ಮಡೆನೂರು ಮನು ಜೀವನದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಏನೇನೋ ಆಗಿಹೋಯ್ತು. ಮನು ನಾಯಕನಾಗಿ ನಟಿಸಿದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಬಿಡುಗಡೆಯ ಹಿಂದಿನ ದಿನ ಅತ್ಯಾಚಾರ ಆರೋಪ ಹೊತ್ತು, ಮನು ಜೈಲು ಪಾಲಾಗಿದ್ದರು. ಸಾಲದ್ದಕ್ಕೆ ಶಿವರಾಜಕುಮಾರ್, ದರ್ಶನ್ ಮತ್ತು ಧ್ರುವ ಸರ್ಜಾ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂಬ ಕಾರಣಕ್ಕೆ ಚಿತ್ರರಂಗದಿಂದ ಬಹಿಷ್ಕೃತರಾದರು.
ಇದೀಗ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಅವರು ರಾಜಿಯಾಗಿದ್ದಾರೆ. ಇನ್ನು, ಅವರ ಮೇಲೆ ಹಾಕಿದ್ದ ನಿಷೇಧವನ್ನು ಚಿತ್ರರಂಗ ತೆಗೆದಿದ್ದು, ಶಿವರಾಜಕುಮಾರ್ ಸಹ ಕ್ಷಮಿಸಿ ಕಳಿಸಿದ್ದಾರೆ. ಇದೆಲ್ಲದರಿಂದ, ಮನು ಮತ್ತೊಮ್ಮೆ ಚಿತ್ರಗಳಲ್ಲಿ ನಟಿಸುವುದಕ್ಕೆ ಸ್ವತಂತ್ರವಾಗಿದ್ದು, ಅವರ ಹೊಸ ಚಿತ್ರವೊಂದು ಸದ್ಯದಲ್ಲೇ ಶುರುವಾಗಲಿದೆ.
ಇದನ್ನು ಓದಿ : ಮೈಸೂರು: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್ ರ್ಯಾಲಿ
ಇತ್ತೀಚೆಗೆ ಮನು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಅವರ ಹೊಸ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ. ಈ ಚಿತ್ರಕ್ಕೆ ‘ಮುತ್ತರಸ’ ಎಂಬ ಹೆಸರಿಡಲಾಗಿದ್ದು, ಈ ಚಿತ್ರವನ್ನು ಜೆ.ಕೆ. ಮೂವೀಸ್ ಲಾಂಛನದಲ್ಲಿ ಕೆ.ಎಂ. ನಟರಾಜ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಹಿಂದೆ ಮನು ಅಭಿನಯದ ‘ಕೇದರನಾಥ್ ಕುರಿ ಫಾರಂ’ ಚಿತ್ರವನ್ನು ನಟರಾಜ್ ನಿರ್ಮಿಸಿದ್ದರು.
ವಸಿಷ್ಠ ಸಿಂಹ, ಹಿರಿಯ ನಟರಾದ ಎಂ.ಎಸ್.ಉಮೇಶ್, ಕರಿಸುಬ್ಬು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ, ಮಡೆನೂರ್ ಮನು ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು. ಪದ್ಮಶ್ರೀ ಪುರಸ್ಕೃತರಾದ ಮಂಜಮ್ಮ ಜೋಗತಿ ಶೀರ್ಷಿಕೆ ಅನಾವರಣ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮನು, ‘ಕೆಲವು ದಿನಗಳ ಹಿಂದೆ ನನ್ಮ ಜೀವನದಲ್ಲಿ ಆದ ಕಹಿ ಘಟನೆಗಳನ್ನೆಲ್ಲಾ ಮರೆತಿದ್ದೇನೆ. ಸದ್ಯಕ್ಕೆ ಯಾವುದೇ ಸಮಸ್ಯೆಗಳು ಇಲ್ಲ. ಆ ಸಮಯದಲ್ಲಿ ನನ್ನ ಜೊತೆಗೆ ನಿಂತವರಿಗೆ ನಾನು ಚಿರಋಣಿ. ಇಂದು ನನ್ನ ಹೊಸ ಸಿನಮಾದ ಶೀರ್ಷಿಕೆ ಬಿಡುಗಡೆಯಾಗಿದೆ. ‘ಮುತ್ತರಸ’ ಚಿತ್ರದ ಶೀರ್ಷಿಕೆ ಕೊಟ್ಟದ್ದು ನಿರ್ದೇಶಕ ರಾಮ್ ನಾರಾಯಣ್. ಮುಂದಿನ ತಿಂಗಳಿನಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ನಿರ್ದೇಶಕರು ಯಾರು? ತಾರಾಬಳಗದಲ್ಲಿ ಯಾರಿದ್ದಾರೆ? ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ’ ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…