ನಟನಾಗಿ ಹೆಸರಾಗಿದ್ದ ಡಾರ್ಲಿಂಗ್ ಕೃಷ್ಣ ಲವ್ ಮಾಕ್ಟೇಲ್ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದರು. ಅದಾದ ನಂತರ ಬಂದಿದ್ದ ಎರಡನೇ ಆವೃತ್ತಿಯೂ ಗೆದ್ದಿತ್ತು.
ಆ ಗೆಲುವಿನ ಪ್ರಭೆಯಲ್ಲಿ ಲವ್ ಮಾಕ್ಟೇಲ್ 3 ಚಿತ್ರಕ್ಕೆ ಚಾಲನೆ ನೀಡಿದ್ದ ಡಾರ್ಲಿಂಗ್ ಕೃಷ್ಣ, ಇತ್ತೀಚೆಗಷ್ಟೇ ಮೋಷನ್ ಪೋಸ್ಟರ್ ಲಾಂಚ್ ಮಾಡಿದ್ದರು. ಈ ಮೂಲಕ ಆವೃತ್ತಿ ನವಿರಾದ ಕುತೂಹಲವೊಂದಕ್ಕೆ ಚಾಲನೆ ನೀಡಿತ್ತು.
ಇದೀಗ ಹೊಸ ವರ್ಷದ ಉಡುಗೊರೆ ಎಂಬಂತೆ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಡಾಲಿಂಗ್ ಕೃಷ್ಣ ಘೋಷಿಸಿದ್ದಾರೆ. ಇದರೊಂದಿಗೆ ಲವ್ ಮಾಕ್ಟೇಲ್ 3 ಪ್ರೇಕ್ಷಕರ ಮುಂದೆ ಬರಲು ಬರಲು ಇದೇ ಏಪ್ರಿಲ್.10ರಂದು ಮುಹೂರ್ತ ನಿಗದಿಯಾದಂತಾಗಿದೆ.
2020ರಲ್ಲಿ ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶನ ಮಾಡಿದ್ದ ಲವ್ ಮಾಕ್ಟೇಲ್ ಚಿತ್ರ ತೆರೆಕಂಡಿತ್ತು. ನವಿರು ಪ್ರೇಮದೊಂದಿಗೆ ಹೊಸೆದುಕೊಂಡಿದ್ದ ಸೂಕ್ಷ್ಮ ಕಥನದ ಮೂಲಕ ಗೆದ್ದ ನಂತರ ಲವ್ ಮಾಕ್ಟೇಲ್ 2 ಚಿತ್ರವನ್ನು ಕೃಷ್ಣ ರೂಪಿಸಿದ್ದರು.
ಇದೀಗ ತೆರೆಕಾಣಲು ಸಜ್ಜಾಗಿರುವ ಲವ್ ಮಾಕ್ಟೇಲ್ 3 ಈ ಹಿಂದಿನ ಎರಡು ಆವೃತ್ತಿಗಿಂತಲೂ ಭಿನ್ನವಾಗಿರಲಿದೆ ಎಂಬ ವಿಚಾರವನ್ನಷ್ಟೇ ಕೃಷ್ಣ ಹಂಚಿಕೊಂಡಿದ್ದಾರೆ. ಕಥೆ, ನಿರೂಪಣೆ ಸೇರಿದಂತೆ ಎಲ್ಲದರಲ್ಲಿಯೂ ಲವ್ ಮಾಕ್ಟೇಲ್ 3 ಹೊಸ ಅನುಭೂತಿ ಕೊಡಲಿದೆ ಎಂದು ಕೃಷ್ಣ ಭರವಸೆ ನೀಡಿದ್ದಾರೆ.
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…
ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…
ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…
ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ…
ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…
ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ…