ನಟ ಬಾಲಕೃಷ್ಣ ಅವರಿಗೆ ಅಭಿಮಾನ್ ಸ್ಟುಡಿಯೋ ಕಟ್ಟುವುದಕ್ಕೆ ನೀಡಿದ್ದ ಜಾಗವನ್ನು ಹಿಂಪಡೆಯಲು ಸರ್ಕಾರ ತೀರ್ಮಾನಿಸಿದೆ. ಆ ಜಾಗವನ್ನು ಅರಣ್ಯ ಇಲಾಖೆಯ ಸುಪರ್ದಿಗೆ ನೀಡಲು ಮುಂದಾಗಿದೆ.
ಈ ಸಂಬಂಧ ಇತ್ತೀಚೆಗೆ ಅರಣ್ಯ ಇಲಾಖೆಯ ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಜಗದೀಶ್ ಅವರಿಗೆ ಪತ್ರ ಬರೆದು, ಆ ಜಾಗವನ್ನು ಅರಣ್ಯ ಇಲಾಖೆಯ ಸುಪರ್ದಿಗೆ ನೀಡಲು ಮನವಿ ಸಲ್ಲಿಸಿದ್ದಾರೆ.
70ರ ದಶಕದಲ್ಲಿ ಸ್ಟುಡಿಯೋ ಕಟ್ಟುವುದಕ್ಕಾಗಿ ಸರ್ಕಾರವು ಹಿರಿಯ ನಟ ಟಿ.ಎನ್.ಬಾಲಕೃಷ್ಣ ಅವರಿಗೆ ಗುತ್ತಿಗೆ ಆಧಾರದ ಮೇಲೆ 20 ಎಕರೆ ಜಾಗ ನೀಡಿತ್ತು. ಸರ್ಕಾರದಿಂದ ಜಾಗ ಪಡೆದ ಬಾಲಣ್ಣ, ಅಲ್ಲಿ ಅಭಿಮಾನ್ ಸ್ಟುಡಿಯೋ ಕಟ್ಟಿದರು. ಅವರ ನಿಧನದ ನಂತರ, 2003ರಲ್ಲಿ 20 ಎಕರೆ ಪೈಕಿ, 10 ಎಕರೆಯನ್ನು ಅವರ ಮಕ್ಕಳು ಮಾರಿಕೊಂಡಿದ್ದರು. ಉಳಿದ 10 ಎಕರೆ ಜಾಗವನ್ನೂ ಮಾರಲು ಅಗ್ರಿಮೆಂಟ್ ಆಗಿದ್ದು, ಅದರಲ್ಲಿದ್ದ ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನೂ ಇತ್ತೀಚೆಗೆ ನೆಲೆಸಮಗೊಳಿಸಲಾಗಿತ್ತು.
ಸರ್ಕಾರಿ ಜಾಗವನ್ನು ಮಾರಿಕೊಳ್ಳುವುದರ ಜೊತೆಗೆ, ಕಾನೂನನ್ನು ಉಲ್ಲಂಘಿಸಿದ್ದರಿಂದ, ತಪ್ಪು ಮಾಡಿದವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ವಿಷ್ಣುವರ್ಧನ್ ಅಭಿಮಾನಿಗಳು ಸೇರಿ ಹಲವರು ಹೋರಾಟ ನಡೆಸಿದ್ದರು.
ಈ ಹೋರಾಟಕ್ಕೀಗ ಫಲ ಸಿಕ್ಕಿದ್ದು, ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿರುವುದರಿಂದ ಸ್ಟುಡಿಯೋ ಸ್ಥಾಪಿಸುವ ಕುರಿತು ಮಂಜೂರಾದ ಆದೇಶವನ್ನು ರದ್ದುಪಡಿಸುವುದರ ಜೊತೆಗೆ, ಅರಣ್ಯ ಇಲಾಖೆಯ ಹೆಸರಿಗೆ ಇಂಡೀಕರಣ ಮಾಡಬೇಕೆಂದು ಅರಣ್ಯ ಇಲಾಖೆಯ ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಜಗದೀಶ್ ಅವರಿಗೆ ಪತ್ರ ಬರೆದಿದ್ದಾರೆ.
ಅಭಿಮಾನ್ ಸ್ಟುಡಿಯೋವನ್ನು ಸರ್ಕಾರವು ಅರಣ್ಯ ಪ್ರದೇಶವೆಂದು ಘೋಷಿಸಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಹೊಸದೇನೂ ಅಲ್ಲ. ಈ ಹಿಂದೆಯೂ ನಡೆದಿತ್ತು. ಆದರೆ ಸರ್ಕಾರದ ವತಿಯಿಂದ ಸರಿಯಾದ ರೀತಿಯಲ್ಲಿ ವಾದ ಮಂಡನೆ ಆಗದ ಕಾರಣದಿಂದ ಅಭಿಮಾನ್ ಸ್ಟುಡಿಯೋದ ಮಾಲೀಕರು ಆ ಪ್ರಕ್ರಿಯೆ ವಿರುದ್ಧ ತಡೆಯಾಜ್ಞೆ ತಂದು ಅದನ್ನು ಖಾಸಗಿ ಸ್ವತ್ತು ಎಂದು ಬಿಂಬಿಸಿ ಅವ್ಯವಹಾರ ನಡೆಸಲಾಗುತ್ತಿತ್ತು. ಈ ಬಾರಿಯೂ ಅದೇ ಮರುಕಳಿಸಬಾರದೆಂದು ಡಾ. ವಿಷ್ಣುಸೇನಾ ಸಮಿತಿಯ ರಾಜ್ಯಾಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ್ ಮತ್ತು ಪದಾಧಿಕಾರಿಗಳು, ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು, ಅಭಿಮಾನ್ ಸ್ಟುಡಿಯೋವನ್ನು ಸರ್ಕಾರ ಅಧೀನಕ್ಕೆ ತೆಗೆದುಕೊಂಡು, ಅಲ್ಲಿ ಒಂದು ಜೈವಿಕ ಶ್ವಾಸಕೋಶ ಉದ್ಯಾನವನವನ್ನು ನಿರ್ಮಿಸುವುದಾಗಿಯೂ ಮತ್ತು ವಿಷ್ಣುವರ್ಧನ್ ಅವರ ಸಮಾಧಿಗೆ ಸ್ಥಳವನ್ನು ನೀಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ಆಶ್ವಾಸನೆ ನೀಡಿದ್ದಾರೆ.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್ಪಾತ್ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…