ಮನರಂಜನೆ

‘ಕುಲದಲ್ಲಿ ಕೀಳ್ಯಾವುದೋ’ ಅಂತಿದ್ದಾರೆ ಮಡೆನೂರು ಮನು!

ಈಗಾಗಲೇ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕೇದಾರನಾಥ್‍ ಕುರಿ ಫಾರಂ’ ಎಂಬ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಮಧ್ಯೆ, ಅವರ ಇನ್ನೊಂದು ಚಿತ್ರ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ.

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಚಿತ್ರೀಕರಣ ಶುರುವಾಗುತ್ತಿರುವುದು ಈಗಾದರೂ, ಸಂಕ್ರಾಂತಿ ಹಬ್ಬದಂದು ಮುಹೂರ್ತವಾಗಿತ್ತು. ಯೋಗರಾಜ್‍ ಭಟ್‍ ನಿರ್ಮಾಣದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಮಡೆನೂರು ಮನುಗೆ ನಾಯಕಿಯಾಗಿ ಮೌನ ಗುಡ್ಡೆಮನೆ ನಟಿಸುತ್ತಿದ್ದಾರೆ.

ಚಿತ್ರ ಪ್ರಾರಂಭವಾದಾಗ ನಿರ್ದೇಶಕರಾಗಿದ್ದವರು ಯೋಗರಾಜ್‍ ಭಟ್‍ ಶಿಷ್ಯ ಶ್ರೇಯಸ್‍ ರಾಜ್‍ ಶೆಟ್ಟಿ. ಆದರೆ, ಈಗ ನಿರ್ದೇಶಕರು ಬದಲಾಗಿದ್ದಾರೆ. ಶ್ರೇಯಸ್‍ ರಾಜ್‍ ಶೆಟ್ಟಿ ಬದಲು, ಈಗ ಆ ಸ್ಥಾನಕ್ಕೆ ಚಿತ್ರಸಾಹಿತಿ ಕಂ ನಿರ್ದೇಶಕರಾದ ಕೆ. ರಾಮ್‍ನಾರಾಯಣ್‍ ಬಂದಿದ್ದಾರೆ. ಇನ್ನು, ಈ ಚಿತ್ರಕ್ಕೆ ಯೋಗರಾಜ್‍ ಭಟ್‍ ಅವರ ಮತ್ತೊಬ್ಬ ಶಿಷ್ಯ ಯೋಗಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದರು. ಚಿತ್ರದ ಕಥೆಯು 70ರ ದಶಕದ ಕಾಲಘಟ್ಟದಲ್ಲಿ ನಡೆಯಲಿದೆ ಎಂದು ಹೇಳಲಾಗಿತ್ತು. ಈಗ ಶೀರ್ಷಿಕೆ ಅದೇ ಇದ್ದರೂ, ಕಥೆ ಮತ್ತು ನಿರ್ದೇಶಕರು ಬದಲಾಗಿದ್ದಾರೆ. ಈಗ ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ.ಕೆ ಮತ್ತು ವಿದ್ಯಾ ನಿರ್ಮಿಸುತ್ತಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಫಸ್ಟ್ ಲುಕ್ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಸಕಲೇಶಪುರ, ಹಾಸನ, ರಾಮನಗರ, ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ.

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಮಡೆನೂರು ಮನು, ಮೌನ ಗುಡ್ಡೆಮನೆ, ರಂಗಾಯಣ ರಘು, ದಿಗಂತ್, ಶರತ್ ಲೋಹಿತಾಶ್ವ, ಸೋನಾಲ್ ಮೊಂತೆರೊ ಮುಂತಾದವರು ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

59 mins ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

2 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

2 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

2 hours ago

ಡಿ.16 ರಂದು ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಭದ್ರತಾ ವ್ಯವಸ್ಥೆ ಪರಿಶೀಲನೆ

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

2 hours ago

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

2 hours ago