿಸಲಾಯಿತು.
ಈ ಕುರಿತು ಮಾತನಾಡಿದ ‘ದುನಿಯಾ’ ವಿಜಯ್, ‘ನಿಜಜೀವನದಲ್ಲೂ ನನ್ನನ್ನು ತಾಯಿಯ ತರಹ ಪ್ರೀತಿ ಮಾಡುವ ಹಿರಿಯ ನಟಿ ಉಮಾಶ್ರೀ ಅವರೊಂದಿಗೆ ನಟಿಸಿದ್ದು ಬಹಳ ಸಂತೋಷವಾಗಿದೆ. ನನ್ನ ಮಗಳು ರಿತನ್ಯ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾಳೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ’ ಎಂದರು.
ಇದನ್ನು ಓದಿ: AFRO ಟಪಾಂಗ್’ ಹಾಡಿಗೆ ಶಿವಣ್ಣ ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಭರ್ಜರಿ ಸ್ಟೆಪ್
‘ದುನಿಯಾ’ ವಿಜಯ್ ತೆರೆ ಮೇಲೆ ಮಾತ್ರ ನನ್ನ ಮಗ ಅಲ್ಲ ಎಂದ ಉಮಾಶ್ರೀ, ‘ನಿಜಜೀವನದಲ್ಲೂ ನನ್ನ ಮಗ ಇದ್ದ ಹಾಗೆ. ಆ ರೀತಿಯ ಪ್ರೀತಿ ತೋರಿಸುತ್ತಾರೆ. ಈ ಚಿತ್ರದಲ್ಲಿ ಅಭಿನಯಿಸಿದ್ದು ಬಹಳ ಖುಷಿಯಾಗಿದೆ’ ಎಂದರು.
ರಚಿತಾ ರಾಮ್‍ಗೆ ಕಥೆ ಕೇಳುವಾಗಲೇ ಬಹಳ ಕುತೂಹಲ ಎನಿಸಿತಂತೆ. ‘ಕಥೆ ಕೇಳುತ್ತಿರುವಾಗಲೇ ಈ ಪಾತ್ರ ನಾನೇ ಮಾಡಬೇಕು ಅಂದುಕೊಂಡೆ. ಕಥೆ ಕೇಳಿದ ಮೇಲೆ ನಾನು ದರ್ಶನ್ ಸರ್ ಹಾಗೂ ಲೋಕೇಶ್ ಕನಕರಾಜು ಅವರಿಗೆ ಈ ಚಿತ್ರದ ಬಗ್ಗೆ ಹೇಳಿದೆ. ಅವರು ಕೂಡ ಕಥೆ ಚೆನ್ನಾಗಿದೆ ಎಂದರು. ‘ಜಾನಿ ಜಾನಿ ಎಸ್ ಪಪ್ಪ’ ಚಿತ್ರದ ನಂತರ ನಾನು ‘ದುನಿಯಾ’ ವಿಜಯ್ ಅವರ ಜೊತೆಗೆ ನಟಿಸಿದ್ದೇನೆ’ ಎಂದರು.
‘ಲ್ಯಾಂಡ್‍ಲಾರ್ಡ್’ 80ರ ಕಾಲಘಟ್ಟದಲ್ಲಿ ನಡೆಯುವ ಈ ನೆಲದ ಕಥೆಯಾಗಿದ್ದು, ಚಿತ್ರದಲ್ಲಿ ‘ದುನಿಯಾ’ ವಿಜಯ್, ರಚಿತಾ ರಾಮ್, ಉಮಾಶ್ರೀ ಜೊತೆಗೆ ರಿತನ್ಯ, ಶಿಶಿರ್, ರಾಕೇಶ್ ಅಡಿಗ, ಅಚ್ಯುತ್ ಕುಮಾರ್, ಮಿತ್ರ, ಅಭಿಷೇಕ್ ದಾಸ್ ಮುಂತಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…