ಮನರಂಜನೆ

‘ಮುತ್ತರಸ’ನಾದ ಮಡೆನೂರ್ ಮನು: ಹುಟ್ಟುಹಬ್ಬದಂದೇ ಶೀರ್ಷಿಕೆ ಅನಾವರಣ

ಮಡೆನೂರು ಮನು ಜೀವನದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಏನೇನೋ ಆಗಿಹೋಯ್ತು. ಮನು ನಾಯಕನಾಗಿ ನಟಿಸಿದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಬಿಡುಗಡೆಯ ಹಿಂದಿನ ದಿನ ಅತ್ಯಾಚಾರ ಆರೋಪ ಹೊತ್ತು, ಮನು ಜೈಲು ಪಾಲಾಗಿದ್ದರು. ಸಾಲದ್ದಕ್ಕೆ ಶಿವರಾಜಕುಮಾರ್‍, ದರ್ಶನ್‍ ಮತ್ತು ಧ್ರುವ ಸರ್ಜಾ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂಬ ಕಾರಣಕ್ಕೆ ಚಿತ್ರರಂಗದಿಂದ ಬಹಿಷ್ಕೃತರಾದರು.

ಇದೀಗ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಅವರು ರಾಜಿಯಾಗಿದ್ದಾರೆ. ಇನ್ನು, ಅವರ ಮೇಲೆ ಹಾಕಿದ್ದ ನಿಷೇಧವನ್ನು ಚಿತ್ರರಂಗ ತೆಗೆದಿದ್ದು, ಶಿವರಾಜಕುಮಾರ್ ಸಹ ಕ್ಷಮಿಸಿ ಕಳಿಸಿದ್ದಾರೆ. ಇದೆಲ್ಲದರಿಂದ, ಮನು ಮತ್ತೊಮ್ಮೆ ಚಿತ್ರಗಳಲ್ಲಿ ನಟಿಸುವುದಕ್ಕೆ ಸ್ವತಂತ್ರವಾಗಿದ್ದು, ಅವರ ಹೊಸ ಚಿತ್ರವೊಂದು ಸದ್ಯದಲ್ಲೇ ಶುರುವಾಗಲಿದೆ.

ಇದನ್ನು ಓದಿ : ಮೈಸೂರು: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್‌ ರ್ಯಾಲಿ

ಇತ್ತೀಚೆಗೆ ಮನು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಅವರ ಹೊಸ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ. ಈ ಚಿತ್ರಕ್ಕೆ ‘ಮುತ್ತರಸ’ ಎಂಬ ಹೆಸರಿಡಲಾಗಿದ್ದು, ಈ ಚಿತ್ರವನ್ನು ಜೆ.ಕೆ. ಮೂವೀಸ್ ಲಾಂಛನದಲ್ಲಿ ಕೆ.ಎಂ. ನಟರಾಜ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಹಿಂದೆ ಮನು ಅಭಿನಯದ ‘ಕೇದರನಾಥ್‍ ಕುರಿ ಫಾರಂ’ ಚಿತ್ರವನ್ನು ನಟರಾಜ್‍ ನಿರ್ಮಿಸಿದ್ದರು.

ವಸಿಷ್ಠ ಸಿಂಹ, ಹಿರಿಯ ನಟರಾದ ಎಂ.ಎಸ್.ಉಮೇಶ್, ಕರಿಸುಬ್ಬು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ, ಮಡೆನೂರ್ ಮನು ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು. ಪದ್ಮಶ್ರೀ ಪುರಸ್ಕೃತರಾದ ಮಂಜಮ್ಮ ಜೋಗತಿ ಶೀರ್ಷಿಕೆ ಅನಾವರಣ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮನು, ‘ಕೆಲವು ದಿನಗಳ ಹಿಂದೆ ನನ್ಮ ಜೀವನದಲ್ಲಿ ಆದ ಕಹಿ ಘಟನೆಗಳನ್ನೆಲ್ಲಾ ಮರೆತಿದ್ದೇನೆ. ಸದ್ಯಕ್ಕೆ ಯಾವುದೇ ಸಮಸ್ಯೆಗಳು ಇಲ್ಲ. ಆ ಸಮಯದಲ್ಲಿ ನನ್ನ ಜೊತೆಗೆ ನಿಂತವರಿಗೆ ನಾನು ಚಿರಋಣಿ. ಇಂದು ನನ್ನ ಹೊಸ ಸಿನಮಾದ ಶೀರ್ಷಿಕೆ ಬಿಡುಗಡೆಯಾಗಿದೆ. ‘ಮುತ್ತರಸ’ ಚಿತ್ರದ ಶೀರ್ಷಿಕೆ ಕೊಟ್ಟದ್ದು ನಿರ್ದೇಶಕ ರಾಮ್ ನಾರಾಯಣ್. ಮುಂದಿನ ತಿಂಗಳಿನಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ನಿರ್ದೇಶಕರು ಯಾರು? ತಾರಾಬಳಗದಲ್ಲಿ ಯಾರಿದ್ದಾರೆ? ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ’ ಎಂದರು.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

10 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

10 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

11 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

11 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

12 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

13 hours ago