ಮನರಂಜನೆ

ಚಿತ್ರರಂಗ, ಕಿರುತೆರೆಯ ಚಟುವಟಿಕೆಗಳಲ್ಲಿ ಮನು ಭಾಗವಹಿಸುವಂತಿಲ್ಲ : ಚೇಂಬರ್‌ ತೀರ್ಮಾನ

ಹಲವು ಆರೋಪಗಳನ್ನು ಹೊತ್ತಿರುವ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಆರೋಪ ಮುಕ್ತನಾಗುವವರೆಗೂ ಅವರಿಗೆ ಸಹಕಾರ ನೀಡಬಾರದೆಂದು ಕನ್ನಡ ಚಿತ್ರರಂಗ ತೀರ್ಮಾನಿಸಿದೆ. ಅಲ್ಲಿಗೆ, ಮನು ಸದ್ಯಕ್ಕೆ ಕನ್ನಡ ಚಿತ್ರರಂಗದ ಮತ್ತು ಕಿರುತೆರೆಯ ಯಾವುದೇ ಚಟುವಟಿಕೆಗಳಲ್ಲೂ ಭಾಗವಹಿಸುವಂತಿಲ್ಲ.

ಇತ್ತೀಚೆಗೆ, ನಟರಾದ ಶಿವರಾಜಕುಮಾರ್‌, ದರ್ಶನ್‍ ಮತ್ತು ಧ್ರುವ ಸರ್ಜಾ ವಿರುದ್ಧ ಮನು ಅವಹೇಳನಕಾರಿ ಟೀಕೆಗಳನ್ನು ಮಾಡಿದ್ದಾರೆ ಎಂದು ಹೇಳಲಾಗಿತ್ತು. ಮನು ಅವರದ್ದು ಎನ್ನಲಾದ ಆಡಿಯೋ ಕ್ಲಿಪ್‍ವೊಂದು ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ಆಡಿಯೋದಲ್ಲಿ ಮನು, ‘ಶಿವರಾಜಕುಮಾರ್‌ ಇನ್ನೊಂದಾರು ವರ್ಷಗಳಲ್ಲಿ ಸತ್ತೋಗ್ತಾನೆ. ಧ್ರುವ ಸರ್ಜಾ ಇನ್ನೊಂದು ಎಂಟು ವರ್ಷ ಇರಬಹುದು. ದರ್ಶನ್‍ ಸತ್ತೋದ. ದರ್ಶನ್‍ಗೆ ಇನ್ನೊಂದು ಆರು ವರ್ಷ ಕ್ರೇಜ್ ಇರುತ್ತದೆ. ಆದರೆ, ಸಿನಿಮಾ ಮಾಡಲ್ಲ. ಈ ಮೂರು ಜನರ ಮಧ್ಯೆ ಕಾಂಪಿಟೇಷನ್‍ ಕೊಡೋಕೆ ಬಂದಿರೋ ಗಂಡುಗಲಿ ರೀ ನಾನು’ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಯಾವಾಗ ಈ ಆಡಿಯೋ ವೈರಲ್‍ ಆಯಿತೋ, ಆಗ ದರ್ಶನ್‍, ಶಿವರಾಜಕುಮಾರ್ ‍ಮತ್ತು ಧ್ರುವ ಸರ್ಜಾ ಅಭಿಮಾನಿಗಳು, ತಮ್ಮ ಮೆಚ್ಚಿನ ನಟರ ಬಗ್ಗೆ ಮನು ಹೀಗೆ ಮಾತನಾಡಿದ್ದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಮನು ಅವರನ್ನು ಚಿತ್ರರಂಗದಿಂದ ಬ್ಯಾನ್‍ ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚಿತ್ರರಂಗದ ಎಲ್ಲಾ ವಲಯಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ಮನು ಅವರು ಎಲ್ಲಾ ಪ್ರಕರಣಗಳಿಂದಲೂ ಮುಕ್ತರಾಗುವವರೆಗೂ ಅವರಿಗೆ ಸಹಕಾರ ನೀಡಬಾರದು ಎಂದು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಭೆಯ ನಂತರ ಈ ಕುರಿತು ಮಾತನಾಡಿರುವ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು, ‘ಮನು ಅವರದ್ದು ದುರಹಂಕಾರದ ವರ್ತನೆಯಾಗಿದ್ದು, ಅವರಿಗೆ ಯಾವುದೇ ರೀತಿಯ ಸಹಕಾರ ಕೊಡಬಾರದು ಎಂದು ಸಭೆಯಲ್ಲಿ ತೀರ್ಮಾನವಾಗಿದೆ. ಮೊದಲು ಈ ಆಡಿಯೋ ಕುರಿತು ವಾಣಿಜ್ಯ ಮಂಡಳಿ ವತಿಯಿಂದ ಕಮಿಷನರ್‍ ಅವರಿಗೆ ದೂರು ಕೊಡುತ್ತಿದ್ದೇವೆ. ಸೋಷಿಯಲ್‍ ಮೀಡಿಯಾದಲ್ಲಿ ವೈರಲ್‍ ಆಗಿರುವ ಆಡಿಯೋದಲ್ಲಿರುವ ಧ್ವನಿ ಮನು ಅವರದ್ದೇನಾ? ಎಂಬುದನ್ನು ಪೊಲೀಸರು ತನಿಖೆ ಮಾಡಬೇಕು. ಈಗಾಗಲೇ ಅವರ ಮೇಲೆ ಹಲವು ಪ್ರಕರಣಗಳಿವೆ. ಎಲ್ಲಾ ಪ್ರಕರಣಗಳಿಂದ ಮುಕ್ತವಾಗುವವರೆಗೂ ಸಹಕಾರ ಕೊಡಬಾರದು ಎಂದು ತೀರ್ಮಾನವಾಗಿದೆ. ಅವರು ಚಿತ್ರರಂಗ, ಕಿರುತೆರೆ ಸೇರಿದಂತೆ ಯಾವುದೇ ರೀತಿಯ ಚಟವಟಿಕೆಗಳಲ್ಲೂ ಭಾಗವಹಿಸುವ ಹಾಗಿಲ್ಲ’ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

5 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

5 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

5 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

5 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

5 hours ago