ಇಂದ್ರಜಿತ್ ಲಂಕೇಶ್ ತಮ್ಮ ಮಗ ಸಮರ್ಜಿತ್ ಲಂಕೇಶ್ ಅಭಿನಯದಲ್ಲಿ ನಿರ್ಮಿಸಿ-ನಿರ್ದೇಶಿಸಿರುವ ‘ಗೌರಿ’ ಚಿತ್ರದ ಕೆಲಸಗಳು ಬಹುತೇಕ ಮುಗಿದು ಬಿಡುಗುಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದಲ್ಲಿ ‘ಲೂಸ್ ಮಾದ’ ಖ್ಯಾತಿಯ ಯೋಗಿ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಹೌದು, ‘ಗೌರಿ’ ಚಿತ್ರದಲ್ಲಿ ‘ಲೂಸ್ ಮಾದ’ ಯೋಗಿ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಎಂಬ ಸುದ್ದಿ ಇದೆ. ಆದರೆ, ಅವರ ಪಾತ್ರವೇನು? ಚಿತ್ರದಲ್ಲಿ ಅವರೇನು ಮಾಡುತ್ತಾರೆ? ಅವರ ಪಾತ್ರದ ಹೆಸರೇನು? ಎಂಬ ವಿಷಯಗಳನ್ನು ರಹಸ್ಯವಾಗಿಯೇ ಇಡಲಾಗಿದೆ. ಈ ಚಿತ್ರದಲ್ಲಿ ಯೋಗಿ ಕೆಲವು ನಿಮಿಷಗಳ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ.
‘ಗೌರಿ’ ಚಿತ್ರಕ್ಕೂ ಅಕ್ಕ ಗೌರಿಗೂ ಯಾವುದೇ ಸಂಬಂಧವಿಲ್ಲದಿದ್ದರೂ ಅವರ ಮೇಲಿನ ಅಭಿಮಾನದಿಂದ ಇಂದ್ರಜಿತ್ ಲಂಕೇಶ್ ಅವರು ಈ ಚಿತ್ರಕ್ಕೆ ಅಕ್ಕನ ಹೆಸರಿಟ್ಟಿದ್ದಾರೆ. ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ. ನೈಜ ಘಟನೆ ಆಧರಿಸಿ ನಿರ್ಮಾಣವಾಗಿರುವ ‘ಗೌರಿ’ ಚಿತ್ರಕ್ಕೆ ಬೆಂಗಳೂರು, ಚಿಕ್ಕಮಗಳೂರು ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ.
‘ಗೌರಿ’ ಚಿತ್ರದ ‘ಟೈಮ್ ಬರತ್ತೆ …’, ‘ಲವ್ ಯೂ ಸಾನಿಯಾ …’, ‘ಧೂಳ್ ಎಬ್ಬಿಸಾವ …’, ‘ಮುದ್ದಾದ ನಿನ್ನ ಹೆಸರೇನು …’ ಹಾಗೂ ‘ಗೌರಿ …’ ಎಂಬ ಐದು ಹಾಡುಗಳು ಈಗಾಗಲೇ ಯೂಟ್ಯೂಬ್ನ ಆನಂದ್ ಆಡಿಯೋ ಚಾನಲ್ನಲ್ಲಿ ಬಿಡುಗಡೆ ಆಗಿ, ಮೆಚ್ಚುಗೆ ಪಡೆಯುತ್ತಿವೆ.
‘ಗೌರಿ’ ಚಿತ್ರದಲ್ಲಿ ಸಮರ್ಜಿಂತ್ ಮತ್ತು ಸಾನ್ಯಾ ಜೊತೆಗೆ ಅಕುಲ್ ಬಾಲಾಜಿ, ಸಿಹಿ ಕಹಿ ಚಂದ್ರು, ಮುಖ್ಯಮಂತ್ರಿ ಚಂದ್ರು, ‘ಕಾಂತಾರ’ ಖ್ಯಾತಿಯ ಮಾಲತಿ ಸುಧೀರ್ ಸಂಪತ್ ಮೈತ್ರೇಯ, ಚಂದುಗೌಡ ಸೇರಿದಂತೆ ಬಹಳಷ್ಟು ಜನ ನಟಿಸಿದ್ದಾರೆ. ಚಿತ್ರಕ್ಕೆ ಎ.ಜೆ.ಶೆಟ್ಟಿ ಹಾಗೂ ಕೃಷ್ಣಕುಮಾರ್ ಛಾಯಾಗ್ರಹಣ ಮಾಡಿದ್ದಾರೆ.
ಅಂದಹಾಗೆ, ‘ಗೌರಿ’ ಚಿತ್ರವು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…