ಮನರಂಜನೆ

ಅಮೃತ ಸಿನಿ ಕ್ರಾಫ್ಟ್ ನಿರ್ಮಾಣದ ಎರಡು ಚಿತ್ರಗಳಿಗೆ ಚಾಲನೆ

ಗುರುಪೂರ್ಣಿಮೆಯ ದಿನದಂದು ಉದ್ಯಮಿ ವಿಜಯ್‍ ಟಾಟಾ, ತಮ್ಮ ಅಮೃತಾ ಸಿನಿ ಕ್ರಾಫ್ಟ್ ಸಂಸ್ಥೆಯ ಮೂಲಕ ಆರು ಚಿತ್ರಗಳನ್ನು ಒಂದೇ ವೇದಿಕೆಯಲ್ಲಿ ಘೋಷಣೆ ಮಾಡಿದ್ದರು. ಈ ಸಂಸ್ಥೆಯ ಲೋಗೋವನ್ನು ನಟ-ನಿರ್ದೇಶಕ ವಿ. ರವಿಚಂದ್ರನ್ ಹಾಗೂ ಶ್ರೀಮುರಳಿ ಬಿಡುಗಡೆ ಮಾಡಿದ್ದರು. ಈ ಆರು ಚಿತ್ರಗಳ ಪೈಕಿ ಈಗ ಎರಡು ಚಿತ್ರದ ಸ್ಕ್ರಿಪ್ಟ್ ಪೂಜೆಯನ್ನು ಮಾಡಿ ಕೆಲಸಕ್ಕೆ ಚಾಲನೆ ನೀಡಿದ್ದಾರೆ.

ಈ ಎರಡು ಚಿತ್ರಗಳ ಪೈಕಿ ವಿನಯ್ ರಾಜಕುಮಾರ್ ನಟನೆಯಲ್ಲಿ ಡಿ.ಎಸ್.ಪಿ ವರ್ಮ ನಿರ್ದೇಶನದ ಚಿತ್ರಕ್ಕೆ ಪೂಜೆ ಮಾಡುವ ಮೂಲಕ ತಮ್ಮ ಮೊದಲ ಸಿನಿಮಾ ಕೆಲಸಕ್ಕೆ ಚಾಲನೆ ನೀಡಿದ್ದಾರೆ. ಹಾಗೆಯೇ ಮತ್ತೊಂದು ಚಿತ್ರವನ್ನು ಮಾನಸ ನಿರ್ದೇಶನ ಮಾಡುತ್ತಿದ್ದಾರೆ. ಈ ಎರಡು ಚಿತ್ರದ ಕೆಲಸಗಳಿಗೆ ಚಾಲನೆ ಸಿಕ್ಕಿದ್ದು, ಸದ್ಯದಲ್ಲೇ ಚಿತ್ರದ ಮುಹೂರ್ತ ಸಹ ನೆರವೇರಲಿದೆ.

ಈ ಕುರಿತು ಮಾತನಾಡಿರುವ ನಿರ್ಮಾಪಕ ವಿಜಯ್ ಟಾಟಾ, ‘ಕನ್ನಡ ಚಿತ್ರರಂಗದಲ್ಲಿ ಚಿತ್ರಗಳನ್ನು ನಿರ್ಮಿಸುವ ಮೂಲಕ ಹೊಸ ನಿರ್ದೇಶಕ, ಕಲಾವಿದರಿಗೆ ಅವಕಾಶ ಸಿಗುವಂತಾಗಬೇಕು. ನಮ್ಮ ಉದ್ದೇಶ ಒಂದೆರಡು ಚಿತ್ರಗಳನ್ನು ಮಾಡಿ ಹೋಗುವುದಲ್ಲ. ನಿರಂತರವಾಗಿ ಚಿತ್ರೋದ್ಯಮದಲ್ಲಿ ನಮ್ಮನ್ನ ನಾವು ತೊಡಗಿಸಿಕೊಳ್ಳಬೇಕೆಂಬುದು ನಿರ್ಧರಿಸಿದ್ದೇವೆ. ನಿರ್ಮಾಣದ ಜೊತೆಗೆ ವಿತರಣೆಯಲ್ಲಿ ತೊಡಗಿಸಿಕೊಳ್ಳುವ ಯೋಚನೆಯೂ ಇದೆ. ಪ್ರತಿ ಶುಕ್ರವಾರವೂ ನಮ್ಮ ಸಂಸ್ಥೆಯು ಒಂದಲ್ಲ ಒಂದು ಕನ್ನಡ ಚಿತ್ರಗಳ ಜೊತೆ ಇದ್ದೇ ಇರುತ್ತೇವೆ’ ಎಂದು ಹೇಳಿಕೊಂಡಿದ್ದಾರೆ.

ಅಮೃತಾ ಸಿನಿ ಕ್ರಾಫ್ಟ್ ನಿರ್ಮಿಸುತ್ತಿರುವ ಚಿತ್ರಗಳ ಪೈಕಿ, ಒಂದು ಚಿತ್ರದಲ್ಲಿ ಅಜೇಯ್‍ ರಾವ್‍ ನಾಯಕನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಎರಡನೇ ಚಿತ್ರವನ್ನು ಡಿ.ಎಸ್.ಪಿ ವರ್ಮ ನಿರ್ದೇಶಿಸಿದರೆ, ವಿನಯ್ ರಾಜಕುಮಾರ್ ನಾಯಕನಾಗಿ ಕಣಿಸಿಕೊಳ್ಳುತ್ತಿದ್ದಾರೆ. ಮೂರನೇ ಚಿತ್ರಕ್ಕೆ ‘ಸಿಂಪಲ್‍’ ಸುನಿ ನಿರ್ದೇಶಕ. ನಾಲ್ಕನೆಯ ಚಿತ್ರವನ್ನು ರಿಷಬ್ ಆರ್ಯ ನಿರ್ದೇಶಿಸಲಿದ್ದು, ವಿಕ್ರಂ ರವಿಚಂದ್ರನ್ ನಾಯಕನಾಗಿ ನಟಿಸುತ್ತಿದ್ದಾರೆ. ಐದನೇ ಚಿತ್ರದ ಮೂಲಕ ನಟ ಪ್ರಶಾಂತ್‍ ಸಿದ್ದಿ ನಿರ್ದೇಶಕರಾದರೆ, ವಿಕ್ಕಿ ವರುಣ್‍ ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಆರನೇ ಚಿತ್ರವನ್ನು ಮಂಜು ಸ್ವರಾಜ್‍ ನಿರ್ದೇಶನ ಮಾಡುತ್ತಿದ್ದಾರೆ. ಇದಲ್ಲದೆ, ಏಳನೇ ಚಿತ್ರದಲ್ಲಿ ರವಿಚಂದ್ರನ್‍ ನಟಿಸುತ್ತಿರುವುದಾಗಿ ಈಗಾಗಲೇ ಹೇಳಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

60 mins ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

5 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

5 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

5 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

5 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

5 hours ago